ಹರ್ ಘರ್ ಜಲೋತ್ಸವ ಆಚರಣೆ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಅನುಷ್ಠಾನ:ಜಿಪಂ ಸಿಇಒ ಜಿ.ಲಿಂಗಮೂರ್ತಿ

0
103

ಬಳ್ಳಾರಿ,ಆ.10 : ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಮೂಲಕ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರನ್ನು ಒದಗಿಸುವ ಜಲ ಜೀವನ್ ಮಿಷನ್ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಪಂನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜಿ.ಲಿಂಗಮೂರ್ತಿ ಅವರು ಹೇಳಿದರು.
ಜಿಲ್ಲಾ ಪಂಚಾಯತ್,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ
ಜಲ ಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳ ಕಂದಾಯ ಗ್ರಾಮಗಳಲ್ಲಿ ಹರ್ ಘರ್ ಜಲೋತ್ಸವ ಆಚರಿಸಲು ಮಾಹಿತಿ, ಶಿಕ್ಷಣ ಹಾಗೂ ಸಂವಹನ ಚಟುವಟಿಕೆಯಾದ “ಆಟೋ ಪ್ರಚಾರ” ವಾಹನಕ್ಕೆ ಜಿಪಂ ಕಚೇರಿಯಲ್ಲಿ ಬುಧವಾರದಂದು ಚಾಲನೆ ನೀಡಿ ಮಾತನಾಡಿದರು.

ಗ್ರಾಮೀಣ ಭಾಗದ ಜನರಿಗೆ ನೀರು ಮತ್ತು ನೈರ್ಮಲ್ಯದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಟೋ ಮೂಲಕ ಜಲ ಜೀವನ್ ಮಿಷನ್ ಯೋಜನೆಯ ಮಾಹಿತಿಯ ಪ್ರಚಾರವನ್ನು ಆಂದೋಲನಗಳ ಮೂಲಕ ಅನುಷ್ಠಾನಗೊಳಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳು ಗ್ರಾಮೀಣ ಭಾಗದ ಜನರಿಗೆ ಅವಶ್ಯಕವಾಗಿವೆ ಹಾಗೂ ಕಳೆದ ಸಾಲಿನಲ್ಲಿ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿ ಮುಕ್ತಾಯವಾಗಿರುವ ಗ್ರಾಮಗಳಲ್ಲಿ ಹರ್ ಘರ್ ಜಲ್ ಗ್ರಾಮ ಎಂತಲೂ ಮತ್ತು ಗ್ರಾಮ ಪಂಚಾಯಿತಿಗಳನ್ನು ಗ್ರಾಮಸಭೆಯ ಮುಂಖಾತರ ಘೋಷಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಪಂನ ಮುಖ್ಯ ಯೋಜನಾಧಿಕಾರಿಗಳು, ಯೋಜನಾ ನಿರ್ದೇಶಕರು ಮತ್ತು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗದ ಎಂಜನಿಯರ್‍ಗಳು, ಸ್ವಚ್ಚ ಭಾರತ್ ಮಿಷನ್‍ನ ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಸಂಯೋಜಕರು, ಅನುಷ್ಠಾನ ನೆರವು ಸಂಸ್ಥೆಯ ಅಧ್ಯಕ್ಷರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here