ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಿ;ಶಿವಪ್ರಸಾದ್

0
201

ಕೊಟ್ಟೂರು:ಆಗಸ್ಟ್:11:-ವಿದ್ಯಾರ್ಥಿಗಳು ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕೆಂದು ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕ ಹಾಗೂ ವಿಜ್ಞಾನಿ ಪ್ರೊ. ಎಸ್.ಎಂ.ಶಿವಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಕೊಟ್ಟೂರೇಶ್ವರ ಪದವಿ ಮಹಾವಿದ್ಯಾಲಯದ ಡಾ.ಎಚ್.ಜಿ.ರಾಜ್ ಸಭಾಭವನದಲ್ಲಿ ವಿಜ್ಞಾನ ವೇದಿಕೆಯಿಂದ ಗುರುವಾರ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವಿಜ್ಞಾನವೇ ಸುಂದರ ಎಂಬ ವಿಷಯದ ಬಗ್ಗೆಮಾತನಾಡಿದರು.

ವಿಜ್ಙಾನ ಎಂಬುದು ಸತ್ಯವಾದ ಮತ್ತು ಸುಂದರವಾದ ವಿಷಯವಾಗಿದೆ. ವಿದ್ಯಾರ್ಥಿಗಳು ಕೇವಲ ಪಠ್ಯಕ್ರಮಕ್ಕೆ ಸೀಮಿತವಾಗದೇ ಅದರಾಚೆಗೂ ವ್ಯಾಪಕ ಕಲಿಕೆಗೆ ಒತ್ತು ನೀಡುವ ದಿಸೆಯಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿಯಾಗಿದೆ ಎಂದರು. ವಿದ್ಯಾರ್ಥಿಗಳನ್ನು ವೈಜ್ಞಾನಿಕ ಚಿಂತನೆಗೆ ಪ್ರಚೋದಿಸುವ ಹಾಗೂ ಮೂಲ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವಲ್ಲಿ ಉಪನ್ಯಾಸಕರ ಪಾತ್ರ ಮುಖ್ಯವಾಗಿದೆ ಎಂದರು..

ಸಂಸದ ವೈ.ದೇವೇಂದ್ರಪ್ಪ ಮಾತನಾಡಿ ಭಾರತವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ದಾಪುಗಾಲು ಇಡುವಲ್ಲಿ ವಿಜ್ಞಾನಿಗಳ ಕೊಡುಗೆ ಅಪಾರವಾಗಿದೆ ಎಂದರು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿದ್ಧರಾಮ ಕಲ್ಮಠ್ ಉದ್ಘಾಟಿಸಿ ಮಾತನಾಡಿದರು. ಪ್ರಾಂಶುಪಾಲ ಶಾಂತಮೂರ್ತಿ ಬಿ. ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಘಟಕಾಧ್ಯಕ್ಷ ಪಿ.ಚನ್ನಬಸವನಗೌಡ, ಆಡಳಿತ ಮಂಡಳಿ ಸದಸ್ಯರಾದ ಎಸ್.ಎಂ.ಗುರುಪ್ರಸಾದ್ , ಅಡಿಕೆ ಮಂಜುನಾಥ್, ಪ್ರಾಂಶುಪಾಲ ಎಂ.ಎಚ್. ಪ್ರಶಾಂತಕುಮಾರ್ ,ಪ್ರಾಧ್ಯಾಪಕರಾದ ರವಿಕುಮಾರ, ಸಿ.ಬಸವರಾಜ್, ಕೃಷ್ಣಪ್ಪ, ರವೀಂದ್ರಗೌಡ, ಸಿದ್ಧನಗೌಡ, ಸಿದ್ದನಗೌಡ, ಶಾಂಭವಿ, ಕುಸುಮಸಜ್ಜನ್, ವಿಜಯಲಕ್ಷ್ಮಿ ಸಜ್ಜನ್ ಮುಂತಾದವರು ಪಾಲ್ಗೊಂಡಿದ್ದರು.

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here