ಶಾಂತಿ,ಸೌಹಾರ್ದತೆಯಿಂದ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ:ಸಿಪಿಐ ಸೋಮಶೇಖರ ಕೆಂಚಾರೆಡ್ಡಿ

0
277

ಕೊಟ್ಟೂರು:ಆಗಸ್ಟ್:27:- ಗಣೇಶೋತ್ಸವವು ಸಾರ್ವಜನಿಕವಾಗಿ ಆಚರಿಸುವ ಹಬ್ಬವಾಗಿದೆ. ಶಾಂತಿ, ಸೌಹಾರ್ದತೆ ಕಾಪಾಡುವ ಜೊತೆಗೆ ಪರಿಸರ ಸ್ನೇಹಿ ಮಣ್ಣಿನ ಗಣೇಶ ಸ್ಥಾಪಿಸಿ ಹಬ್ಬವನ್ನು ಆಚರಿಸಬೇಕೆಂದು ಸಿಪಿಐ ಸೋಮಶೇಖರ ಕೆಂಚಾರೆಡ್ಡಿ
ಹೇಳಿದರು.

ಕೊಟ್ಟೂರು ಪೊಲೀಸ್ ಠಾಣೆಯ ಆವರಣ ಪಕ್ಕದಲ್ಲಿ ಕೂಡ್ಲಿಗಿ ಉಪ ವಿಭಾಗ ಹಾಗೂ ಕೊಟ್ಟೂರು ಪೊಲೀಸ್ ಇಲಾಖೆ ವತಿಯಿಂದ ಗೌರಿ ಗಣೇಶ ಚತುರ್ಥಿ ಪ್ರಯುಕ್ತ ಆಯೋಜಿಸಲಾಗಿದ್ದ ‘ನಾಗರಿಕ ಸೌಹಾರ್ದ ಸಮನ್ವಯ ಸಭೆ’ಯ ಅಧ್ಯಕ್ಷತೆ ವಹಿಸಿ ಪಿಎಸ್ಐ ವಿಜಯ್ ಕೃಷ್ಣ ಅವರು ಮಾತನಾಡಿದರು.
ಗಣೇಶೋತ್ಸವ ಆಚರಿಸುವ ಸಂಘ-ಸಂಸ್ಥೆಗಳು ಸರ್ಕಾರದ ಸುತ್ತೋಲೆಯ ಅಂಶಗಳನ್ನು ಪಾಲಿಸುವ ಮೂಲಕ ಹಬ್ಬವನ್ನು ಆಚರಿಸಬೇಕು. ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು.

ಹಿಂದಿನ ವರ್ಷಗಳಲ್ಲಿ ನಡೆದಂತೆ ಪ್ರಸಕ್ತ ವರ್ಷದಲ್ಲಿ ಕೂಡ ಶಾಂತಿಯುತವಾಗಿ ಮತ್ತು ಸೌಹಾರ್ದತೆಯಿಂದ ಹಬ್ಬ ಆಚರಿಸಲು ಮುಂದಾಗಬೇಕು ಎಂದರು. ಆಯೋಜಕರು ನಿಗದಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸಿ ಪರವಾನಿಗೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಿಪಿಐ ಸೋಮಶೇಖರ ಕೆಂಚಾರೆಡ್ಡಿ ಮಾತನಾಡಿ, ಪರವಾನಿಗೆ ಪಡೆಯದೆ ಗಣೇಶ ಪ್ರತಿಷ್ಠಾಪಿಸಲು ಅವಕಾಶ ಇಲ್ಲ. ಆದ್ದರಿಂದ ಆಯೋಜಕರು ಕಡ್ಡಾಯವಾಗಿ ಪರವಾನಿಗೆ ಪಡೆಯಬೇಕು. ಫ್ಲೆಕ್ಸ್ ಬಳಕೆಗೆ ಪಟ್ಟಣ ಪಂಚಾಯಿತಿ ವತಿಯಿಂದ ಅನುಮತಿ ಪಡೆಯದೆ ಅಳವಡಿಸಬಾರದು. ವಿಸರ್ಜನೆ ಸ್ಥಳದಲ್ಲಿ ಈಜು ಬಾರದವರು ನೀರಿಗೆ ಇಳಿಯಬಾರದು, ಈಜು ಬರುವವರಿಗೆ ಮಾತ್ರ ಇಳಿಯಲು ಅವಕಾಶ ನೀಡಬೇಕು ಎಂದರು.

ಸರ್ಕಾರದ ಎಲ್ಲ ನಿಯಮಗಳನ್ನು ಪಾಲಿಸುವ ಜವಾಬ್ದಾರಿ ಸಮಿತಿ ಮೇಲೆ ಇರುತ್ತದೆ ಎಂದರು.
ಬೃಹತ್ ಗಣಪತಿ ಪ್ರತಿಷ್ಠಾಪಿಸುವ ಸಂಘ-ಸಂಸ್ಥೆಗಳು ಮೆರವಣಿಗೆ ಮಾರ್ಗದಲ್ಲಿ ವಿದ್ಯುತ್ ಲೈನ್, ಮರಗಳ ಕುರಿತು ಪೂರ್ವ ವೀಕ್ಷಣೆ ನಡೆಸಬೇಕು. ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾದಾಗ ಸಮಸ್ಯೆಗಳು ಉದ್ಭವಿಸುವ ಸಂಭವವಿರುತ್ತದೆ, ಆದ್ದರಿಂದ ಪರ್ಯಾಯವಾಗಿ ಜನರೇಟರ್ ಅನ್ನು ಬಳಕೆ ಮಾಡಬೇಕು. ಜವಾಬ್ದಾರಿತಯುತ ಸ್ವಯಂ ಸೇವಕರನ್ನು ನೇಮಿಸಿ ಅವರಿಗೆ ಗುರುತಿನ ಚೀಟಿ ನೀಡಬೇಕು ಹಾಗೂ ಅವರ ಪಟ್ಟಿಯನ್ನು ಪೊಲೀಸ್ ಇಲಾಖೆಗೆ ಸಲ್ಲಿಸಬೇಕು. ವಿಜಯನಗರ ಜಿಲ್ಲೆಯ ಆದೇಶದಂತೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ನಿಗದಿ ಪಡಿಸಿದ ಡೆಸಿಬಲ್ ಹೊಂದಿರುವ ಧ್ವನಿವರ್ಧಕಗಳನ್ನು ಬಳಸಲು ಅವಕಾಶವಿದೆ. ಈ ಕುರಿತು ಸಮಿತಿಯವರು ಸಹಕಾರ ನೀಡಬೇಕು ಎಂದು ಹೇಳಿದರು.

ಪರಿಸರ ಮಾಲಿನ್ಯ ನಿಯಂತ್ರ, ಸಾಧ್ಯವಾದಷ್ಟು ಪರಿಸರ ಸ್ನೇಹಿ ಮಣ್ಣಿನ ಗಣಪತಿ ಪ್ರತಿಷ್ಠಾಪಿಸಬೇಕು. ಸುಪ್ರೀಂ ಕೋರ್ಟ್ ಆದೇಶದನ್ವಯ ಧ್ವನಿವರ್ಧಕಗಳನ್ನು ಬಳಸಲು ಅವಕಾಶವಿದೆ. ಪ್ಲಾಸ್ಟಿಕ್ ಹಾಗೂ ಥರ್ಮಾಕೋಲ್ ಬಳಸದೆ ಪರಿಸರ ಕಾಳಜಿ ಮೆರೆಯುವ ಮೂಲಕ ಗಣೇಶ ಹಬ್ಬವನ್ನು ಆಚರಣೆ ಮಾಡೋಣ ಎಂದರು.
ಗಣೇಶ್ ಹಬ್ಬ ಆಚರಣೆ ಸಂದರ್ಭದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಜೊತೆಗೆ ಪರಿಸರ ಕಾಳಜಿಯೂ ಮುಖ್ಯ. ಗಣೇಶ ವಿಸರ್ಜನೆಗೆ ರಸ್ತೆಗಳಲ್ಲಿ ತಾತ್ಕಾಲಿಕ ಬಾವಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಮನೆಗಳಲ್ಲಿ ಪ್ರತಿಷ್ಠಾಪಿಸುವ ಗಣಪತಿ ವಿಸರ್ಜನೆಗೆ ಮೂಲಕ ವಿಸರ್ಜನೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಾಗಿ ಗಣಪತಿ ಪ್ರತಿಷ್ಠಾಪಿಸಿರುವ ಕಡೆಗಳಲ್ಲಿ ವಿಸರ್ಜನೆಗಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ , ಜೆಸ್ಕಾಂ ಅಧಿಕಾರಿಗಳು, ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಸಿಪಿಐ ಸೋಮಶೇಖರ್ ಕೆಂಚಾರೆಡ್ಡಿ, ಪಿಎಸ್ಐ ವಿಜಯ ಕೃಷ್ಣ, ಕ್ರೈಂ ಪಿಎಸ್ಐ ವಡಕಪ್ಪ, ಉಪಾ ತಹಶೀಲ್ದಾರ್ ನಾಗರಾಜ್, ಕೆಇಬಿ ಚೇತನ್ ಕುಮಾರ್, ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಕೊಟ್ಟೂರು ಸುತ್ತಮುತ್ತಲಿನ ಬೆನಕನಹಳ್ಳಿ, ಸುಂಕದಕಲ್ಲು, ನಡುಮಾವಿನಹಳ್ಳಿ, ಹಾರಕನಾಳು, ತೂಲಹಳ್ಳಿ, ಹನುಮನಹಳ್ಳಿ, ಜಾಗಟಗೇರಿ, ನಾಗರಕಟ್ಟೆ. ಕೆ ಅಯ್ಯನಹಳ್ಳಿ. ಚಪ್ಪರದಹಳ್ಳಿ. ಗ್ರಾಮಗಳ ಪ್ರಮುಖ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. ಮತ್ತು ಕೊಟ್ಟೂರಿನ ಕರವೇ ಅಧ್ಯಕ್ಷ ಎಂ ಶ್ರೀನಿವಾಸ್.ಪ ಪಂ ಮಾಜಿ ಸದಸ್ಯ ಚಿರಿಬಿ ಕೊಟ್ರೇಶ್, ವಕೀಲರ ಹನುಮಂತಪ್ಪ, ಬದ್ದಿ ಮರಿಸ್ವಾಮಿ, ದುರ್ಗೇಶಪ್ಪ, ಅಂಬರೀಶ್, ಬಾರಿಕರ ಬಸವರಾಜ್, ಪ್ರಮುಖ ಮುಖಂಡರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here