ಗಣೇಶ ಹಬ್ಬದ ಪ್ರಯುಕ್ತ ಮಧ್ಯಮಾರಾಟ ನಿಷೇಧ

0
292

ಕೊಟ್ಟೂರು:ಆಗಸ್ಟ್:30:-
ವಿಜಯನಗರ ಜಿಲ್ಲೆಯಾದ್ಯಂತ ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಹಾಗೂ ಗಣೇಶ ಮೂರ್ತಿಯ ವಿಸರ್ಜನೆಯ ಮೆರವಣಿಗೆಯ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ , ಹಾಗೂ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಪರಿಣಾಮಕಾರಿಯಾಗಿ ನೆರವೇರುವ ಉದ್ದೇಶದಿಂದ ಮಧ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಮಧ್ಯದಂಗಡಿ, ಬಾರ್, ರೆಸ್ಟೋರೆಂಟ್ ಮತ್ತು ಇತರೆ ಸ್ಥಳಗಳಲ್ಲಿ ಮದ್ಯದಂಗಡಿಗಳನ್ನು ಮುಚ್ಚುವಂತೆ ಮಾನ್ಯ ಜಿಲ್ಲಾಧಿಕಾರಿಗಳು, ವಿಜಯನಗರ ಜಿಲ್ಲೆ, ಹೊಸಪೇಟೆ ಇವರು ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ವಿಜಯನಗರ ಜಿಲ್ಲೆ ಇವರ ಕೋರಿಕೆಯಂತೆ ನಿಷೇದಾಜ್ಞೆಯನ್ನು ಹೊರಡಿಸಿರುತ್ತಾರೆ.

ಕಾರಣ ಕೊಟ್ಟೂರು ತಾಲೂಕಿನಲ್ಲಿ ದಿನಾಂಕ: ದಿನಾಂಕ: 31.08.2022 ರ ಬೆಳಿಗ್ಗೆ 6.30 ಗಂಟೆಯಿಂದ ದಿನಾಂಕ 05.09.2022ರ ಬೆಳಿಗ್ಗೆ 6.00 ಗಂಟೆಯವರೆಗೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಪ್ರಕಾರ ಗಣೇಶ ಹಬ್ಬದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ, ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಮಧ್ಯದ ಅಂಗಡಿಗಳನ್ನು ಮುಚ್ಚುವಂತೆ ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದು, ಮದ್ಯಮಾರಾಟಗಾರರು ಹಾಗೂ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಆದೇಶವನ್ನು ಪಾಲಿಸಿ ಸಹಕರಿಸಲು ಹಾಗೂ ಯಾರಾದರೂ ಸದರಿ ನಿಷೇದಾಜ್ಞೆಯನ್ನು ಉಲ್ಲಂಘಿಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮಕೈಗೊಳ್ಳಲಾಗುವುದು. ಇದಕ್ಕೆ ಅವಕಾಶ ನೀಡದೇ ಸಾರ್ವಜನಿಕರು ಗಣೇಶ ಹಬ್ಬವನ್ನು ಶಾಂತಿ ಮತ್ತು ಸೌಹಾರ್ಧಯುತವಾಗಿ ಆಚರಿಸಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಂತೆ ಕೊಟ್ಟೂರು ತಹಶೀಲ್ದಾರರಾದ ಎಂ.ಕುಮಾರಸ್ವಾಮಿ ಇವರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿರುತ್ತಾರೆ.

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here