ನಾಪೋಕ್ಲು:ಪೋಷಣ್ ಅಭಿಯಾನಕ್ಕೆ ಚಾಲನೆ

0
151

ಮಡಿಕೇರಿ ಸೆ.02:-ಪೋಷಣ್ ಮಾಸಾಚರಣೆ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಹಯೋಗದೊಂದಿಗೆ ಪೋಷಣ್ ಅಭಿಯಾನದಡಿ ಪೋಷಣ್ ಮಾಸಾಚರಣೆಯ ಉದ್ಘಾಟನಾ ಕಾರ್ಯಕ್ರಮವು ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಪ್ರಸಾದ್ ಕೆ. ಬಿ. ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೌಷ್ಟಿಕತೆ ಅತಿ ಮುಖ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಮಹಿಳೆಯರಿಗೆ, ಮಕ್ಕಳಿಗೆ, ಶ್ರಮಿಕರಿಗೆ ಹೀಗೆ ಎಲ್ಲಾ ಜನರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಡಿ ಉಚಿತ ಕಾನೂನು ನೆರವು ಕಲ್ಪಿಸಲಾಗುವುದು ಎಂದರು.

ನಾಪೋಕ್ಲು ಗ್ರಾ.ಪಂ.ಸದ್ಯಸರಾದ ಆಮೀನ ಅವರು ಪೌಷ್ಟಿಕ ಆಹಾರ ಸೇವನೆಯಿಂದ ಆಗುವ ಲಾಭ ಮತ್ತು ಸ್ಥಳೀಯ ಆಹಾರ ಪದಾರ್ಥ ಬಳಸುವ ಬಗ್ಗೆ ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಮೇಲ್ವಿಚಾರಕಿ ಸವಿತ ಸಿ.ಪಿ ಅವರು ಮಾತನಾಡಿ ಸೆಪ್ಟೆಂಬರ್ ತಿಂಗಳನ್ನು ಪೋಷಣ್ ಮಾಸಾಚರಣೆಯನ್ನಾಗಿ ಆಚರಿಸುವುದರ ಬಗ್ಗೆ ತಿಳಿಸಿದರು. ಪೌಷ್ಠಿಕ ಆಹಾರದ ಅಗತ್ಯತೆ, ನೀರು ಮತ್ತು ನೈರ್ಮಲ್ಯದಡಿ ಕಾರ್ಯಕ್ರಮ ಉಪಯೋಗ ಬಗ್ಗೆ ಮಾಹಿತಿ ನೀಡಿದರು.
ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಕಲಾ ಅವರು ಪೌಷ್ಟಿಕ ಆಹಾರ ಸೇವನೆ ಮಹತ್ವ ಹಾಗೂ ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಪೌಷ್ಟಿಕ ಆಹಾರಗಳ ಪ್ರದರ್ಶನ ನಡೆಯಿತು. ಕರ್ನಾಟಕ ಪಬ್ಲಿಕ್ ಶಾಲೆಯ ಮಕ್ಕಳು, ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರೆಲ್ಲ ಸೇರಿ ಪೋಷಣ್ ಅಭಿಯಾನ ನಡೆಸಿದರು.
ಕಾರ್ಯಕ್ರಮದಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಜಾನಕಿ, ಪೆÇಷಣ್ ಅಭಿಯಾನ ಯೋಜನೆಯ ತಾಲ್ಲೂಕು ಸಂಯೋಜಕರಾದ ಸುಗುಣ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷರಾದ ಪವಿತ್ರ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಆಶಾಲತ ಹಾಗೂ ನಾಪೋಕ್ಲು ಮತ್ತು ಬಲ್ಲಮಾವಟಿ ವಲಯದ ಅಂಗನವಾಡಿ ಕಾರ್ಯಕರ್ತೆ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.

LEAVE A REPLY

Please enter your comment!
Please enter your name here