ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನದ ಅಂಗವಾಗಿ ಕಾರಾಗೃಹದ ಬಂದಿಗಳಿಗೆ ಅರಿವು ಕಾರ್ಯಕ್ರಮ

0
53

ಕಲಬುರಗಿ.ಸೆ.8.-ಕಲಬುರಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೇಂದ್ರ ಕಾರಾಗೃಹ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನದ ಅಂಗವಾಗಿ ಕಾರಾಗೃಹದ ಬಂದಿಗಳಿಗೆ ಬುಧವಾರ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಕಲಬುರಗಿ ಕೇಂದ್ರ ಕಾರಾಗೃಹದ ಅಧೀಕ್ಷಕ ಬಿ.ಎಂ. ಕೋಟ್ರೇಶ್ ಮಾತನಾಡಿ, ಕಾರಾಗೃಹದಲ್ಲಿ ಬಂದಿಗಳು ಸಾಧ್ಯವಾದಷ್ಟು ವಿವಿಧ ರೀತಿಯ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ಗ್ರಂಥಾಲಯದಲ್ಲಿರುವ ಪುಸ್ತಕಗಳನ್ನು ಓದಬೇಕು. ಅಕ್ಷರ ಆಭ್ಯಾಸ, ನಿಯಮಿತವಾಗಿ ಯೋಗ, ಧ್ಯಾನ ಮಾಡುವುದರ ಮೂಲಕ ಒಳ್ಳೆಯ ವ್ಯಕ್ತಿಯಾಗಿ ಸನ್ನಡತೆಯ ಮೇಲೆ ಇಲ್ಲಿಂದ ಬೇಗ ಬಿಡುಗಡೆ ಹೊಂದಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋರೋಗ ತಜ್ಞ ಡಾ. ಇರ್ಫಾನ್ ಹಾಗೂ ಕೇಂದ್ರ ಕಾರಾಗೃಹದ ವೈದ್ಯಾಧಿಕಾರಿ ಡಾ. ಬಸವರಾಜ ಕಿರಣಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕ ವಿ ಕೃಷ್ಣಮೂರ್ತಿ, ಡಾ. ಅಣ್ಣರಾವ್ ಪಾಟೀಲ್, ಎಲ್ಲಾ ಜೈಲರ್ ಮತ್ತು ಸಹಾಯಕ ಜೈಲರ್ ಹಾಗೂ ಆಸ್ಪತ್ರೆ ಸಿಬ್ಬಂದಿಗಳು ಪಾಲ್ಗೊಂಡರು.

ಶಿಕ್ಷಕ ನಾಗಾರಾಜ ಮುಲಗೆ ಕಾರ್ಯಕ್ರಮದ ನಿರೂಪಿಸಿದರು. ಮಹಾದೇವಿ ವಂದಿಸಿದರು.

LEAVE A REPLY

Please enter your comment!
Please enter your name here