ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ಯಾತ್ರೆಗೆ ಸ್ವಾಗತ

0
88

ಉಡುಪಿ, ಅಕ್ಟೋಬರ್ 6 : ಐತಿಹಾಸಿಕ ಕಿತ್ತೂರು ಉತ್ಸವವನ್ನು ಈ ಬಾರಿ ರಾಜ್ಯ ಮಟ್ಟದಲ್ಲಿ ಆಚರಿಸುವ ಹಿನ್ನಲೆಯಲ್ಲಿ, ರಾಜ್ಯಾದ್ಯಂತ ಸಂಚರಿಸುವ ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ಯಾತ್ರೆಯು ಇಂದು ಉಡುಪಿ ಜಿಲ್ಲೆಯನ್ನು ತಲುಪಿದ್ದು, ಉಡುಪಿ ನಗರದ ಜೋಡುಕಟ್ಟೆ ಬಳಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಜ್ಯೋತಿಗೆ ಪೂಜೆ ಸಲ್ಲಿಸಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಿ ಮೈಸೂರು ಎಲೆಕ್ಟಿçಕಲ್ ಇಂಡಸ್ಟಿಸ್ ಲಿಮಿಟೆಡ್ ಅಧ್ಯಕ್ಷ ಕೆ ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ನಗರಸಭೆಯ ಸದಸ್ಯರಾದ ರಜನಿ ಹೆಬ್ಬಾರ್, ರಶ್ಮಿ ಚಿತ್ತರಂಜನ ಭಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here