ವಿಜಯನಗರ ಜಿಲ್ಲೆಯ 108 ಗ್ರಾಮ ಒನ್ ಪ್ರಾಂಚೈಸಿಗಳು ಇದ್ದು, ಪ್ರತಿ ಪ್ರಾಂಚೈಸಿಯು ದಿನಕ್ಕೆ 1000 ಆಭಾ ಕಾರ್ಡ್ ನೊಂದಣಿಯನ್ನು ಕಡ್ಡಾಯವಾಗಿ ಮಾಡಬೇಕು: ಎಡಿಸಿ ಟಿ.ವಿ.ಪ್ರಕಾಶ್

0
132

ಹೊಸಪೇಟೆ(ವಿಜಯನಗರ),ಅ.17 : ವಿಜಯನಗರ ಜಿಲ್ಲಾದ್ಯಂತ 137 ಗ್ರಾಮ ಪಂಚಾಯಿತಿಗಳು ಇದ್ದು, 108 ಗ್ರಾಮ ಒನ್ ಪ್ರಾಂಚೈಸಿಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿ ಪ್ರಾಂಚೈಸಿಯು ದಿನಕ್ಕೆ 1000 ಆಭಾ ಕಾರ್ಡ್ ನೊಂದಣಿಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ವಿಜಯನಗರ ಅಪರ ಜಿಲ್ಲಾಧಿಕಾರಿ ಟಿ.ವಿ.ಪ್ರಕಾಶ್ ಅವರು ತಿಳಿಸಿದರು.
ಸೋಮವಾರದಂದು ಹೊಸಪೇಟೆ ತಹಶೀಲ್ದಾರ್ ಕಚೇರಿಯ ಆವರಣದಲ್ಲಿರುವ ಕೇಸ್ವಾನ್ ಕೇಂದ್ರದಲ್ಲಿ ಆಯೋಜಿಸಲಾದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ “ಆಯುμÁ್ಮನ್ ಭಾರತ್-ಆರೋಗ್ಯ ಕರ್ನಾಟಕ” ಆರೋಗ್ಯ ಸೇವೆ ಕಾರ್ಡ್‍ಗಳನ್ನು ಒದಗಿಸುವ ಕುರಿತು ಅವರು ಮಾತನಾಡಿದರು.
ಜಿಲ್ಲೆಯಾದ್ಯಂತ 13ರಿಂದ 14 ಲಕ್ಷ ಜನಸಂಖ್ಯೆಯನ್ನು ಹೊಂದಿದ್ದು, 108 ಗ್ರಾಮಒನ್ ಪ್ರಾಂಚೈಸಿಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿ ಪ್ರಾಂಚೈಸಿಯು ದಿನಕ್ಕೆ ಒಂದು ಸಾವಿರ ಆಭಾ ಕಾರ್ಡ್ ನೋಂದಣಿಯನ್ನು ಮಾಡಬೇಕು. ಇದರಿಂದ ಸುಮಾರು 15-16ದಿನಗಳಲ್ಲಿ ನಮ್ಮ ಗುರಿಯನ್ನು ಮುಟ್ಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಆಯುಷ್ಮಾನ್ ಭಾರತ್ ಯೋಜನೆಯು ಒಂದು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಬಡತನದಲ್ಲಿರುವ ಸಾರ್ವಜನಿಕರಿಗೆ ಒದಗಿಸುವುದರಿಂದ 5ಲಕ್ಷದವರೆಗೆ ಚಿಕಿತ್ಸೆಯನ್ನು ಉಚಿತವಾಗಿ ಪಡೆಯಲು ಸಹಕಾರಿಯಾಗುತ್ತದೆ. ವಿಜಯನಗರ ಜಿಲ್ಲಾದ್ಯಂತ ಪ್ರತಿಯೊಬ್ಬ ನಾಗರೀಕರಿಗೂ ಆಯುμÁ್ಮನ್ ಭಾರತ್ ಯೋಜನೆಯಡಿ ಆರೋಗ್ಯ ಕಾರ್ಡ್ ವಿತರಿಸುವ ಭಾಗವಾಗಿ ಗ್ರಾಮಒನ್‍ನ ಪ್ರಾಂಚೈಸಿದಾರರು ನ್ಯಾಯಬೆಲೆ ಅಂಗಡಿಯವರ ಸಹಕಾರದೊಂದಗೆ ಕಾರ್ಯನಿರ್ವಹಿಸಬೇಕು ಎಂದರು.
ಆಯುಷ್ಮಾನ್ ಭಾರತ್ ಯೋಜನೆಯಡಿ ಆರೋಗ್ಯ ಕಾರ್ಡ್‍ಗೆ ನೊಂದಣಿಯಾಗಿ ಕಾರ್ಡ್‍ಗಳನ್ನು ಪಡೆದುಕೊಂಡಲ್ಲಿ ಬಿಪಿಎಲ್ ಕುಟುಂಬಕ್ಕೆ 1ವರ್ಷಕ್ಕೆ ಗರಿಷ್ಠ ರೂ.5ಲಕ್ಷದವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯ ಸಿಗಲಿದ್ದು, ಎಪಿಎಲ್ ಕುಟುಂಬಕ್ಕೆ ಪಾವತಿ ಆಧಾರದ ಮೇಲೆ ಚಿಕಿತ್ಸಾ ವೆಚ್ಚದ ಶೇ.30ರಷ್ಟು ರಿಯಾಯಿತಿ ಸರ್ಕಾರದಿಂದ ಪಾವತಿ ಮತ್ತು ಎಪಿಎಲ್ ನವರಿಗೆ ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ಗರಿಷ್ಠ ರೂ.1.50ಲಕ್ಷದವರೆಗೆ ಉಚಿತ ಚಿಕಿತ್ಸೆಯ ಸೌಲಭ್ಯ ಸಿಗಲಿದೆ ಎಂದರು.
ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ ಶಾಲೆಗಳು, ಕಿತ್ತೂರುರಾಣಿ ಚೆನ್ನಮ್ಮ, ಏಕಲವ್ಯ ಶಾಲೆ ಸೇರಿದಂತೆ ವಿವಿಧ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳು ಕೂಡ ಕಡ್ಡಾಯವಾಗಿ ನೊಂದಣಿ ಮಾಡಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಬೇಕು ಎಂದು ಅವರು ತಿಳಿಸಿದರು.
ಗ್ರಾಮಒನ್ ಕೇಂದ್ರಗಳು ಮತ್ತು ನ್ಯಾಯಬೆಲೆ ಅಂಗಡಿಗಳು ಚುರುಕುತನದಿಂದ ಕೆಲಸ ಮಾಡಿದರೆ ಮಾತ್ರ ಜಿಲ್ಲೆಯು ಆಭಾ ಕಾರ್ಡ್ ನೊಂದಣಿಯಲ್ಲಿ ಪ್ರಥಮ ಸ್ಥಾನ ಗಳಿಸಲು ಸಾಧ್ಯವಾಗುತ್ತದೆ. ಆಯುμÁ್ಮನ್ ಭಾರತ್ ಕಾರ್ಡ್‍ಗಳನ್ನು ನೊಂದಣಿಯಲ್ಲಿ ಯಾವುದೇ ರೀತಿಯ ಸಮಸ್ಯೆಗಳಾದಲ್ಲಿ ಜಿಲ್ಲಾಡಳಿತಕ್ಕೆ ತಿಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.
ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರು ಮಾತನಾಡಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳು ನಡೆಯುವ ಸ್ಥಳಗಳಲ್ಲಿ, ಗ್ರಾಮ ಪಂಚಾಯತಿ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ, ಶಾಲೆ-ಕಾಲೇಜುಗಳಲ್ಲಿ ಹಾಗೂ ಗ್ರಾಮಗಳಲ್ಲಿ ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳಿಗೆ ಗ್ರಾಮಒನ್‍ನ ಪ್ರಾಂಚೈಸಿದಾರರು ಹಾಗೂ ನ್ಯಾಯಬೆಲೆ ಅಂಗಡಿಯವರು ತೆರಳಿ ಆರೋಗ್ಯ ಕಾರ್ಡ್‍ನ್ನು ವಿತರಿಸುವ ಕೆಲಸ ಮಾಡಬೇಕು ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಆರೋಗ್ಯ ಕಾರ್ಡ್ ವಿತರಿಸಲು ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದರು.
ಪ್ರತಿಯೊಂದು ಗ್ರಾಮಪಂಚಾಯಿತಿಗಳಡಿ ಬರುವ ಗ್ರಾಮಒನ್ ಕೇಂದ್ರಗಳ ಪ್ರಾಂಚೈಸಿದಾರರು ಆ ವ್ಯಾಪ್ತಿಯಲ್ಲಿ ಬರುವ ನ್ಯಾಯಬೆಲೆ ಅಂಗಡಿಯವರ ಪರಸ್ಪರ ಸಂಪರ್ಕವನ್ನು ಇಟ್ಟುಕೊಂಡು ಆರೋಗ್ಯ ಕಾರ್ಡ್‍ಗಳನ್ನು ವಿತರಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ, ಪ್ರಾಥಮಿಕ ಹಾಗೂ ಫ್ರೌಡ ಶಾಲೆಗಳಲ್ಲಿ ಎಲ್ಲಾ ಶಾಲಾ ಮಕ್ಕಳು ಮತ್ತು ಅವರ ಕುಟುಂಬದ ಸದಸ್ಯರು ಸೇರಿದಂತೆ ಆಯುμÁ್ಮನ್ ಆರೋಗ್ಯ ಕಾರ್ಡ್ ಅನ್ನು ಪಡೆಯಲು ನೊಂದಣಿ ಮಾಡಿಕೊಳ್ಳಲು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮವಹಿಸಬೇಕು ಎಂದು ಈ ಸಂದರ್ಭದಲ್ಲಿ ಅವರು ತಿಳಿಸಿದರು.
ಆಯುμÁ್ಮನ್ ಆರೋಗ್ಯ ಕಾರ್ಡ್‍ಗಳನ್ನು ಮಾಡಿಸಿಕೊಳ್ಳಲು ಆ ಶಾಲೆಗಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಒನ್ ಕೇಂದ್ರಗಳಲ್ಲಿಯೇ ನೊಂದಣಿ ಮಾಡಿಕೊಳ್ಳಬೇಕು. ಅದರಂತೆಯೇ ಜಿಲ್ಲೆಯಲ್ಲಿನ ಸರ್ಕಾರಿ, ಖಾಸಗಿ, ಅನುದಾನಿತ, ಪದವಿ ಪೂರ್ವ ಕಾಲೇಜುಗಳಲ್ಲಿಯೂ ಸಹ ಎಲ್ಲಾ ವಿದ್ಯಾರ್ಥಿಗಳು ನೊಂದಣಿ ಮಾಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರದಿಂದ ಆಯುಷ್ಮಾನ ಭಾರತ್ ಆರೋಗ್ಯ ಕಾರ್ಡ್ ನೊಂದಣಿ ಸ್ಪ್ರೇಡ್‍ಶೀಟ್ ತೆರೆಯಲಾಗುತ್ತಿದ್ದು, ಪ್ರತಿ ದಿನ ಆಭಾ ಕಾರ್ಡ್ ನೊಂದಣೆಯಾದ ಕುರಿತು ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ನೀಡಬೇಕು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಲೀಂ ಹಾಗೂ ತಾಲೂಕು ವೈದ್ಯಾಧಿಕಾರಿ ಡಾ.ಭಾಸ್ಕರ್ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಹೊಸಪೇಟೆ ತಾಲೂಕು ಪಂಚಾಯಿತಿ ಕಾರ್ಯನಿವಾಹಕ ಅಧಿಕಾರಿ ರಮೇಶ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಚಂದ್ರಶೇಖರ್, ಜಿಲ್ಲಾಧಿಕಾರಿ ಕಚೇರಿಯ ತಹಶೀಲ್ದಾರ್ ಗುರುಬಸವರಾಜ, ಹೊಸಪೇಟೆ ತಹಶೀಲ್ದಾರ್ ವಿಶ್ವಜಿತ್ ಮೆಹತಾ, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರ್ ವಿರುಪಾಕ್ಷಪ್ಪಶೆಟ್ಟಿ, ಆಹಾರ ಶಿರಸ್ತೇದಾರ್ ಹೆಚ್.ನಾಗರಾಜ, ಗ್ರಾಮಒನ್‍ನ ಜಿಲ್ಲಾ ಸಹಾಯಕರು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.

LEAVE A REPLY

Please enter your comment!
Please enter your name here