‘ಕೋಟಿ ಕಂಠ ಗಾಯನ’; ಹೆಸರು ನೋಂದಾಯಿಸಲು ಜಿಲ್ಲಾಧಿಕಾರಿ ಸೂಚನೆ

0
71

ಮಡಿಕೇರಿ ಅ.19 :-ಕನ್ನಡ ರಾಜ್ಯೋತ್ಸವ ಪ್ರಯುಕ್ತ ಜಿಲ್ಲೆಯಾದ್ಯಂತ ಇದೇ ಅಕ್ಟೋಬರ್, 28 ರಂದು ಬೆಳಗ್ಗೆ 11 ಗಂಟೆಗೆ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಹೆಸರು ನೋಂದಾಯಿಸಿಕೊಳ್ಳುವುದರ ಜೊತೆಗೆ ಇತರರಿಗೂ ನೋಂದಣಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಜಿಲ್ಲಾಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಸರ್ಕಾರದ ಆದೇಶದಂತೆ ವಿಶಿಷ್ಟವಾಗಿ ಆಚರಿಸಲು ಉದ್ದೇಶಿಸಲಾಗಿದೆ. ಆ ನಿಟ್ಟನಲ್ಲಿ ಎಲ್ಲರೂ ಹೆಸರು ನೋಂದಾಯಿಸಿಕೊಳ್ಳುವಂತೆ ಸೂಚಿಸಿದರು.
ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ ಉತ್ಸಾಹದಿಂದ ಆಚರಿಸುವ ಹಿನ್ನೆಲೆ ‘ಕೋಟಿ ಕಂಠ ಗಾಯನ’ ಆಯೋಜಿಸಲಾಗಿದೆ. ಆ ನಿಟ್ಟಿನಲ್ಲಿ ಸರ್ಕಾರ ಸೂಚಿಸಿರುವ ಗೀತೆಗಳನ್ನು ಹಾಡುವಂತಾಗಬೇಕು ಎಂದರು.
ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಆಯಾಯ ಪ್ರದೇಶ ಸ್ಥಳದಲ್ಲಿ ಸೇರಿ ‘ಕೋಟಿ ಕಂಠ ಗೀತ ಗಾಯನ’ ಏರ್ಪಡಿಸಬೇಕು ಎಂದರು.
ಶಾಲಾ-ಕಾಲೇಜುಗಳು, ವಸತಿ ಶಾಲೆಗಳು, ಸ್ನಾತಕೋತ್ತರ ಕೇಂದ್ರಗಳು, ಪ್ರವಾಸಿ ಸ್ಥಳಗಳಲ್ಲಿ ಒಟ್ಟುಗೂಡಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಯಶಸ್ಸುಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
‘ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು, ತಾ.ಪಂ.ಇಒಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಂದಾಳತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಕೋಟಿ ಕಂಠ ಗಾಯನ ಏರ್ಪಡಿಸಬೇಕು. ಆ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ಭಂವರ್ ಸಿಂಗ್ ಮೀನಾ ಅವರು ಸೂಚಿಸಿದರು.’
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ಮಾತಾಡ್ ಮಾತಾಡು ಕನ್ನಡ’ ಎಂಬ ಘೋಷ ವಾಕ್ಯದೊಂದಿಗೆ ‘ಕೋಟಿ ಕಂಠ ಗಾಯನ’ವನ್ನು ಯಶಸ್ಸುಗೊಳಿಸಲು ಸಹಕರಿಸುವಂತೆ ನಿರ್ದೇಶನ ನೀಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಅವರು ಕೋಟಿ ಕಂಠ ಗಾಯನ ಸಂಬಂಧಿಸಿದಂತೆ ಕೊಡಗು ಜಿಲ್ಲೆಗೆ ಒಂದು ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ ಗುರಿ ಇದ್ದು, ಪ್ರತಿಯೊಬ್ಬರೂ ಹೆಸರು ನೋಂದಾಯಿಸಿಕೊಳ್ಳುವಂತೆ ಕೋರಿದರು.
‘ನನ್ನ ನಾಡು-ನನ್ನ ಹಾಡು’ ಎಂಬ ಶೀರ್ಷಿಕೆಯಡಿ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರೂ ಕ್ಯೂ ಆರ್ ಕೋಡ್ ಅಥವಾ https://kannadasiri.karnataka.gov.in/kkg/public/ ಲಿಂಕ್ ಉಪಯೋಗಿಸಿಕೊಂಡು ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here