ಪೋಲಿಸ್ ಹುತಾತ್ಮರ ದಿನಾಚರಣೆ ಸಮಾಜದ ಶಾಂತಿ, ಸುವ್ಯವಸ್ಥೆ, ಕಾನೂನು ಪಾಲನೆ ಎಲ್ಲರ ಕರ್ತವ್ಯ; ಪೊಲೀಸರ ಕಾರ್ಯಗಳಿಗೆ ಸಾರ್ವಜನಿಕರ ಸಹಕಾರವು ಅಗತ್ಯ. -ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ. ಜಿ.ಶಾಂತಿ

0
99

ಧಾರವಾಡ: ಅ.21: ಸಮಾಜದ ಶಾಂತಿ, ಸುವ್ಯವಸ್ಥೆ ಮತ್ತು ಕಾನೂನು ಪಾಲನೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾಗರೀಕರ ಸಂರಕ್ಷಣೆ ಮತ್ತು ಸಾರ್ವಜನಿಕ ಆಸ್ತಿಯ ರಕ್ಷಕರಾದ ಪೊಲೀಸ್ ವ್ಯವಸ್ಥೆಗೆ ಸಾರ್ವಜನಿಕರು ಸಹಕಾರ ನೀಡುವುದು ಮುಖ್ಯವಾಗಿದೆ ಎಂದು ಧಾರವಾಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ. ಶಾಂತಿ ಅವರು ಹೇಳಿದರು.

ಅವರು ಇಂದು ಧಾರವಾಡ ಜಿಲ್ಲಾ ಪೆÇಲೀಸ್ ಇಲಾಖೆಯಿಂದ ಡಿ.ಎ.ಆರ್. ಆವರಣದಲ್ಲಿ ಆಯೋಜಿಸಿದ್ದ ಪೆÇಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಪೊಲೀಸ್ ಇಲಾಖೆ ಶಾಂತಿ, ಸುವ್ಯವಸ್ಥೆ ಕಾಪಾಡುವುದರೊಂದಿಗೆ ಹೊಸ ಸವಾಲುಗಳನ್ನು ಎದುರಿಸುತ್ತಿದೆ. ಸೈಬರ್ ಕ್ರೈಂ ನಂತಹ ಅಪರಾಧಗಳು ಹೆಚ್ಚುತ್ತಿವೆ. ತಮ್ಮ ಜೀವ ಪಣಕ್ಕಿಟ್ಟು ಸಾರ್ವಜನಿಕರನ್ನು ಮತ್ತು ಸಾರ್ವಜನಿಕ ಆಸ್ತಿಯನ್ನು ರಕ್ಷಿಸುವ ಕೆಲಸ ಮಾಡುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಗತ್ಯವಿರುವ ಶಸ್ತ್ರಾಸ್ತ್ರಗಳನ್ನು ಮತ್ತು ಆಧುನಿಕ ಆಯುಧಗಳನ್ನು ಪೂರೈಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಸಮಾಜದ ಶಾಂತಿ ಕಾಪಾಡುವುದು ಪೊಲೀಸರ ಕರ್ತವ್ಯ ಮಾತ್ರ ಅಲ್ಲ. ಪ್ರತಿಯೊಬ್ಬ ನಾಗರಿಕನು ಕಾನೂನು ಸುವ್ಯವಸ್ಥೆಯನ್ನು ರಕ್ಷಿಸಬೇಕು. ಕಾನೂನು ಪರಿಪಾಲನೆ, ಸಂವಿಧಾನದಲ್ಲಿ ನೀಡಿದ ಕಾನೂನಿನ ಹಕ್ಕಿಗೆ ಅನುಗುಣವಾಗಿ ಕರ್ತವ್ಯವನ್ನು ನಿರ್ವಹಿಸಬೇಕು. ಪೆÇಲೀಸರೊಂದಿಗೆ ನಾಗರಿಕರು ಸಹಕರಿಸಿದಾಗ ಮಾತ್ರ ದೇಶದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವುದಕ್ಕೆ ಸಾಧ್ಯ ಎಂದು ಅವರು ಹೇಳಿದರು.

ಸಾರ್ವಜನಿಕರ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುವಾಗ ಪ್ರಾಣ ಕಳೆದುಕೊಂಡ ಪೊಲೀಸ್ ಸಿಬ್ಬಂದಿಗೆ ಆರ್ಥಿಕ ನೆರವು ನೀಡುವುದು ಮಾತ್ರ ಪರಿಹಾರವಲ್ಲ. ಪ್ರಾಣ ಕಳೆದುಕೊಂಡ ಯೋಧನ ಕುಟುಂಬಕ್ಕೆ ಆಸರೆಯಾಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

ಪೆÇಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಮಾತನಾಡಿ, ಪ್ರತಿ ವರ್ಷ ಪೆÇಲೀಸ್ ಸಂಸ್ಮರಣ ದಿನವನ್ನು ಅಕ್ಟೋಬರ್ 21 ರಂದು ಆಚರಣೆ ಮಾಡಲಾಗುವುದು. 1959 ರಲ್ಲಿ ಚೀನಾ ಗಡಿಯಲ್ಲಿ ಪೆÇಲೀಸ್ ಅಧಿಕಾರಿಗಳು ಪ್ರಾಣ ತ್ಯಾಗ ಮಾಡಿದ ಸ್ಮರಣಾರ್ಥವಾಗಿ ಈ ದಿನವನ್ನು ಆಚರಿಸಲಾಗುತ್ತದೆ.

ಪ್ರಸಕ್ತ ಸಾಲಿನಲ್ಲಿ ರಾಷ್ಟ್ರದ ಆಂತರಿಕ ಶಾಂತಿ, ಸುವ್ಯವಸ್ಥೆ ಮತ್ತು ಕಾನೂನು ಪಾಲನೆಗಾಗಿ ದೇಶದಾದ್ಯಂತ 264 ಪೆÇಲೀಸ್ ಅಧಿಕಾರಿ, ಸಿಬ್ಬಂದಿಗಳು ಸೇವೆಯಲ್ಲಿರುವಾಗ ಮೃತರಾಗಿದ್ದಾರೆ. ಅದರಲ್ಲಿ ರಾಜ್ಯದ 11 ಜನರಿದ್ದು, ಧಾರವಾಡ ಜಿಲ್ಲೆಯ ಒಬ್ಬರು ಪ್ರಾಣ ತ್ಯಾಗ ಮಾಡಿದ್ದಾರೆ. ದೇಶಕ್ಕಾಗಿ ಹೋರಾಡುತ್ತಾ ವೀರ ಸ್ವರ್ಗವನ್ನು ಪಡೆದ ಈ ಶೂರರ ಸ್ಮರಣೆಗಾಗಿ ಸ್ಮಾರಕವನ್ನು ಲಡಾಕ್ ನ ಅಕ್ಸಯ್ ಚಿನ್ ಭಾಗದಲ್ಲಿ 16,000 ಅಡಿ ಎತ್ತರದ ಮೇಲೆ ನಿಲ್ಲಿಸಲಾಗಿದೆ. ರಾಷ್ಟ್ರದಾದ್ಯಂತ ಪ್ರತಿ ರಾಜ್ಯದಿಂದ ಆಯ್ಕೆಯಾದ ಪೆÇಲೀಸರು ಪ್ರತಿ ವರ್ಷ ಹುತಾತ್ಮರ ದಿನಾಚರಣೆಯಂದು 16,000 ಅಡಿ ಎತ್ತರದಲ್ಲಿ ಸ್ಮಾರಕಕ್ಕೆ ತೆರಳಿ ಗೌರವ ಸಲ್ಲಿಸುವರು ಎಂದರು.

ವೇದಿಕೆಯಲ್ಲಿ ಅರಣ್ಯ ಇಲಾಖೆಯ ಸಂರಕ್ಷಣಾಧಿಕಾರಿ ಮನೋಜ ತ್ರಿಪಾಠಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೌರಭಕುಮಾರ್ ಇದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ. ಶಾಂತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್, ಹುತಾತ್ಮ ಧಾರವಾಡ ಜಿಲ್ಲೆಯ ಪೊಲೀಸ್ ಪೇದೆ ಪಂಡಿತ್ ಕಾಸರ್ ಅವರ ತಂದೆ ಅಮೃತ ಕಾಸರ್ ಹಾಗೂ ತಾಯಿ ಚನ್ನಕ್ಕ ಕಾಸರ್, ಕೈಗಾರಿಕಾ ಭದ್ರತಾ ಪಡೆಯ ಧಾರವಾಡ ಘಟಕದ ಉಪ ಕಮಾಂಡೆಂಟ್ ಗಂಗಯ್ಯ, ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಬಿ. ಸುಂಕದ, ಚಂದ್ರಕಾಂತ ಪೂಜಾರ, ಶಿವಾನಂದ ಜಿ. ಚನ್ನಬಸಪ್ಪನವರ, ಸಹಾಯಕ ಆಡಳಿತಾಧಿಕಾರಿ ಮಹಾಂತೇಶ ಎಸ್. ಹಿರೇಮಠ ಸೇರಿದಂತೆ ಪೊಲೀಸ್ ಇಲಾಖೆಯ ವಿವಿಧ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳ ಪರವಾಗಿ ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಪುಷ್ಪ ಗುಚ್ಛ ಸಲ್ಲಿಸಿ ನಮಿಸಿದರು.

ಡಿಎಆರ್ ನ ಆರ್‍ಪಿಐ ಎನ್.ಎಸ್. ಪಾಟೀಲ ಅವರ ನೇತೃತ್ವದಲ್ಲಿ ಗೌರವ ರಕ್ಷೆ ಜರುಗಿತು. ಡಿಎಎಆರ್ ಡಿವೈಎಸ್‍ಪಿ ಶಿವಾನಂದ ಜಿ.ಸಿ. ಅವರು ಸ್ವಾಗತಿಸಿದರು. ಡಾ.ವೈ.ಪಿ. ಕಲ್ಲನಗೌಡರ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here