ಚಪ್ಪರದಹಳ್ಳಿ ಗ್ರಾಮದಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮನ ಜಯಂತಿಯನ್ನು ಆಚರಣೆ

0
275

ಕೊಟ್ಟೂರು:ತಾಲೂಕಿನ ಚಪ್ಪರದಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರಿಂದ
ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರವನ್ನು ಟ್ರ್ಯಾಕ್ಟರ್ ನಲ್ಲಿ ಸ್ಥಾಪಿಸಿ ಕೆ.ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ ರೂಪ ಸುರೇಶ್, ಮಾಜಿ ಅಧ್ಯಕ್ಷರಾದ ಕೆ. ಕೊಟ್ರೇಶ್, ಸದಸ್ಯರಾದ ಓಬಳೇಶ್, ನೀಲಮ್ಮ ರಾಜಶೇಖರಯ್ಯ ಇತರರು ವಿಶೇಷ ಪೂಜೆಯನ್ನು ಸಲ್ಲಿಸಿ ಮೆರವಣಿಗೆಗೆ ಚಾಲನೆಯನ್ನು ನೀಡಿದರು.
ಸಕಲ ವಾದ್ಯಗಳೊಂದಿಗೆ ಈ ಮೆರವಣಿಗೆಯು ಕೊಡಿಬಸವೇಶ್ವರ ದೇವಸ್ಥಾನದಿಂದ ಪ್ರಾರಂಭಗೊಂಡು ಊರಿನ ಪ್ರಮುಖ ಬೀದಿಗಳಲ್ಲಿ ಯುವಕರು ಮತ್ತು ಊರಿನ ಗ್ರಾಮಸ್ಥರು ತಮ್ಮ ಕುಣಿತದ ಮೂಲಕ ಅದ್ದೂರಿಯಾಗಿ ಮೆರವಣಿಗೆಯನ್ನು ಕೈಗೊಂಡರು.

ಮಕ್ಕಳು ಸ್ವಾತಂತ್ರ್ಯ ಹೋರಾಟಗಾರರ ವಿವಿಧ ವೇಷ ಭೂಷಣಗಳನ್ನು ಧರಿಸಿ, ತಮ್ಮ ಅಭಿನಯವನ್ನು ಪ್ರದರ್ಶಿಸಿ ನೋಡುಗರ ಗಮನ ಸೆಳೆದರು.
ಈ ಮೆರವಣಿಗೆಯ ಮುಂಭಾಗದಲ್ಲಿ ಮಹಿಳೆಯರು ಕಳಸ ಹಿಡಿದು ಸಾಗಿದರು.

ಈ ಸಂದರ್ಭದಲ್ಲಿ ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ ರೂಪ ಸುರೇಶ್, ಮಾಜಿ ಅಧ್ಯಕ್ಷರಾದ ಕೆ. ಕೊಟ್ರೇಶ್, ಸದಸ್ಯರಾದ ಓಬಳೇಶ್, ನೀಲಮ್ಮ, ರಾಜಶೇಖರಯ್ಯ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಊರಿನ ಗ್ರಾಮಸ್ಥರಾದ ಭರ್ಮಜ್ಜ, ಗಿರೀಶ್, ಕರಿಬಸವರಾಜ್, ಕೆ.ಶಿವು, ಕೆ.ಅಜಯ್ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here