ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿಕಂಠ ಗಾಯನ ಕಾರ್ಯಕ್ರಮ.

0
265

ಕೊಟ್ಟೂರು 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುವ ಪುಯುಕ್ತ ಅಕ್ಟೋಬರ್ 28, ಶುಕ್ರವಾರದಂದು ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸುವ, ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವಂತಹ “ಕೋಟಿ ಕಂಠ ಗೀತ ಗಾಯನ” ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಆಯೋಜಿಸಲಾಗುತ್ತಿದ್ದು,

ಕನ್ನಡ ನಾಡು-ನುಡಿಯ ಶ್ರೇಷ್ಠತೆಯನ್ನು ಸಾರುವ ನನ್ನ ನಾಡು- ನನ್ನ ಹಾಡು ಸಮೂಹ ಗೀತ ಗಾಯನ, ನಾಡಗೀತ, ಹುಯಿಲಗೋಳನಾರಾಯಣರಾಯರ- ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ರಾಷ್ಟ್ರಕವಿ ಕುವೆಂಪುರವರ- ಬಾರಿಸು ಕನ್ನಡ ಡಿಂಡಿಮವ, ಡಾ: ಡಿ.ಎಸ್.ಕರ್ಕಿಯವರ – ಹಚ್ಚೇವು ಕನ್ನಡದ ದೀಪ, ನಾಡೋಜ ಡಾ: ಚೆನ್ನವೀರಕಣವಿಯವರ- ವಿಶ್ವವಿನೂತನ ವಿದ್ಯಾಚೇತನ ಹಾಗೂ ಡಾ:ಹಂಸಲೇಖರವರ- ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟಬೇಕು ಎಂಬ ಈ ಗೀತೆಗಳು ಕನ್ನಡದ ಶಕ್ತಿಯಾಗಿದ್ದು.

ದಿನಾಂಕ: 28.10.2022 ರಂದು ಬೆಳಗ್ಗೆ 12.00 ಗಂಟೆಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಹಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆದ್ದರಿಂದ ಸಚಿವಾಲಯದ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಐ.ಎ.ಎಸ್., ಐ.ಪಿ.ಎಸ್., ಐ.ಎಫ್.ಎಸ್. ಅಧಿಕಾರಿಗಳು ಹಾಗೂ ಸಚಿವಾಲಯದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು
ದಿನಾಂಕ: 28.10.2022 ರಂದು ಬೆಳಗ್ಗೆ 11.30ಕ್ಕೆ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಬೃಹತ್
ಮೆಟ್ಟಿಲುಗಳ ಬಳಿ ಸೇರಿ ಮಧ್ಯಾಹ್ನ 12.00 ಗಂಟೆಗೆ “ಕೋಟಿ ಕಂಠ ಗೀತ ಗಾಯನ” ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸುವಂತೆ. ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳು ಹೇಳಿದರು

LEAVE A REPLY

Please enter your comment!
Please enter your name here