ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನ ಆಚರಣೆ

0
51

ಬಳ್ಳಾರಿ,ಅ.28 : ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಕರ್ನಾಟಕ ರಾಜ್ಯ ಚಾಲನಾ ಪರಿಷತ್ ಬೆಂಗಳೂರು ಮತ್ತು ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ (ರಕ್ತ ಸುರಕ್ಷತೆ) ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಆಸ್ಪತ್ರೆ ಆವರಣದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿüಕಾರಿಗಳ ಸಭಾಂಗಣದಲ್ಲಿ ಆಚರಿಸಲಾಯಿತು.
ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ಗುರುನಾಥ್ ಬಿ.ಚವ್ಹಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅತಿ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸಬೇಕು ಎಂದು ಸಂಘ ಸಂಸ್ಥೆಗಳಿಗೆ ತಿಳಿಸಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳಾದ ಡಾ.ಇಂದ್ರಾಣಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ರಕ್ತದಾನ ಶಿಬಿರ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು, ಇ-ರಕ್ತಕೋಶದಲ್ಲಿ ಎಲ್ಲಾ ರಕ್ತ ಕೇಂದ್ರದವರು ತುಂಬಬೇಕು ಇದರಿಂದ ಸಾರ್ವಜನಿಕರಿಗೆ ಯಾವ ರಕ್ತ ಕೇಂದ್ರದಲ್ಲಿ ರಕ್ತ ಇದೆ ಎಂದು ತಿಳಿಯಲು ಸಾಧ್ಯವಾಗುತ್ತ್ತದೆ ಎಂದು ತಿಳಿಸಿದರು.
ಜಿಲ್ಲಾ ಮೇಲ್ವಿಚಾರಕರಾದ ಬಿ.ಗಿರೀಶ್ ಅವರು ಮಾತನಾಡಿ, 2022-23ನೇ ಸಾಲಿನಲ್ಲಿ 183 ರಕ್ತದಾನ ಶಿಬಿರ ಆಯೋಜಿಸಿ 8370 ರಕ್ತ ಚೀಲಗಳನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ 44 ಸಂಘ ಸಂಸ್ಥೆಗಳಿಗೆ 100 ಕ್ಕೂ ಹೆಚ್ಚು ರಕ್ತ ಚೀಲಗಳನ್ನು ಸಂಗ್ರಹಿಸಿದವರಿಗೆ ಸನ್ಮಾನ ಮಾಡಲಾಯಿತು.
ಇದಕ್ಕೂ ಮುಂಚೆ ಜಾಗೃತಿ ಜಾಥಾಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಪ್ರಭಾರಿ) ಡಾ.ಅಬ್ದುಲ್ಲಾ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಆರ್.ಸಿ.ಹೆಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮ ಕಟ್ಟಿಮನಿ, ಜಿಲ್ಲಾ ಪರಿವೀಕ್ಷಣಾಧಿಕಾರಿ ಡಾ.ಮರಿಯಾಂಬಿ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ವಿರೇಂದ್ರ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಈಶ್ವರ ದಾಸಪ್ಪನವರ, ಎ.ಆರ್.ಟಿ ಆಪ್ತಸಮಾಲೋಚಕರಾದ ಗಣೇಶ್ ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ಸಿಬ್ಬಂದಿಗಳು ಮತ್ತು ಇನ್ನೀತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here