ಹಸ್ತಪ್ರತಿಶಾಸ್ತ್ರ ವಿಭಾಗದ ರಜತ ಮಹೋತ್ಸವ ಆಚರಣೆ

0
65

ಹೊಸಪೇಟೆ(ವಿಜಯನಗರ),ನ.2 : ಧಾರವಾಡದ ಹಿರಿಯ ವಿದ್ವಾಂಸ ಡಾ.ವೀರಣ್ಣ ರಾಜೂರ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಹಸ್ತಪ್ರತಿಶಾಸ್ತ್ರ ವಿಭಾಗದ ರಜತ ಮಹೋತ್ಸವ ಸಮಾರಂಭದ ಉದ್ಘಾಟನೆಯನ್ನು ನೇರವೇರಿಸಿದರು.
ಹಂಪಿ ಕನ್ನಡ ವಿವಿಯ ಮಂಟಪ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ 20 ಪುಸ್ತಕಗಳನ್ನು ಬಿಡುಗಡೆಗೊಳಿಸಿ ನಂತರ ಮಾತನಾಡಿದರು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಸ.ಚಿ.ರಮೇಶ ಅವರು ಹಸ್ತಪ್ರತಿಶಾಸ್ತ್ರ ವಿಭಾಗದ ರಜತ ಮಹೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಮಂಗಳೂರಿನ ಹಿರಿಯ ವಿದ್ಯಾಂಸ ಪ್ರೊ.ಎ.ವಿ.ನಾವಡ ಅವರು ರಜತ ಮಹೋತ್ಸವ ನೆನಪಿನ ಸಂಪುಟ ಹಾಗೂ ಛಾಯಾಚಿತ್ರಗಳ ಅಲ್ಬಮ್ ಬಿಡುಗಡೆ ಮಾಡಿದರು.
ಹಸ್ತಪ್ರತಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಫ್.ಟಿ.ಹಳ್ಳಿಕೇರಿ ಅವರು ಪ್ರಾಸ್ತಾವಿಕ ನುಡಿದರು. ಹಸ್ತಪ್ರತಿಶಾಸ್ತ್ರ ವಿಭಾಗದ ಹಿರಿಯ ವಿದ್ಯಾರ್ಥಿಗಳಿಂದ ದತ್ತಿನಿಧಿ ಸ್ಥಾಪನೆಯನ್ನು ನೇರವೇರಿಸಿದರು.
ಈ ಸಂದರ್ಭದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಡಾ.ಎ.ಸುಬ್ಬಣ್ಣ ರೈ ಹಾಗೂ ಪ್ರಸಾರಾಂಗ ನಿರ್ದೇಶಕರಾದ ಡಾ.ಶೈಲಜ ಇಂ. ಹಿರೇಮಠ ಸೇರಿದಂತೆ ಇತರರು ಇದ್ದರು.

LEAVE A REPLY

Please enter your comment!
Please enter your name here