ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

0
63

ಮಡಿಕೇರಿ ನ.04 :-ನಗರದ ಸಂತ ಜೋಸೆಫರ ಶಾಲೆ ಬಳಿ ಸುಮಾರು 16.50 ಲಕ್ಷ ರೂ. ವೆಚ್ಚದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಸದಸ್ಯರಾದ ಅರುಣ್ ಶೆಟ್ಟಿ, ಮಹೇಶ್ ಜೈನಿ, ಸಬಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಒ ಸೀತಾಲಕ್ಷ್ಮಿ, ಎಸಿಡಿಪಿಒ ಸವಿತಾ, ಪೌರಾಯುಕ್ತರಾದ ವಿಜಯ, ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಪೂಣಚ್ಚ ಇತರರು ಇದ್ದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಎಂ.ಪಿ.ಅಪ್ಪಚ್ಚುರಂಜನ್ ಅವರು ಒಂದು ಕೋಟಿ ರೂ. ವೆಚ್ಚದಲ್ಲಿ ಮೂರು ಕೊಠಡಿ ಒಳಗೊಂಡ ಕಾಲೇಜು ಕಟ್ಟಡ ನಿರ್ಮಿಸಲಾಗುತ್ತಿದೆ. ಹಾಗೆಯೇ ಅಂಗನವಾಡಿಯನ್ನು ನಿರ್ಮಿಸಲಾಗುತ್ತಿದೆ. ಸರ್ಕಾರದ ಹಣವನ್ನು ಸರಿಯಾಗಿ ಬಳಸಿಕೊಂಡು ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು ಎಂದು ಶಾಸಕರು ಹೇಳಿದರು.

LEAVE A REPLY

Please enter your comment!
Please enter your name here