ಪಿ ಡಬ್ಲ್ಯೂ ಡಿ ಸಹಾಯಕ ಇಂಜಿನಿಯರ್ ಮೇಲೆ ಹಲ್ಲೆ: ಸರ್ಕಾರಿ ನೌಕರರಿಂದ ಪ್ರತಿಭಟನೆ.

0
173

ಸಂಡೂರು ಲೋಕೋಪಯೋಗಿ ಇಲಾಖೆಯ ಉಪ ವಿಬಾಗದ ಸಹಾಯಕ ಇಂಜಿನಿಯರ್ ಮೇಲೆ ನಡೆಸಿರುವ ಹಲ್ಲೆಯನ್ನು ಖಂಡಿಸಿ ಪಟ್ಟಣದಲ್ಲಿ ಸರಕಾರಿ ನೌಕರರ ಸಂಘದ ನೇತೃತ್ವದಲ್ಲಿ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಪ್ರತಿಭಟನೆಯನ್ನು ನಡೆಸಿದರು

ಪಟ್ಟಣದ ಮುಖ್ಯರಸ್ತೆಯ ಮೂಲಕ ತಹಶೀಲ್ದಾರ್ ಕಚೇರಿವರೆಗೆ ಘೋಷಣೆಗಳನ್ನು ಕೂಗುತ್ತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಹಸೀಲ್ದಾರರ ಮುಖಾಂತರ ಮನವಿಪತ್ರವನ್ನು ಸಲ್ಲಿಸಲಾಯಿತು

ಮನವಿಪತ್ರವನ್ನು ಸಲ್ಲಿಸಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಚೌಕಳಿ ಪರಶುರಾಮಪ್ಪ ಮಾತನಾಡಿ..
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕು ಲೋಕೋಪಯೋಗಿ ಇಲಾಖೆ ಸಹಾಯಕ ಇಂಜೀನಿಯರ್ ರವರ ಮೇಲೆ ಹಲ್ಲೆ ಮಾಡಿರುವ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಬೇಕು

ಸಂಡೂರು ತಾಲೂಕಿನ ಲೋಕೋಪಯೋಗಿ ಇಲಾಖೆ ಉಪ-ವಿಭಾಗದ ಸಹಾಯಕ ಇಂಜಿನಿಯರ್ ಆದ ಮೈಸೂರು ಕೊಟ್ರೇಶ್, ಇವರ ಮೇಲೆ ನಡೆದಿರುವ ಹಲ್ಲೆಯನ್ನು ನಮ್ಮ ಸರ್ಕಾರಿ ನೌಕರರ ಸಂಘವು ತೀವ್ರವಾಗಿ ಖಂಡಿಸುತ್ತದೆ.

ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ಮೇಲೆ ಪದೇ ಪದೇ ಹಲ್ಲೆಗಳು ದಬ್ಬಾಳಿಕೆ ಹೆಚ್ಚಾಗುತ್ತಿದ್ದು ಇದರಿಂದ ಕರ್ತವ್ಯ ನಿರ್ವಹಿಸಲು ನಮ್ಮ ಅಧಿಕಾರಿ ನೌಕರರು ತುಂಬಾ ಭಯಭೀತರಾಗಿದ್ದು, ಆತಂಕದಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ ಅಧಿಕಾರಿ ಮತ್ತು ನೌಕರರಿಗೆ ರಕ್ಷಣೆ ಇಲ್ಲದಂತಾಗಿದೆ ತಾವುಗಳು ಈ ಸಂಬಂಧ ಸೂಕ್ತ ಕಾನೂನು ರೂಪಿಸಿ ನೌಕರರಿಗೆ ರಕ್ಷಣೆ ಒದಗಿಸದೇ ಹೋದಲ್ಲಿ ಅಧಿಕಾರಿ ಮತ್ತು ನೌಕರರು ಕರ್ತವ್ಯ ನಿರ್ವಹಿಸಲು ಸಾಧ್ಯವಾಗುವುದಿಲ್ಲ

ಸರ್ಕಾರಿ ನೌಕರರ ಮೇಲೆ ಇಂತಹ ಅಹಿತಕರ ಘಟನೆ ನಡೆಯದಂತೆ ಸೂಕ್ತ ಭದ್ರತೆಯನ್ನು ಒದಗಿಸಿ ಸದರಿ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಮೇಲೆ ಹಲ್ಲೆ ಮಾಡಿದವರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಮನವಿಪತ್ರವನ್ನು ಸಲ್ಲಿಸಿದರು.

ಈ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಚೌಕಳಿ ಪರಶುರಾಮ ಗೌರವಾಧ್ಯಕ್ಷರಾದ ಸಿದ್ದಣ್ಣ ಯಳವಾರ, ರಾಜ್ಯ ಪರಿಷತ್ ಸದಸ್ಯರಾದ ಈಶ್ವರಪ್ಪ, ಖಜಾಂಚಿ ಶಿವಕುಮಾರ್ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ತಮ್ಮಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಷಣ್ಮುಖಪ್ಪ, ಆರೋಗ್ಯ ಇಲಾಖೆಗಳ ನೌಕರರ ಸಂಘದ ಅಧ್ಯಕ್ಷರಾದ ಬಂಡೆಗೌಡ, ಪದವಿದರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ದಕ್ಷಿಣಮೂರ್ತಿ, ಕೃಷ್ಣ ನಾಯಕ್, ಮೈಲೇಶ್ ಬೇವೂರು, ವೆಂಕಟೇಶ್, ಸಂಗಮೇಶ್, ಹಾಗೂ ಎಲ್ಲಾ ಇಲಾಖೆಗಳ ನೌಕರರು ಶಿಕ್ಷಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here