ಜಿಲ್ಲಾಮಟ್ಟದ ಯುವಜನೋತ್ಸವ

0
58

ಉಡುಪಿ, ನವೆಂಬರ್ 07: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮವು ನವೆಂಬರ್ 19 ರಂದು ನಗರದ ಪುರಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಜಾನಪದ ನೃತ್ಯ ಹಾಗೂ ಜಾನಪದ ಹಾಡು (ಗುಂಪು ಸ್ಪರ್ಧೆ), ಏಕಾಂಕ ನಾಟಕ (ಹಿಂದಿ, ಇಂಗ್ಲೀಷ್, ಕನ್ನಡ-ವೈಯಕ್ತಿಕ ಸ್ಪರ್ಧೆ), ಶಾಸ್ತ್ರೀಯ ಗಾಯನಗಳಾದ ಹಿಂದೂಸ್ಥಾನಿ ಸಂಗೀತ ಹಾಗೂ ಕರ್ನಾಟಕ ಸಂಗೀತ, ಶಾಸ್ತ್ರೀಯ ವಾದ್ಯಗಳಾದ ತಬಲಾ, ಸಿತಾರ್, ಕೊಳಲು, ವೀಣೆ ಹಾಗೂ ಮೃದಂಗ, ಹಾರ್ಮೋನಿಯಂ, ಗಿಟಾರ್, ಶಾಸ್ತಿçÃಯ ನೃತ್ಯಗಳಾದ ಭರತನಾಟ್ಯ, ಒಡಿಸ್ಸಿ, ಮಣಿಪುರಿ, ಕಥಕ್ ಹಾಗೂ ಕೂಚುಪುಡಿ, ಕನ್ನಡ, ಹಿಂದಿ ಅಥವಾ ಇಂಗ್ಲೀಷ್ ಭಾಷೆಯಲ್ಲಿ ಆಶುಭಾಷಣ (ವೈಯಕ್ತಿಕ) ಸ್ಪರ್ಧೆಗಳನ್ನು ನಡೆಸಲಾಗುವುದು.

15 ರಿಂದ 29 ವರ್ಷದೊಳಗಿನ ಯುವಕ, ಯುವತಿಯರು ಮತ್ತು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು, ಸ್ಪರ್ಧಿಗಳು ವಯಸ್ಸಿನ ದೃಢೀಕರಣ ಪತ್ರ (ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮತ್ತು ಜನನ ಪ್ರಮಾಣಪತ್ರದ ಪ್ರತಿ) ವನ್ನು ಹಾಜರುಪಡಿಸಬೇಕು.

ಸ್ಪರ್ಧಾಳುಗಳು ಸ್ಪರ್ಧೆ ನಡೆಯುವ ಸ್ಥಳದಲ್ಲಿ ಬೆಳಗ್ಗೆ 9 ಗಂಟೆಯ ಒಳಗೆ ಸಂಘಟಕರಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ :0820-2521324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ ತಾಲೂಕು ಪಂಚಾಯತ್ : ಸಾಮಾನ್ಯ ಸಭೆ

ಉಡುಪಿ, ನವೆಂಬರ್ 07 : ಉಡುಪಿ ತಾಲೂಕು ಪಂಚಾಯತ್ನ ಸಾಮಾನ್ಯ ಸಭೆಯು ನವೆಂಬರ್ 9 ರಂದು ಬೆಳಗ್ಗೆ 11 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಪಂಚಾಯತ್ ಆಡಳಿತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಂಬಾಕು ಮುಕ್ತ ಅಪಾರ್ಟ್ಮೆಂಟ್: ಸಿ.ಆರ್.ಇ.ಡಿ.ಎ.ಐ. ಸದಸ್ಯರೊಂದಿಗೆ ಸಭೆ

ಉಡುಪಿ, ನವೆಂಬರ್ 07: ಜಿಲ್ಲೆಯಲ್ಲಿ ತಂಬಾಕು ಮುಕ್ತ ಅಪಾರ್ಟ್ಮೆಂಟ್ ಯೋಜನೆಯ ಅನುಷ್ಠಾನದ ಮುಂದುವರೆದ ಭಾಗವಾಗಿ ಜಿಲ್ಲೆಯ ಸಿ.ಆರ್.ಇ.ಡಿ.ಎ.ಐ. (ರಿಯಲ್ ಎಸ್ಟೇಟ್ ಡೆವಲಪ್ಮೆಂಟ್ ಅಸೋಸಿಯೇಷನ್ ಒಕ್ಕೂಟ) ಸದಸ್ಯರುಗಳಿಗೆ ಶುಕ್ರವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಯಿತು.

ರಾಜ್ಯ ತಂಬಾಕು ನಿಯಂತ್ರಣ ಕೋಶದ ಯೋಜನಾ ವ್ಯವಸ್ಥಾಪಕ ಪ್ರಭಾಕರ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ಎಲ್ಲಾ ವಸತಿ ಸಮುಚ್ಛಯದಲ್ಲಿರುವವರಿಗೆ ಪೈಲಟ್ ಸಮೀಕ್ಷೆಯನ್ನು ನಡೆಸಿ, ಜನಾಭಿಪ್ರಾಯ ಪಡೆಯಲು ಆರೋಗ್ಯ ಇಲಾಖೆಯು ಕಾರ್ಯಪ್ರವೃತ್ತವಾಗಲಿದೆ ಎಂದರು.
ನೂತನವಾಗಿ ನಿರ್ಮಿಸಲಾಗುವ ಅಪಾರ್ಟ್ಮೆಂಟ್ಗಳನ್ನು ತಂಬಾಕು ಮುಕ್ತ ವಲಯಗಳನ್ನಾಗಿ ನಿರ್ಮಿಸಲು ಕ್ರಮ ಕೈಗೊಳ್ಳುವುದಾಗಿ ಸಭೆಯಲ್ಲಿ ಹಾಜರಿದ್ದ ಬಿಲ್ರ್ಸ್ಗಳು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಮಾತನಾಡಿ, ವಸತಿ ಸಮುಚ್ಛಯಗಳನ್ನು ತಂಬಾಕು ಮುಕ್ತಗೊಳಿಸುವುದು ಆರೋಗ್ಯದ ಹಿತದೃಷ್ಠಿಯಿಂದ ಅನಿವಾರ್ಯವಾಗಿದ್ದು, ಈ ಯೋಜನೆಗೆ ಬಿಲ್ರ್ಸ್ಗಳ ಸಹಕಾರ ಅತೀ ಅಗತ್ಯ ಎಂದರು.
ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ಕೋಟ್ಪಾ ತನಿಖಾ ತಂಡದ ಮುಖ್ಯಸ್ಥರಾದ ಉಡುಪಿ ಮತ್ತು ಕಾರ್ಕಳ ತಾಲೂಕು ಆರೋಗ್ಯಾಧಿಕಾರಿಗಳು, ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಸಮಾಜ ಕಾರ್ಯಕರ್ತೆ ಶೈಲಾ ಶಾಮನೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಉಚಿತ ದಂತ ತಪಾಸಣೆ, ಚಿಕಿತ್ಸಾ ಶಿಬಿರ

ಉಡುಪಿ, ನವೆಂಬರ್ 07 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಉಡುಪಿ, ರೋಟರಿ ಕ್ಲಬ್ ಕೋಟ, ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್, ಪಬ್ಲಿಕ್ ಹೆಲ್ತ್ ವಿಭಾಗ ಮಣಿಪಾಲ, ಪ್ರಾಥಮಿಕ ಆರೋಗ್ಯ ಕೇಂದ್ರ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ಶುಕ್ರವಾರ ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟಿçÃಯ ಬಾಯಿಯ ಆರೋಗ್ಯ ಕಾರ್ಯಕ್ರಮದಡಿ ಉಚಿತ ದಂತ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ನಡೆಯಿತು.

ಮಣಿಪಾಲ ದಂತ ವಿಭಾಗದ ಮುಖ್ಯಸ್ಥ ಡಾ. ರಾಮದಾಸ್ ಕಾರ್ಯಕ್ರಮ ಉದ್ಘಾಟಿಸಿದರು. ಸಾಲಿಗ್ರಾಮ ಪಟ್ಟಣ ಪಂಚಾಯತ್ನ ಸುಲತಾ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಬಾಯಿಯ ಆರೋಗ್ಯದ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಆಸ್ಪತ್ರೆಯ ದಂತ ವಿಭಾಗದ ನೋಡೆಲ್ ಅಧಿಕಾರಿ ಡಾ. ಬಿಸು ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ದಂತ ಆರೋಗ್ಯಾಧಿಕಾರಿ ಡಾ. ಪ್ರದೀಪ್ ಪೂಜಾರಿ, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ದಂತ ಆರೋಗ್ಯಾಧಿಕಾರಿ ಡಾ. ಗಾಯತ್ರಿ, ಎನ್.ಸಿ.ಡಿ ವೈದ್ಯಾಧಿಕಾರಿ ಡಾ. ಶರಣ್, ಕಾರ್ಕಡ ಶಾಲಾ ಮುಖ್ಯೋಪಾಧ್ಯಾಯ ಪ್ರಭಾಕರ ಕಾಮತ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here