ಭದ್ರಾವತಿ ತಾ.ಪಂ ಯಲ್ಲಿ ಭ್ರಷ್ಟಾಚಾರ ವಿರುದ್ದ ಜಾಗೃತಿ ಅರಿವು ಸಪ್ತಾಹ

0
50

ಶಿವಮೊಗ್ಗ ನವೆಂಬರ್ 07: ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ 2022 ರ ಅಂಗವಾಗಿ ಭದ್ರಾವತಿ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಇಂದು ಸಪ್ತಾಹದ ಕುರಿತು ಪ್ರತಿಜ್ಞಾ ವಿಧಿಯನ್ನು ಭೋದಿಸಿ, ನಂತರ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಮತ್ತು ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಬಗ್ಗೆ ತಿಳುವಳಿಕೆ ಮೂಡಿಸಲಾಯಿತು.

ಈ ವೇಳೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಎನ್ ಮೃತ್ಯುಂಜಯರವರು ಮಾತನಾಡಿ, ಸಾರ್ವಜನಿಕ ಆಡಳಿತ ಕ್ಷೇತ್ರದಲ್ಲಿ ಸಾರ್ವಜನಿಕರ ಅಧಿಕೃತ ಕೆಲಸವನ್ನು ವಿಳಂಬ ಮಾಡದೇ ವಿಲೆ ಮಾಡಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಬಾರದು. ಮತ್ತು ಭ್ರಷ್ಟಾಚಾರ, ನಿಷ್ಪಕ್ಷಪಾತ ಮಾಡದೇ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದ ಅವರು ಸಾರ್ವಜನಿಕ ಜೀವನದಲ್ಲಿ ಸರಳತೆಯನ್ನು ಅಳವಡಿಸಿಕೊಳ್ಳಬೇಕೆಂದು ಹೇಳಿದರು.
ಯಾವುದೇ ಅಧಿಕಾರಿ, ಸಿಬ್ಬಂದಿಯವರು ನಿಯಮ ಮತ್ತು ಕಾನೂನನ್ನು ಉಲ್ಲಂಘಿಸಿದರೆ ಅಥವಾ ಅವರ ವಿರುದ್ದ ದೂರುಗಳು ಬಂದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭದ್ರಾವತಿ ತಹಶೀಲ್ದಾರ್ ಪ್ರದೀಪ್, ತಾ.ಪಂ ಇಓ ರಮೇಶ್, ನಗರಸಭೆ ಆಯುಕ್ತರು, ಪೊಲೀಸ್ ನಿರೀಕ್ಷಕರಾದ ರಾಧಾಕೃಷ್ಣ ಮತ್ತು ಜಗನ್ನಾಥ್, ಇತರೆ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here