ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ -ನಗದು ಪುರಸ್ಕಾರ

0
65

ಶಿವಮೊಗ್ಗ ನವೆಂಬರ್ 08 :ಉಪನಿರ್ದೇಶಕರ ಕಚೇರಿ, ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಇಂದು ಪ್ರತಿಭಾ ಪುರಸ್ಕಾರ ನೀಡಿ ಪುರಸ್ಕರಲಾಯಿತು.

ಉಪನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಎಸ್.ಈಶ್ವರಪ್ಪ ಇವರು 2021-22 ನೇ ಸಾಲಿನ ದ್ವಿತೀಯ ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಕ್ಕೆ ಸೇರಿದ ಒಟ್ಟು 24 ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಹಾಗೂ 25 ವಿದ್ಯಾರ್ಥಿಗಳಿಗೆ ಪ್ರಾಚಾರ್ಯರ ಸಂಘದಿಂದ ನೀಡಲಾದ ತಲಾ ರೂ.1000/- ನಗದು ಬಹುಮಾನವನ್ನು ವಿತರಿಸಿದರು.

ಇದೇ ವೇಳೆ ಹೆಚ್‍ಸಿಎಲ್ ಟೆಕ್ನಾಲಜೀಸ್, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ 12 ನೇ ತರಗತಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ ಮತ್ತು ಉದ್ಯೋಗದ ಜೊತೆ ವಿದ್ಯಾಭ್ಯಾಸವನ್ನು ಪ್ರತಿಷ್ಟಿತ ವಿಶ್ವವಿದ್ಯಾಲಯಗಳಲ್ಲಿ ಪೂರ್ಣಗೊಳಿಸುವ ಅವಕಾಶ ಕುರಿತು ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ ಬಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸರ್ಕಾರಿ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಚಂದ್ರಪ್ಪ ಎಸ್.ಗುಂಡಪಲ್ಲಿ, ನಿವೃತ್ತ ಡಿಡಿಪಿಯು ನಾಗರಾಜ್ ಕಾಗಲ್ಕರ್, ಮಾಳೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪಳನಿವೇಲು, ಉಪನಿರ್ದೇಶಕರ ಕಚೇರಿಯ ಶಾಖಾಧಿಕಾರಿ ಪ್ರಸನ್ನ ಕೆ, ಇತರೆ ಉಪನ್ಯಾಸಕರು, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.

LEAVE A REPLY

Please enter your comment!
Please enter your name here