ಕೊಟ್ಟೂರು ಪದವಿ ಪೂರ್ವ ಇಂದು ಕಾಲೇಜ್ ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ “ಸಾಂಸ್ಕೃತಿಕ ಸೌರಭ” ಕಾರ್ಯಕ್ರಮಕ್ಕೆ ಚಾಲನೆ.

0
111

ಕೊಟ್ಟೂರು:ನ:18:- ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಹಾಗೂ ಇಂದು ಇನೋವೇಟಿವ್ ಪದವಿ ಪೂರ್ವ ಕಾಲೇಜು, ಕೊಟ್ಟೂರು ಇವರ ಸಂಯಕ್ತ ಆಶ್ರಯದಲ್ಲಿ 290ಕ 17-11-2022ರಂದು ನಡೆದ 2022-23ನೇ ಸಾಲಿನ ವಿಜನಗರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಚಟುವಟಿಕೆಗಳ “ಸಾಂಸ್ಕೃತಿಕ ಸೌರಭ” ಕಾರ್ಯಕ್ರಮವನ್ನು ಕೊಟ್ಟೂರಿನ ಇಂದು ಇನೋವೇಟಿವ್ ಪದಏ ಮೂರ್ವ ಕಾಲೇಜಿನಲ್ಲಿ ನಡೆಸಲಾಯಿತು,

ವಿಜಯನಗರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಲಾಯಿತು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಚಾರ್ಯ ಶ್ರೀ ನಾಗರಾಜ ಹವಾ‌ ಇವರು ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿರುವ ಸಾಂಸ್ಕೃತಿಕ ಚಟುವಟಿಕೆ, ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮಲ್ಲಿ ಅಡಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸಬೇಕೆಂದು ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಆಗಬೇಕೆಂದರೆ ಪಠ್ಯದ ಜೊತೆಗೆ ಪಶ್ವೇಕರ ಚಟುವಟಿಕೆಗಳಿಗೂ ಒತ್ತು ನೀಡಬೇಕೆಂದು ತಿಳಿಸಿದರು.

ಈ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಾನ್ಯ ಶ್ರೀ ಸುಗಂದ್ರ ಹೆಚ್ ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಬಳ್ಳಾರಿ ಇವರು ವಹಿಸಿಕೊಂಡಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾಗಿ ಪ್ರಥಮ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಾದ ಸಿರಿ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಉಪನ್ಯಾಸಕ ಮಹೇಶ ಹೆಚ್‌ ನಿರೂಪಿಸಿದರು. ನಾಗರಾಜ ಸಿ ಸ್ವಾಗತಿಸಿದರು, ವೀರೇಶ್‌, ಹೆಚ್.ಎಂ. ವಂದಿಸಿದರು.

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here