2023 ರ ಜನವರಿ 3 ಮತ್ತು 4 ರಂದು ರಾಜ್ಯ ಸರಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಆಯೋಜನೆ: ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ

0
134

ಧಾರವಾಡ: ಡಿ.09: ಪ್ರತಿ ವರ್ಷದಂತೆ ಸರಕಾರಿ ನೌಕರರ ಜಿಲ್ಲಾ ಕ್ರೀಡಾಕೂಟವನ್ನು ಈ ವರ್ಷವು ಜನವರಿ 3 ಮತ್ತು 4 ರಂದು ಯಶಸ್ವಿಯಾಗಿ ಸಂಘಟಿಸಲು ಜಿಲ್ಲಾಡಳಿತ ಸಿದ್ದತೆ ಆರಂಭಿಸಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಓಓಡಿ ಸೌಲಭ್ಯ ನೀಡಲಾಗುವುದು. ಎಲ್ಲ ಇಲಾಖೆಗಳ ನೌಕರರು ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ತಿಳಿಸಿದರು.

ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾಡಳಿತ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ಜರುಗಿದ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜನೆಯ ಪೂರ್ವಸಿದ್ದತಾ ಸಭೆ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಕ್ರೀಡೆಗಳನ್ನು ಸಂಘಟಿಸಲಾಗುತ್ತದೆ. ವಯಕ್ತಿಕ ಮತ್ತು ಗುಂಪು ಆಟಗಳನ್ನು ಸಂಯೋಜಿಸಲಾಗಿದೆ. ಎಲ್ಲ ಇಲಾಖೆಗಳು ಕ್ರೀಡಾಕೂಟ ಆಯೋಜನೆಗೆ ಸಹಕಾರ ನೀಡಬೇಕು ಎಂದು ಅವರು ಹೇಳಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ದೈಹಿಕ ಶಿಕ್ಷಕರ ನಿಯೋಜನೆಗೆ ಕ್ರಮವಹಿಸಬೇಕು. ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಿಗೆ ವೈದ್ಯಕೀಯ ಪ್ರಥಮ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆಯನ್ನು ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಾಡಬೇಕೆಂದು ಅವರು ಸೂಚಿಸಿದರು.

ಕ್ರೀಡಾಕೂಟಕ್ಕೆ ಪೆÇಲೀಸ್ ಇಲಾಖೆಯಿಂದ ಪೆÇಲೀಸ್ ಬ್ಯಾಂಡ್ ಮತ್ತು ಭದ್ರತಾ ವ್ಯವಸ್ಥೆ ಒದಗಿಸಬೇಕು. ಉಳಿದಂತೆ ಎಲ್ಲ ಇಲಾಖೆ ಅಧಿಕಾರಿಗಳು ಕ್ರೀಡಾಕೂಟದಲ್ಲಿ ತಪ್ಪದೇ ಪಾಲ್ಗೊಳ್ಳಬೇಕೆಂದು ಅವರು ತಿಳಿಸಿದರು.

ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಪ್ರಾಸ್ತಾವಿಕವಾಗಿ ಮಾತನಾಡಿ, ಸರಕಾರದ ಸುತ್ತೋಲೆ ಅನುಸಾರ ಪ್ರಸಕ್ತ ಸಾಲಿನ ನೌಕರ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಜಿಲ್ಲಾಡಳಿತದೊಂದಿಗೆ ಚರ್ಚಿಸಿ, ಸಂಘಟನಾ ಸಭೆಯ ನಿರ್ದಾರದಂತೆ ಬರುವ ಜನವರಿ 3 ಮತ್ತು 4, 2023 ರಂದು ಕ್ರೀಡಾಕೂಟ ಆಯೋಜಿಸಲು ನಿರ್ಧರಿಸಲಾಗಿದೆ. ಈಗಾಗಲೇ ಆಸಕ್ತ ನೌಕರರು ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ.

ಕ್ರೀಡಾಕೂಟವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತದೆ. ಕ್ರೀಡಾಂಗಣ ಸಿದ್ದತೆ ಆರಂಭವಾಗಿದೆ. ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನೌಕರ ಭವನ ಹಾಗೂ ಆಲೂರ ವೆಂಕಟರಾವ್ ಭವನದಲ್ಲಿ ಸಂಘಟಿಸಲಾಗುವುದು ಎಂದು ಅವರು ತಿಳಿಸಿದರು.

ಕ್ರೀಡಾಕೂಟದಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರಿಗೆ ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ಡಿಸೆಂಬರ್ 25 ರ ವರೆಗೆ ವಿಸ್ತರಿಸಲಾಗಿದೆ. ಕ್ರೀಡಾಕೂಟ ಯಶಸ್ವಿಯಾಗಿ ಸಂಘಟಿಸಲು ಸರ್ಕಾರದ ಎಲ್ಲ ಇಲಾಖೆಗಳು ಸಾಧ್ಯವಾದಷ್ಟು ಅನುದಾನ ಬಿಡುಗಡೆ ಮಾಡಬೇಕೆಂದು ಅವರು ತಿಳಿಸಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣ ನಾಯಕ, ಸಾರಿಗೆ ಇಲಾಖೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಬಿ.ಶಂಕರಪ್ಪ, ಅಥ್ಲೆಟಿಕ್ ತರಬೇತಿದಾರರಾದ ಶ್ಯಾಮಲಾ ಪಾಟೀಲ, ಸರಕಾರಿ ನೌಕರ ಸಂಘದ ರಾಜ್ಯ ಪರಿಷತ್ ಸದಸ್ಯರಾದ ದೇವಿದಾಸ ಶಾಂತೀಕರ, ವಾಯ್.ಎಚ್. ನನವಿ, ತಾಲೂಕು ಅಧ್ಯಕ್ಷರಾದ ವಿ.ಎಪ್. ಚುಳಕಿ, ಡಾ. ಪ್ರಹ್ಲಾದ ಗೆಜ್ಜಿ, ಎಸ್.ಎನ್. ಅರಳಿಕಟ್ಟಿ, ಕೋಶಾಧ್ಯಕ್ಷ ರಾಜಶೇಖರ ಬಾಣದ, ಕಾರ್ಯದರ್ಶಿ ಮಂಜುನಾಥ ಯಡಹಳ್ಳಿ, ನಿರ್ದೇಶಕರಾದ ಕೆ. ಶ್ರೀಧರ, ರಾಜೇಶ ಕೊನರೆಡ್ಡಿ, ಮಂಜುನಾಥ ಜಂಗಳಿ, ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ಹೊನ್ನಪ್ಪನವರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ನೌಕರ ಸಂಘಟನೆಗಳ ಸದಸ್ಯರು ಭಾಗವಹಿಸಿ, ತಮ್ಮ ಸಲಹೆ ಸೂಚನೆ ನೀಡಿದರು.

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ ಸರಶೆಟ್ಟಿ ಅವರು ಸ್ವಾಗತಿಸಿದರು. ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿ ಮಲ್ಲಿಕಾರ್ಜುನ ಸೊಲಗಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here