ಡಿ.ಎಲ್.ಇಡಿ ಪೂರಕ ಪರೀಕ್ಷೆಗಳು ಡಿ.12ರಿಂದ 15ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ: ಡಿಸಿ ಪವನ್‍ಕುಮಾರ್ ಮಾಲಪಾಟಿ ಆದೇಶ

0
68

ಬಳ್ಳಾರಿ,ಡಿ.12: ಬಳ್ಳಾರಿ ನಗರದ ಜಿಲ್ಲಾ ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಪ್ರಥಮ ಡಿ.ಎಲ್.ಇಡಿ ಪ್ರಥಮ ಹಾಗೂ ದ್ವಿತೀಯ ವರ್ಷದ ಪೂರಕ ಪರೀಕ್ಷೆಗಳು ಡಿ.12ರಿಂದ 15ವರೆಗೆ ಬೆಳಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ.

ಈ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ ಅನಧಿಕೃತ ವ್ಯಕ್ತಿ ಮತ್ತು ಗುಂಪುಗಳ ಪ್ರವೇಶÀ ನಿಷೇಧಿಸಿದ್ದು, ಬೆಳಗ್ಗೆ 10ರಿಂದ ಸಂಜೆ 5 ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನಲ್ಲಿರುವ ಜೆರಾಕ್ಸ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳನ್ನು ಮುಚ್ಚುವಂತೆ ಆದೇಶಿಸಿದೆ. ಈ ಆದೇಶವು ಪರೀಕ್ಷಾ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here