ಬಸ್‌ಗಾಗಿ ವಿದ್ಯಾರ್ಥಿಗಳ ಪರದಾಟ; ಸಮಯಕ್ಕೆ ಸರಿಯಾಗಿ ಬಸ್ ಬಿಡಲು ಆಗ್ರಹ

0
211

ಕೊಟ್ಟೂರು : ಸರಿಯಾದ ಸಮಯಕ್ಕೆ ಬಸ್ ಬಿಡುವಂತೆ ಬಸ್ ನಿಲ್ದಾಣದಲ್ಲಿ ಸಾಯಂಕಾಲ ಬಸ್ ತಡೆದು ಕೆಲ ಕಾಲ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆಯನ್ನು ಕೈಗೊಂಡರು.

ಕೊಟ್ಟೂರಿನಿಂದ ಹ್ಯಾಳ್ಯಾ, ಬೇವೂರು ಮಾರ್ಗವಾಗಿ ಅಂಬಳಿ, ಕೋಗಳಿ, ಕೋಡಿಹಳ್ಳಿ ಗ್ರಾಮಗಳಿಗೆ ಸಾಯಂಕಾಲ ಸರಿಯಾದ ಸಮಯಕ್ಕೆ ಬಸ್ ಬಿಡುವಂತೆ ಬಸ್ ತಡೆದು ಶಾಲಾ ಕಾಲೇಜಿನ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ಕೈಗೊಂಡರು.

ಈ ಮಾರ್ಗದಲ್ಲಿ ಪ್ರತಿದಿನ ಸುಮಾರು ನೂರಕ್ಕೂ ಹೆಚ್ಚು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ತೆರಳುತ್ತಿದ್ದು ಸರಿಯಾದ ಸಮಯಕ್ಕೆ ಬಸ್ ಬಾರದೆ ಇರುವುದರಿಂದ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳು ಪ್ರತಿನಿತ್ಯ ತಮ್ಮ ಊರುಗಳಿಗೆ ತೆರಳಲು ಪರದಾಡುವಂತಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ.

ನಾವು ಶಾಲಾ-ಕಾಲೇಜಿನಿಂದ ತಡವಾಗಿ ಮನೆಗೆ ಹೋಗುತ್ತಿರುವುದರಿಂದ ಮನೆಯಲ್ಲಿ ಏಕೆ ತಡವಾಗಿ ಬರುತ್ತೀರಿ ಎಂದು ಪ್ರಶ್ನಿಸುತ್ತಾರೆ ಅದಕ್ಕೆ ನಾವು ಏನು ಉತ್ತರವನ್ನು ಕೊಡಬೇಕು ಎಂದು ವಿದ್ಯಾರ್ಥಿನಿಯರು ತಮ್ಮ ಅಳಲನ್ನು ತೋಡಿಕೊಂಡರು.

ಸಾಯಂಕಾಲ ಒಂದೊಂದು ಬಾರಿ ಬಸ್ ಆರು ಗಂಟೆಗೆ ಏಳು ಗಂಟೆಗೆ ಬಸ್ ಬರುತ್ತಿರುವುದರಿಂದ ಮನೆಗಳಿಗೆ ತೆರಳಲು ಪರದಾಡುವಂತಹ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸರಿಯಾದ ಸಮಯಕ್ಕೆ ಬಸ್ಸಿನ ವ್ಯವಸ್ಥೆಯನ್ನು ಮಾಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು
ವಿದ್ಯಾರ್ಥಿಗಳು ತಮ್ಮ ಆಕ್ರೋಶವನ್ನು ಮಾಧ್ಯಮದ ಮೂಲಕ ವ್ಯಕ್ತಪಡಿಸಿದರು.

ನಂತರ ಪೊಲೀಸ್ ಸಿಬ್ಬಂದಿ ಹಾಗೂ ಬಸ್ ಸಂಚಾರ ನಿಯಂತ್ರಕರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಕೈಬಿಟ್ಟರು.

ಬಸ್ ಗಳಿಗೆ ಡ್ರೈವರ್ ಗಳ ಮತ್ತು ಕಂಡಕ್ಟರ್ ಮತ್ತು ಕೊರತೆ ಇರುವುದರಿಂದ ಈ ಸಮಸ್ಯೆ ಕಾಣುತ್ತಿದೆ.
-ಅಂಜಿನಪ್ಪ
ಬಸ್ ಸಂಚಾರ ನಿಯಂತ್ರಕರು,ಕೊಟ್ಟೂರು

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here