ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯಿದೆ ಜಾಗೃತಿ ವಾಹನಕ್ಕೆ ಚಾಲನೆ ನೀಡಿದ ತಹಶೀಲ್ದಾರ್ ಕೆ.ಎಂ. ಗುರುಬಸವರಾಜ್

0
73

ಸಂಡೂರು:ಡಿ:31:-ಪ.ಜಾತಿ, ಪ.ಪಂಗಡದ ದೌರ್ಜನ್ಯ ತಡೆ ಕಾಯಿದೆಯ ಕುರಿತು ಅರಿವು ಮೂಡಿಸುವ ಸಲುವಾಗಿ ಪ್ರಚಾರ ಹಾಗೂ ವಿಚಾರ ಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಕೆ.ಎಂ.ಗುರುಬಸವರಾಜ ಹೇಳಿದರು.

ಪಟ್ಟಣದ ತಹಸಿಲ್ ಕಚೇರಿ ಎದುರು ಜಾಗೃತಿ ವಾಹನಕ್ಕೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆ ಎಡಿ ಎನ್.ಕೆ.ವೆಂಕಟೇಶ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಮತ್ತು ಉಪ ನಿರ್ದೇಶಕರ ಸೂಚನೆಯಂತೆ ಮತ್ತು ತಾಲೂಕಿನ ಚೋರನೂರು ಹೋಬಳಿಯ ಅಗ್ರಹಾರ ಮತ್ತು ಗೊಲ್ಲಲಿಂಗಮ್ಮನಹಳ್ಳಿಯಲ್ಲಿ ವಿಚಾರ ಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ದಸಂಸ ಸಂಚಾಲಕ ರಾಮಕೃಷ್ಣ ಹೆಗಡೆ ಮಾತನಾಡಿ, ತಾಲೂಕಿನ ಹಲವು ಹಳ್ಳಿಗಳಲ್ಲಿ ಅಸ್ಪಶ್ಯತೆ ಜೀವಂತವಾಗಿದೆ. ತಾಲೂಕು ಆಡಳಿತ ಅಸ್ಪೃಶ್ಯತೆ ಹೋಗಲಾಡಿಸಲು ಇಂಥ ಕಾರ್ಯಕ್ರಮಗಳನ್ನು ಆಗಾಗ್ಗೆ ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು ಎಂದರು.

ಬಿಇಒ ಮೈಲೇಶ ಬೇವೂರು ಮಾತನಾಡಿ, ಅಸ್ಪೃಶ್ಯತೆಯ ನಿವಾರಣೆ ಕುರಿತು ಬೀದಿ ನಾಟಕ, ಕರ ಪತ್ರಗಳನ್ನು ಹಂಚುವ ಮೂಲಕ ಮೂಡಿಸಬೇಕು ಎಂದರು. ಜಾಗೃತಿ

ಈ ಸಂಧರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎನ್ ಕೆ ವೆಂಕಟೇಶ್, ಬಿಸಿಯೂಟ ಸಹಾಯಕ ನಿರ್ದೇಶಕ ಶ್ರೀಧರ್ ಮೂರ್ತಿ, ಆರ್‌ಎಫ್‌ಒ ಉಮೇಶ, ತಾ.ಪಂ. ಎಡಿ ದುರುಗಪ್ಪ ಸೇರಿದಂತೆ ನಾನಾ ಸಂಘಟನೆಗಳ ಮುಖಂಡರು ಇತರರು ಇದ್ದರು.

LEAVE A REPLY

Please enter your comment!
Please enter your name here