ಲೋಕಾಯುಕ್ತರಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ

0
57

ಬಳ್ಳಾರಿ,ಜ.06 : ಬಳ್ಳಾರಿ ಲೋಕಾಯುಕ್ತ ವಿಭಾಗದಿಂದ ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕಂಪ್ಲಿ, ಕುರುಗೋಡು, ಸಂಡೂರು, ಮತ್ತು ಸಿರುಗುಪ್ಪ ತಾಲ್ಲೂಕು ಕೇಂದ್ರ ಕಚೇರಿಗಳಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರವನ್ನು ಜ.11ರಿಂದ 24ರವರೆಗೆ ಏರ್ಪಡಿಸಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೆÇಲೀಸ್ ಅಧೀಕ್ಷಕರಾದ ಪಿ.ಎ.ಪುರುಷೋತ್ತಮ ಅವರು ತಿಳಿಸಿದ್ದಾರೆ.
ಜ.11ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 2ರವರೆಗೆ ಸಿರುಗುಪ್ಪ ತಹಶೀಲ್ದಾರರ ಕಚೇರಿ ಸಭಾಂಗಣ, ಜ.13ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 2ರವರೆಗೆ ಕಂಪ್ಲಿ ತಹಶೀಲ್ದಾರರ ಕಚೇರಿ ಸಭಾಂಗಣ, ಜ.17ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 2ರವರೆಗೆ ಕುರುಗೋಡು ತಹಶೀಲ್ದಾರರ ಕಚೇರಿ ಸಭಾಂಗಣ, ಜ.18ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 2ರವರೆಗೆ ಸಂಡೂರು ತಹಶೀಲ್ದಾರರ ಕಚೇರಿ ಸಭಾಂಗಣ, ಜ.24ರಂದು ಬೆಳಗ್ಗೆ 11:30ರಿಂದ ಮಧ್ಯಾಹ್ನ 2ರವರೆಗೆ ಬಳ್ಳಾರಿಯ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು ಸ್ವೀಕರಿಸಿದ್ದಾರೆ.
ಆದ್ದರಿಂದ ಸಾರ್ವಜನಿಕರು ನಿಗದಿತ ದಿನ, ಸ್ಥಳಗಳಲ್ಲಿ ತಮ್ಮ ಕುಂದು ಕೊರತೆಗಳಿರುವ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here