ವಿಧಾನಸಭಾ ಚುನಾವಣೆ; ಸೆಕ್ಟರ್ ಅಧಿಕಾರಿಗಳ ಜೊತೆ ಸಭೆ

0
73

ಮಡಿಕೇರಿ ಜ.07:-ವಿಧಾನಸಭಾ ಚುನಾವಣೆ ಸಂಬಂಧ ಸೆಕ್ಟರ್ ಅಧಿಕಾರಿಗಳ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಸೆಕ್ಟರ್ ಅಧಿಕಾರಿಗಳು ಮತ್ತು ಪೊಲೀಸ್ ಸೆಕ್ಟರ್ ಅಧಿಕಾರಿಗಳು ಜಂಟಿಯಾಗಿ ತಮ್ಮ ವ್ಯಾಪ್ತಿಯ ಮತಗಟ್ಟೆ ಪ್ರದೇಶ ಗ್ರಾಮಗಳಿಗೆ ಭೇಟಿ ನೀಡಿ ಅಗತ್ಯ ಮಾಹಿತಿ ಒದಗಿಸುವಂತೆ ಸೂಚಿಸಿದರು.
ಈಗಾಗಲೇ ವಿಧಾನಸಭಾ ಚುನಾವಣೆ ಸಿದ್ಧ್ದತೆಗಳು ನಡೆದಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳು ಇದೆಯೇ ಎಂಬುದನ್ನು ಖಾತರಿಪಡಿಸಿಕೊಂಡು ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಸೆಕ್ಟರ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಿಗೆ ತೆರಳಿ ಶೌಚಾಲಯ, ಕುಡಿಯುವ ನೀರು, ಪೀಠೋಪಕರಣ, ರ್ಯಾಂಪ್‍ಹಾಗೂ ವಿದ್ಯುತ್ ವ್ಯವಸ್ಥೆ ಇತರೆ ಸೌಕರ್ಯಗಳು ಇದೆಯೇ ಎಂಬುದನ್ನು ಪರಿಶೀಲಿಸಿ ವರದಿ ನೀಡುವಂತೆ ಸೆಕ್ಟರ್ ಅಧಿಕಾರಿಗಳಿಗೆ ಸೂಚಿಸಿದರು.
ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶಗಳು ಕಂಡುಬರುತ್ತದೆಯೇ ಎಂಬ ಬಗ್ಗೆ ವರದಿ ನೀಡಬೇಕು. ಈ ಹಿಂದೆ ಯಾವುದಾದರೂ ಪ್ರಕರಣಗಳು ದಾಖಲಾಗಿದ್ದಲ್ಲಿ ಮಾಹಿತಿ ಒದಗಿಸುವುದು. ವಲ್ನರಬಲ್ ಸಂಬಂಧಿಸಿದಂತೆ ತಮ್ಮ ಮತಗಟ್ಟೆ ಬಗ್ಗೆ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೇಳಿದರು.
‘ಪ್ರತಿಯೊಂದು ಚುನಾವಣೆಯಲ್ಲೂ ಸಹ ಹೊಸ ಹೊಸ ವಿಷಯ ಕಲಿಯುವುದು ಇರುತ್ತದೆ. ಆದ್ದರಿಂದ ಚುನಾವಣಾ ವಿಷಯದಲ್ಲಿ ಉದಾಸೀನ ಮಾಡದೆ ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.’
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ಮಾತನಾಡಿ ಈಗಾಗಲೇ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಸೆಕ್ಟರ್ ಹಾಗೂ ಪೊಲೀಸ್ ಸೆಕ್ಟರ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ತಮ್ಮ ತಮ್ಮ ವ್ಯಾಪ್ತಿಯ ವಲ್ನರಬಲ್ ಹಾಗೂ ಮತಗಟ್ಟೆಗಳಲ್ಲಿನ ಸೌಲಭ್ಯ ಸಂಬಂಧಿಸಿದಂತೆ ಕೂಡಲೇ ಮಾಹಿತಿ ಒದಗಿಸುವಂತೆ ತಿಳಿಸಿದರು. ಚುನಾವಣಾಧಿಕಾರಿಗಳಾದ ಯತೀಶ್ ಉಳ್ಳಾಲ್(ಮಡಿಕೇರಿ ವಿಧಾನಸಭಾ ಕ್ಷೇತ್ರ), ಶಬಾನಾ ಎಂ.ಷೇಕ್(ವಿರಾಜಪೇಟೆ ವಿಧಾನಸಭಾ ಕ್ಷೇತ್ರ), ಡಿವೈಎಸ್‍ಪಿ ಗಜೇಂದ್ರ ಪ್ರಸಾದ್, ತಹಶೀಲ್ದಾರರಾದ ಅರ್ಚನಾ ಭಟ್, ಸೆಕ್ಟರ್ ಅಧಿಕಾರಿಗಳು ಇತರರು ಇದ್ದರು.

LEAVE A REPLY

Please enter your comment!
Please enter your name here