ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಆಯ್ಕೆ ಸಮಿತಿ ಸಭೆ

0
87

ಬಳ್ಳಾರಿ,ಜ.18 : ಬಳ್ಳಾರಿ ಜಿಲ್ಲೆಯಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ 2022-23 ನೇ ಸಾಲಿಗೆ ಸಾಹಿತ್ಯ, ಶಿಕ್ಷಣ, ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪ್ರತಿಭೆಯನ್ನು ಗುರುತಿಸಿ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಲು ಈಗಾಗಲೇ 3 ಅರ್ಜಿಗಳು ಸಲ್ಲಿಕೆಯಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಶಸ್ತಿ ವಿತರಿಸಲಾಗುತ್ತದೆ.
ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಲಿಂಗಮೂರ್ತಿ ಅವರು ಹೇಳಿದರು.
ಬುಧವಾರದಂದು ಜಿಪಂ ಕಚೇರಿ ಸಭಾಂಗಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ 2022-23 ನೇ ಸಾಲಿನಲ್ಲಿ ಸಾಹಿತ್ಯ, ಶಿಕ್ಷಣ, ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಕ್ಷೇತ್ರಗಳಲ್ಲಿ ಪ್ರತಿಭೆಯನ್ನು ಗುರುತಿಸಿ ಪ್ರಶಸ್ತಿ ನೀಡಲು ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು ಇದರನ್ವಯ ಆಯ್ಕೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ವಿಜಯಕುಮಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಹರಿಸಿಂಗ್ ರಾಥೋಡ್ ಸೇರಿದಂತೆ ಸಮಿತಿ ಸದಸ್ಯರು ಹಾಗೂ ಎನ್‍ಜಿಒಗಳು ಇದ್ದರು.

LEAVE A REPLY

Please enter your comment!
Please enter your name here