ಸಂಡೂರು: ವಿವಿಧೆಡೆ ಬಸ್ ಸಂಚಾರದಲ್ಲಿ ವ್ಯತ್ಯಯ.

0
291

ಸಂಡೂರು:ಜ:18: ದಿನಾಂಕ: 18/01/2023 ರಿಂದ 20/01/2023 ವರೆಗೆ ಬಸ್ಸುಗಳ ದೈನಂದಿನ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು ಸಂಡೂರು ಬಸ್ ಡಿಪೋ ಘಟಕ ವ್ಯವಸ್ಥಾಪಕರಾದ ವೆಂಕಟೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ದಿನಾಂಕ: 19/01/2023 ರಂದು ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಿರುವ ಹಕ್ಕು ಪತ್ರ ವಿತರಣಾ ಹಾಗೂ ಸರ್ಕಾರದ ವಿವಿಧ ಕಾರ್ಯಕ್ರಮ ಲೋಕಾರ್ಪಣೆ ಮಾಡಲು ಸನ್ಮಾನ್ಯ ಪ್ರಧಾನಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಡಳಿತದ ಆದೇಶದ ಮೇರೆಗೆ ಫಲಾನುಭವಿಗಳನ್ನು ಕರೆತರಲು ಬಳ್ಳಾರಿ ವಿಭಾಗದಿಂದ ಯಾದಗಿರಿ ವಿಭಾಗಕ್ಕೆ ಒಟ್ಟು 75 ವಾಹನಗಳನ್ನು ಸಾಂಧರ್ಬಿಕ ಒಪ್ಪಂದದ ಮೇಲೆ ಒದಗಿಸಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ದಿನಾಂಕ: 18/01/2023 ರಿಂದ 20/01/2023 ವರೆಗೆ ಬಳ್ಳಾರಿ, ಸಿರುಗುಪ್ಪ, ತೆಕ್ಕಲಕೋಟೆ, ಕುರುಗೋಡು, ಕುಡಿತಿನಿ, ಕಂಪ್ಲಿ, ಸಂಡೂರು ಕಡೆಗಳಿಂದ ವಿವಿಧ ಸ್ಥಳಗಳಿಗೆ ತೆರಳುವ ಬಸ್ಸುಗಳ ದೈನಂದಿನ ಅನುಸೂಚಿಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ ಕಾಲೇಜು ವಿಧ್ಯಾರ್ಥಿಗಳು ಸಹಕರಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here