ಅಂಗನವಾಡಿ ಹೋರಾಟ : ನಾಯಕರ ಮೇಲೆ ಪ್ರಕರಣ ದಾಖಲು

0
123

ಬೆಂಗಳೂರು : ಅಂಗನವಾಡಿ ನೌಕರರನ್ನು ಶಿಕ್ಷಕಿಯರೆಂದು ಪರಿಗಣಿಸಬೇಕು. ಗ್ರ್ಯಾಚ್ಯುಟಿ ಪಾವತಿಸಬೇಕು’ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಸಂಘಟನೆಯ ನಾಯಕರ ಮೇಲೆ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

10 ದಿನಗಳ ಕಾಲ ನಡೆದ ‘ಪ್ರತಿಭಟನೆ ಸಂದರ್ಭದಲ್ಲಿ ಹೈಕೋರ್ಟ್ ನೀಡಿರುವ ಆದೇಶ ಉಲ್ಲಂಘಿಸಿದ್ದಾರೆ, ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದರು. ಹೀಗಾಗಿ, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಸಿಐಟಿಯು ರಾಜ್ಯ ಅಧ್ಯಕ್ಷೆ ಎಸ್. ವರಲಕ್ಷ್ಮಿ, ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಸುನಂದಾ, ಮುಖಂಡರಾದ ಶಾಂತಾ ಘಂಟಿ, ಜಿ. ಕಮಲಾ ಹಾಗೂ ಜಿಲ್ಲಾ ಘಟಕಗಳ ಪ್ರಮುಖರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ’ ಎಂದು ತಿಳಿದುಬಂದಿದೆ.

ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದೇವೆ. ದೂರು ದಾಖಲಿಸುವ ಮೂಲಕ ಹೆದರಿಸುವ ಮತ್ತು ಪ್ರತಿಭಟನೆಯ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನವನ್ನು ಸರಕಾರ ಮಾಡಿದೆ. ಈ ದೂರುಗಳಿಗೆ ಹೆದರುವುದಿಲ್ಲ. ಪ್ರತಿಭಟನೆ ನಮ್ಮ ಹಕ್ಕು ಎಂದು ವರಲಕ್ಷ್ಮೀ ಜನಶಕ್ತಿ ಮೀಡಿಯಾಗೆ ಪ್ರತಿಕ್ರಿಯಿಸಿದ್ದಾರೆ.

LEAVE A REPLY

Please enter your comment!
Please enter your name here