ಮುಜರಾಯಿ ದೇವಸ್ಥಾನಗಳನ್ನ ಶೂನ್ಯ ತ್ಯಾಜ್ಯಆವರಣವನ್ನಾಗಿಸಲಿರುವ ಸ್ವಚ್ಚ ಮಂದಿರ ಅಭಿಯಾನ: ಸಚಿವೆ ಶಶಿಕಲಾ ಜೊಲ್ಲೆ.

0
40

ಮಂಡ್ಯ:ಪೆ:10:- ಶ್ರೀರಂಗಪಟ್ಟಣ ನಿಮಿಷಾಂಬ ದೇವಸ್ಥಾನ ಹಾಗೂ ಇತರೆ 11 ದೇವಸ್ಥಾನಗಳಲ್ಲಿ ಶೂನ್ಯ ತ್ಯಾಜ್ಯ ವಿಲೇವಾರಿ ಘಟಕಗಳ ಉದ್ಘಾಟನೆಯನ್ನು ಮಾಡಿದರು

ಪ್ರಧಾನಿ ನರೇಂದ್ರ ಮೋದಿಜೀ ಅವರ “ಸ್ವಚ್ಚ ಭಾರತ” ಕಲ್ಪನೆ ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳ ಒತ್ತಾಸೆಯಂತೆ ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳನ್ನ ಶೂನ್ಯ ತ್ಯಾಜ್ಯ ಆವರಣವನ್ನಾಗಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ “ಸ್ವಚ್ಚ ಮಂದಿರ ಅಭಿಯಾನ” ಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಹೇಳಿದರು.

ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಶ್ರೀ ನಿಮಿಷಾಂಭ ದೇವಸ್ಥಾನದಲ್ಲಿ ಹಾಗೂ 11 ಇತರೆ ದೇವಸ್ಥಾನಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ದೇವಸ್ಥಾನಗಳಲ್ಲಿ ಸ್ವಚ್ಚ ಹಾಗೂ ನೈರ್ಮಲ್ಯದ ಪರಿಸರವನ್ನು ಕಾಪಾಡುವ ಉದ್ದೇಶದಿಂದ ಸ್ವಚ್ಚ ಮಂದಿರ ಅಭಿಯಾನವನ್ನು ಪ್ರಾರಂಭಿಸಬೇಕು ಕಂಡಿದ್ದ ಕನಸು ಇಂದು ನನಸಾಗಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ಹೆಜ್ಜೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಜಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವಸ್ಥಾನಗಳ ಅಭಿವೃದ್ದಿಗೆ ಬಹಳಷ್ಟು ಮಹತ್ವ ನೀಡಿದ್ದಾರೆ. ಕಾಶಿ ಕಾರಿಡಾರ್‌, ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ದಿ, ಅಯೋಧ್ಯೆ ಮಂದಿರ ಸ್ಥಾಪನೆ ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ಹಸಿ, ಒಣ ಕಸ ಮತ್ತು ಹೂಗಳನ್ನ ಪಾವಿತ್ರ್ಯವನ್ನು ಕಾಪಾಡಿ ವಿಲೇವಾರಿ ಮಾಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.

ದೇವಸ್ಥಾನದ ಪರಿಸರ ಕಾಪಾಡಲು ಅಧಿಕಾರಿಗಳಿಗೆ ತಾಕೀತು:-
ತ್ಯಾಜ್ಯ ವಿಲೇವಾರಿ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಗಳನ್ನ ನೀಡದೆ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಮೂಲಕ ದೇವಸ್ಥಾನ ಹಾಗೂ ಅವುಗಳ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಚವಾಗಿಡಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.

ಶೂನ್ಯ ತ್ಯಾಜ್ಯ ಆವರಣವನ್ನಾಗಿಸುವ ಗುರಿ:-
ಪ್ರಧಾನಿ ನರೇಂದ್ರ ಮೋದಿಜೀ ಅವರ ಸ್ವಚ್ಚ ಮಂದಿರ ಪರಿಕಲ್ಪನೆಯನ್ನು ರಾಜ್ಯದಲ್ಲಿ ಅಳವಡಿಸಿಕೊಳ್ಳುವುದು ಪ್ರಮುಖ ಉದ್ದೇಶವಾಗಿದೆ. ಇತ್ತೀಚಿನ ದಿನಗಳಲ್ಲಿ ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಾಗುವುದರ ಜೊತೆಯಲ್ಲಿ ತ್ಯಾಜ್ಯ ಉತ್ಪಾದನೆಯೂ ಹೆಚ್ಚಾಗುತ್ತಿದೆ. ಶ್ರೀ ನಿಮಿಷಾಂಭ ದೇವಸ್ಥಾನದಲ್ಲಿ ದಿನನಿತ್ಯ ಸುಮಾರು 400 ಕೆಜಿಯಷ್ಟು ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಹಬ್ಬದ ಹಾಗೂ ವಿಶೇಷ ದಿನಗಳಲ್ಲಿ ಇದರ ಪ್ರಮಾಣ 600 ಕೆಜಿಗಳಿಗೆ ಹೆಚ್ಚಾಗುತ್ತದೆ. ಇದೇ ರೀತಿ ಮೊದಲ ಹಂತದಲ್ಲಿ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಪ್ರಾರಂಭಿರುವ 12 ದೇವಸ್ಥಾನಗಳಲ್ಲಿ ಸಾಮಾನ್ಯ ದಿನಗಳಲ್ಲಿ 3500 ಕೆಜಿಯಷ್ಟು ತ್ಯಾಜ್ಯ ಉತ್ಪತ್ತಿಯಾದರೆ, ವಿಶೇಷ ದಿನಗಳ್ಲಿ 12000 ಕೆಜಿಗಳಷ್ಟು ತಲುಪುತ್ತದೆ. ಇದನ್ನ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಹಾಗೂ ಭಕ್ತಾದಿಗಳಿಗೆ ಉತ್ತಮ ಪರಿಸರವನ್ನು ನೀಡುವ ಮೂಲಕ ದೇವಸ್ಥಾನಗಳನ್ನ ಶೂನ್ಯ ತ್ಯಾಜ್ಯ ಆವರಣವನ್ನಾಗಿಸುವುದು ಪ್ರಮುಖ ಗುರಿಯಾಗಿದೆ ಎಂದರು.

LEAVE A REPLY

Please enter your comment!
Please enter your name here