ಸಿಡಿಬಂಡಿ ಉತ್ಸವ ಪೂರ್ವಭಾವಿ ಸಿದ್ಧತಾ ಸಭೆ,ಶ್ರೀ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ಉತ್ಸವ ಅರ್ಥಪೂರ್ಣ ಆಚರಣೆ ಫೆ.28ರಂದು: ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು

0
309

ಬಳ್ಳಾರಿ,ಫೆ.12: ಬಳ್ಳಾರಿಯ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ಉತ್ಸವ ಇದೇ ಫೆಬ್ರವರಿ 28 ರಂದು ನಡೆಯಲಿದ್ದು, ಸಿಡಿಬಂಡಿ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ನಡೆದ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ಉತ್ಸವದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇವಸ್ಥಾನದ ನೈರ್ಮಲೀಕರಣಕ್ಕೆ ಫೆ.27ರಿಂದ ದೇವಸ್ಥಾನದ ಸುತ್ತಲು ಜಾತ್ರಾ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಹಾಗೂ ಕಸದ ವಿಲೇವಾರಿಯ ಕುರಿತು ಮಹಾನಗರ ಪಾಲಿಕೆಯ ಸಿಬ್ಬಂದಿಯವರಿಗೆ ಸೂಚಿಸಿದರು.
ಸಿಡಿಬಂಡಿ ಉತ್ಸವದಲ್ಲಿ ಸುಮಾರು 2 ರಿಂದ 3 ಲಕ್ಷ ಜನರು ಸೇರುವ ಸಾಧ್ಯತೆ ಇದೆ. ಬರುವ ಸಾರ್ವಜನಿಕರು ಮತ್ತು ಭಕ್ತಾಧಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ, ಪೆÇಲೀಸ್ ಬಂದೋಬಸ್ತ್ ಮಾಡಬೇಕು. ಹಾಗೂ ಪ್ರಚಾರದ ವ್ಯವಸ್ಥೆಗೆ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ಮುದ್ರಣ ಮಾಡಿ ಸಾಕಷ್ಟು ಪ್ರಚಾರ ಮಾಡುವಂತೆ ತಿಳಿಸಿದರು.
ಆರೋಗ್ಯದ ವಿಚಾರಕ್ಕೆ ಸಂಬಂಧಿಸಿದಂತೆ ವೈದ್ಯಾಧಿಕಾರಿಗಳ ತಂಡವನ್ನು ರಚಿಸಿ, ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಬೇಕು ಎಂದು ಸಂಬಂಧಿಸಿದ ಆಧಿಕಾರಿಗಳಿಗೆ ಸೂಚಿಸಿದರು.
ಅಗ್ನಿಶಾಮಕದಳ ಸೇವೆ, ಸಾರ್ವಜನಿಕರು ಮತ್ತು ಭಕ್ತಾಧಿಗಳಿಗೆ ಸಾಲಿನಲ್ಲಿ ಬಂದು ದೇವಿಯ ದರ್ಶನ ಪಡೆಯಲು ಬ್ಯಾರಿಕೇಡ್ ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಆಳವಡಿಸಬೇಕು ಎಂದು ಹೇಳಿದರು.
ನಗರದ ಸುತ್ತಮುತ್ತ ಹಳ್ಳಿಗಳಿಂದ ಬರುವವರಿಗೆ ಹೆಚ್ಚುವರಿ ಬಸ್‍ಗಳನ್ನು ನಿಯೋಜಿಸಬೇಕೆಂದು ಕೆಕೆಆರ್‍ಟಿಸಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ, ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ರಂಜಿತ್ ಕುಮಾರ್ ಬಂಡಾರು, ಎಸಿ ಹೇಮಂತ್ ಕುಮಾರ್, ಎಡಿಸಿ ಪಿ.ಎಸ್.ಮಂಜುನಾಥ, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಎಂ.ಎಚ್.ಪ್ರಕಾಶ್ ರಾವ್, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ದೇವಸ್ಥಾನದ ಪ್ರಧಾನ ಧರ್ಮಕರ್ತರಾದ ಪಿ.ಎಂ.ರಾಜಶೇಖರ, ಅರ್ಚಕ ಧರ್ಮಕರ್ತರು, ಸಿಡಿಬಂಡಿ ಬಾಬುದಾರರು, ಗಾಣಿಗ ಸಂಘದವರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರುಗಳು ಸೇರಿದಂತೆ ಇನ್ನೀತರರು ಇದ್ದರು.

LEAVE A REPLY

Please enter your comment!
Please enter your name here