ಹೆಣ್ಣು ಮಕ್ಕಳ ಕ್ರಿಕೆಟ್‌ ಪಂದ್ಯಾವಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರಿಂದ ಚಾಲನೆ

0
83

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರಾಮೀಣಭೀವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೆಹರು ಯುವ ಕೇಂದ್ರ, ಎನ್ ಎಸ್ ಎಸ್ ಘಟಕದ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹೆಣ್ಣು ಮಕ್ಕಳ ಕ್ರಿಕೆಟ್ ಪಂದ್ಯಾವಳಿವು ಪಿ.ಇ.ಎಸ್ ಮೈದಾನದಲ್ಲಿ ನಡೆಯಿತು.

ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್ ಪೇಟೆ, ನಾಗಮಂಗಲ, ಮಳವಳ್ಳಿ, ಮದ್ದೂರು, ಮಂಡ್ಯ ತಾಲ್ಲೂಕುಗಳಿಂದ ತಲಾ ಒಂದು ಟೀಮ್ ಆಯ್ಕೆಯಾಗಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ಹೆಣ್ಣು ಮಕ್ಕಳಿಗೆ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅವಕಾಶಗಳು ಸಿಗುವುದು ತುಂಬಾ ಕಡಿಮೆ. ಈ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದ್ದೇವೆ. ಮುಂಬರುವ ದಿನಗಳಲ್ಲಿ ಹೆಣ್ಣು ಮಕ್ಕಳು ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿ ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಲಿ ಎಂದರು.

ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಎಂ.ಬಾಬು ಸಂಜಿವಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂಪ್ರಕಾಶ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೇಣುಗೋಪಾಲ್, ವೀಣಾ ಸೇರಿದಂತೆ ಇನ್ನಿತರರು ಇದ್ದರು.

LEAVE A REPLY

Please enter your comment!
Please enter your name here