ಜಿಲ್ಲಾ ನ್ಯಾಯಾಲಯದಲ್ಲಿ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ

0
67

ಮಡಿಕೇರಿ ಮಾ.09:-ವಿದ್ಯುನ್ಮಾನ ಮತಯಂತ್ರ(ಇವಿಎಂ) ಹಾಗೂ ವಿವಿಪ್ಯಾಟ್(ಮತದಾನ ಖಾತ್ರಿ ಯಂತ್ರ) ಪ್ರಾತ್ಯಕ್ಷಿಕೆಯು ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಎಂ.ಭೃಂಗೇಶ್ ಅವರ ಸಮ್ಮುಖದಲ್ಲಿ ಗುರುವಾರ ನಡೆಯಿತು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಜಿಲ್ಲೆಯಲ್ಲಿ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ 542 ಮತಗಟ್ಟೆ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಭಾರತ ಚುನಾವಣಾ ಆಯೋಗವು ಇವಿಎಂ/ ವಿವಿಪ್ಯಾಟ್‍ಗಳ ಕುರಿತು ಜಾಗೃತಿ ಮತ್ತು ಪ್ರಾತ್ಯಕ್ಷಿಕೆ ನೀಡುವುದರ ಮೂಲಕ ಮತದಾರರಲ್ಲಿ/ ನಾಗರಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದರು.
ಇವಿಎಂ/ ವಿವಿಪ್ಯಾಟ್‍ಗಳ ಕುರಿತು ಜಾಗೃತಿ ಮತ್ತು ಪ್ರಾತ್ಯಕ್ಷಿಕೆಗೆ ಸಂಬಂಧಿಸಿದಂತೆ, ಡಮ್ಮಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ವಿವರಿಸಿದರು.
ಇವಿಎಂ ಡೆಮೊಂಸ್ಟ್ರೇಷನ್ ಕೇಂದ್ರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, 208-ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯಾದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಾದ ತಾಲ್ಲೂಕು ಕಚೇರಿ ವಿರಾಜಪೇಟೆ ಇಲ್ಲಿ ಇವಿಎಂ/ ವಿವಿಪ್ಯಾಟ್‍ಗಳ ಪ್ರಾತ್ಯಕ್ಷಿಕೆ ಕೇಂದ್ರವನ್ನು ಫೆಬ್ರವರಿ, 21 ರಂದು ಸ್ಥಾಪಿಸಿ ಚಾಲನೆ ನೀಡಲಾಗಿದೆ. ಇವಿಎಂ/ ವಿವಿಪ್ಯಾಟ್‍ಗಳ ಪ್ರಾತ್ಯಕ್ಷಿಕೆ ಕೇಂದ್ರವು ಭಾರತ ಚುನಾವಣಾ ಆಯೋಗವು ಚುನಾವಣೆ ಘೋಷಣೆ ಮಾಡುವ ದಿನಾಂಕದವರೆಗೆ ಇರುತ್ತದೆ. ಈ ಕೇಂದ್ರಕ್ಕೆ ನಾಗರಿಕರು, ಮತದಾರರು ಬಂದು ಮತದಾನ ಮಾಡುವುದರ ಬಗ್ಗೆ ಚುನಾವಣೆ/ ಮತದಾನದಲ್ಲಿ ಭಾಗವಹಿಸಲು ಕೋರಿದೆ.
ಮೊಬೈಲ್ ಡೆಮೊಂಸ್ಟ್ರೇಷನ್ ವ್ಯಾನ್(ಸಂಚಾರಿ ವಾಹನ):-ಕೊಡಗು ಜಿಲ್ಲೆಯ 208 ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಎಲ್ಲಾ 542 ಮತಗಟ್ಟೆಗಳ ವ್ಯಾಪ್ತಿಯಲ್ಲಿಯೂ ಮೊಬೈಲ್ ಡೆಮೋಂಸ್ಟ್ರೇಷನ್ ವ್ಯಾನ್ ಮುಖಾಂತರ ಮತದಾರರಲ್ಲಿ/ ನಾಗರಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಮಾಡಲಾಗುತ್ತಿದೆ. ಮೊಬೈಲ್ ಡೆಮೊಂಸ್ಟ್ರೇಷನ್ ವ್ಯಾನ್‍ಗಳು ಚುನಾವಣೆ ಘೋಷಣೆಯಾಗುವ ವರೆಗೆ ಕಾರ್ಯನಿರ್ವಹಿಸಲಿದೆ ಎಂದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ನ್ಯಾಯಾಧೀಶರು, ವಕೀಲರ ಸಂಘದ ಉಪಾಧ್ಯಕ್ಷರಾದ ರತನ್ ತಮ್ಮಯ್ಯ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ನ್ಯಾಯಾಂಗ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಕೆ.ಕೆಂಪರಾಜು, ತಹಶೀಲ್ದಾರ್ ಕಿರಣ್ ಇತರರು ಇದ್ದರು.

LEAVE A REPLY

Please enter your comment!
Please enter your name here