ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ; 2023ರ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಹಕಾರ ನೀಡಲು ಡಿಸಿ ಮಾಲಪಾಟಿ ಮನವಿ

0
92

ಬಳ್ಳಾರಿ,ಮಾ.15 : ಕರ್ನಾಟಕ ವಿಧಾನಸಭೆ ಸಾರ್ವತ್ರಿಕ-2023ರ ಚುನಾವಣೆ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಾದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಲು ರಾಜಕೀಯ ಪಕ್ಷಗಳ ಮುಖಂಡರುಗಳು ಅಸ್ಪದ ನೀಡಬಾರದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಹೇಳಿದರು.
ಅವರು ಬುಧವಾರದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಧಾನಸಭೆ ಸಾರ್ವತ್ರಿಕ 2023 ಚುನಾವಣೆಗೆ ಘೋಷಣೆಗೆ ಕೆಲವೇ ದಿನಗಳು ಬಾಕಿಯಿದ್ದು, ರಾಜಕೀಯ ಮುಖಂಡರುಗಳು ಸಾರ್ವಜನಿಕ ಸಭೆ ನಡೆಸುವುದಾದರೇ ಜಿಲ್ಲಾಡಳಿತದಿಂದ ಅನುಮತಿ ಮೇರೆಗೆ ಮಾಡಬಹುದಾಗಿದೆ. ಯಾವುದೇ ರೀತಿಯ ಬ್ಯಾನರ್‍ಗಳಾಗಲೀ, ಫ್ಲೆಕ್ಸ್‍ಗಳಾಗಲೀ ಹಾಕುವಂತಿಲ್ಲ. ಉಲ್ಲಂಘಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಚುನಾವಣಾ ನೀತಿ ಸಂಹಿತೆ ನಿಯಮದಂತೆ ಅನಧಿಕೃತ ಹಣ ಮದ್ಯ, ವಸ್ತುಗಳ ಸಾಗಾಟಕ್ಕೆ ಕಡಿವಾಣ ಹಾಕಲು ಜಿಲ್ಲೆಯ ಅಂತರರಾಜ್ಯ ಗಡಿಯಲ್ಲಿ ಚೆಕ್ ಪೋಸ್ಟ್‍ಗಳನ್ನು ಸ್ಥಾಪಿಸಲಾಗುತ್ತಿದೆ. ಅಕ್ರಮ ಚಟುವಟಿಕೆಗಳನ್ನು ಸಂಪೂರ್ಣ ತಡೆಗಟ್ಟಲು ಕ್ರಮಕೈಗೊಳ್ಳಲಾಗುತ್ತದೆ ಎಂದರು.
80 ವರ್ಷ ಮೇಲ್ಪಟ್ಟವರು ಮತಗಟ್ಟೆಗೆ ಬರಲು ಆಗುವುದಿಲ್ಲ ಎಂದು ಹೇಳಿದರೆ, ಅವರಿಗೆ ಮನೆಯಿಂದಲೇ ಮತದಾನ ಮಾಡಲು ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.
2023 ರ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದ ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ರಾಜಕೀಯ ಪಕ್ಷಗಳು ಸಭೆ-ಸಮಾರಂಭ ಏರ್ಪಡಿಸಿ ಹಣ ನೀಡುವುದು, ಸೀರೆಗಳು ಹಂಚುವುದು, ಕುಕ್ಕರ್‍ಗಳು ಮತ್ತು ಇತರೆ ಯಾವುದೇ ಉಡುಗೋರೆಗಳನ್ನು ನೀಡುವುದು ಕಂಡುಬಂದಲ್ಲಿ ಅಂಥವರ ಮೇಲೆ ಕಾನೂನು ಕ್ರಮಕೈಗೊಳ್ಳುವುದು. ಚುನಾವಣಾ ನೀತಿ ಸಂಹಿತ ಜಾರಿಯಾದ ಮೇಲೆ ಯಾವುದೇ ಅಹಿತಕರ ಘಟನೆಗಳು ನಡೆಯಕೂಡದು ಎಂದು ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಎಚ್ಚರಿಕೆ ನೀಡಿದ್ದಾರೆ.
ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪ್ರತಿನಿಧಿಗಳು ಯಾವುದೇ ಔತಣಕೂಟಗಳನ್ನು ಏರ್ಪಡಿಸುವುದು, ಆಕರ್ಷಕ ಸಾಮಾನುಗಳನ್ನು ನೀಡುವುದು ನಿಷೇಧಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್‍ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಸೇರಿದಂತೆ ಬಿಜೆಪಿ, ಕಾಂಗ್ರೇಸ್, ಜೆಡಿಎಸ್, ಎಎಪಿ, ಕಮೂನಿಷ್ಟ ಪಾರ್ಟಿ ಇಂಡಿಯಾ ರಾಜಕೀಯ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here