ಜನಜಾಗೃತಿ ಮೂಡಿಸುವ ಸಂಚಾರಿ ವಾಹನಕ್ಕೆ ಚಾಲನೆ; ಅಸಂಘಟಿತ ವಲಯ ಕಾರ್ಮಿಕರಿದ್ದಲ್ಲಿ ಇ-ಶ್ರಮ ಪೋರ್ಟಲ್‍ನಲ್ಲಿ ನೊಂದಾಯಿಸಿಕೊಳ್ಳಲು ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಪ್ ಅಹಮ್ಮದ್ ಸಲಹೆ

0
89

ಬಳ್ಳಾರಿ,ಮಾ.16 : ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ದತ್ತಾಂಶವನ್ನು ಸಿದ್ಧಪಡಿಸಲು, ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಇ-ಶ್ರಮ ಪೋರ್ಟಲ್‍ನ್ನು ಅಭಿವೃದ್ಧಿಪಡಿಸಿದೆ. ಈ ನಿಟ್ಟಿನಲ್ಲಿ ಅಸಂಘಟಿತ ವಲಯ ಕಾರ್ಮಿಕರು ಈ ಪೋರ್ಟಲ್‍ನಲ್ಲಿ ನೊಂದಾಯಿಸಿಕೊಂಡು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಬಳ್ಳಾರಿ ಉಪವಿಭಾಗ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಫ್ ಅಹಮ್ಮದ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಮೊಹಮ್ಮದೀಯ ಕಾಲೇಜ್ ಹಿಂಭಾಗದ ಕಾರ್ಮಿಕ ಅಧಿಕಾರಿಯವರ ಕಚೇರಿ ಆವರಣದಲ್ಲಿ ಗುರುವಾರದಂದು ಅಸಂಘಟಿತ ವಲಯದ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್‍ನಲ್ಲಿ ನೊಂದಾಯಿಸಿಕೊಳ್ಳುವ ಕುರಿತು ಜನಜಾಗೃತಿ ಮೂಡಿಸುವ ಸಂಚಾರಿ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.
ಇ-ಶ್ರಮ ಪೋರ್ಟಲ್‍ನಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಕೆಲಸ ಕಾರ್ಮಿಕರು, ಚಾಲಕರು, ಟೈಲರ್‍ಗಳು ಮತ್ತು ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಕೇಂದ್ರ ಸರ್ಕಾರವು ಗುರುತಿಸಿರುವ 379 ವರ್ಗಗಳ ಕಾರ್ಮಿಕರು ನೋಂದಾಯಿಸಿಕೊಂಡು ಇ-ಶ್ರಮ ಕಾರ್ಡ್ ಪಡೆಯಬಹುದಾಗಿದೆ ಎಂದು ತಿಳಿಸಿದರು.
ನೋಂದಣಿಯಿಂದಾಗುವ ಪ್ರಯೋಜನೆಗಳು: ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಯೋಜನೆಗಳ ಸೌಲಭ್ಯವನ್ನು ಪಡೆಯಲು, ದತ್ತಾಂಶವು ಸರ್ಕಾರಕ್ಕೆ ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗನ್ನು ರೂಪಿಸಲು ಸಹಾಯಕ್ಕೆ ಒಂದು ವರ್ಷದ ಅವಧಿಗೆ ಪ್ರÀಧಾನ ಮಂತ್ರಿ ಸುರಕ್ಷಾ ಭಿಮಾ ಯೋಜನೆ (ಪಿಎಂ-ಎಸ್‍ಬಿವೈ) ಪ್ರಯೋಜನ ಪಡೆಯಬಹುದಾಗಿದೆ. ಅಪಘಾತದಿಂದ ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2 ಲಕ್ಷ ಹಾಗೂ ಭಾಗಶಃ ಅಂಗವೈಕಲ್ಯಕ್ಕೆ ರೂ.1ಲಕ್ಷ ಪರಿಹಾರ, ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್-19ರ ಸಾಂಕ್ರಾಮಿಕ ಪಿಡುಗಿನಂತ ಪರಿಸ್ಥಿತಿಯಲ್ಲಿ, ಅರ್ಹ ಕಾರ್ಮಿಕರಿಗೆ ನೆರವು ನೀಡಲು ದತ್ತಾಂಶವನ್ನು ಬಳಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.
ಈ ಜನಜಾಗೃತಿ ಮೂಡಿಸುವ ಸಂಚಾರಿ ವಾಹನವು ವಾರಗಳ ಕಾಲ ಜಿಲ್ಲೆಯಾದ್ಯಂತ ಸಂಚರಿಸಿ ಅರಿವು ಮೂಡಿಸಲಿದೆ. ಮಾಹಿತಿ ಪಡೆಯಲು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕಕ್ಷಕರಾದ ಎಮ್.ರವಿದಾಸ್, ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ಎ.ಮೌನೇಶ್, ಕಾರ್ಯನಿರ್ವಾಹಕ ಆರ್.ಎನ್.ಶಿವರಾಜ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here