ಅಂತರರಾಜ್ಯ ಅಧಿಕಾರಿಗಳೊಂದಿಗೆ ವಚ್ರ್ಯುವಲ್ ಮೂಲಕ ಸಭೆ ; ಗಡಿಭಾಗದಲ್ಲಿ ಅಕ್ರಮ ಚಟುವಟಿಕೆ ಕಂಡುಬಂದಲ್ಲಿ ಮಾಹಿತಿ ನೀಡಿ: ಡಿಸಿ ಪವನ್‍ಕುಮಾರ್ ಮಾಲಪಾಟಿ

0
29

ಬಳ್ಳಾರಿ,ಮಾ. 20 : ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ ಅಂತರರಾಜ್ಯ ಗಡಿಯಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ನಿಗಾವಹಿಸುವ ಮೂಲಕ ಅಕ್ರಮಗಳಿಗೆ ಕಡಿವಾಣ ಹಾಕಲು ಸಹಕರಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಮನವಿ ಮಾಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಅನಂತಪುರ ಮತ್ತು ಕರ್ನೂಲ್ ಜಿಲ್ಲೆಯ ಕಂದಾಯ ಮತ್ತು ಪೊಲೀಸ್ ಇಲಾಖೆ, ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಚ್ರ್ಯುವಲ್ ಮೂಲಕ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ 52 ಗಡಿಭಾಗದ ಹಳ್ಳಿಗಳು, ರಸ್ತೆ ಮೂಲಕ ಅಕ್ರಮ ಸಾಗಾಣಿಕೆ ನಡೆಯುವ ಸಾಧ್ಯತೆಗಳ ಹಿನ್ನಲೆಯಲ್ಲಿ ಸಕಾಲಕ್ಕೆ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.

ಜಿಲ್ಲೆಯ ಗಡಿಭಾಗದಲ್ಲಿ 12 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿದ್ದು, ದಾಖಲೆಗಳಿಲ್ಲದೇ ಹಣ ಸಾಗಾಣೆ, ಮದ್ಯ, ಉಡುಗೋರೆ ಹಾಗೂ ವಸ್ತುಗಳನ್ನು ಸಾಗಾಣೆ ಮಾಡುವ ಸಾಧ್ಯತೆ ಹಿನ್ನಲೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಸರ್ವೇಲೆನ್ಸ್ ತಂಡಗಳನ್ನು ರಚಿಸಲಾಗುತ್ತಿದ್ದು, ಸಕಾಲಕ್ಕೆ ಮಾಹಿತಿ ನೀಡಿದರೆ ತಡೆಯಲು ಸಾಧ್ಯವಾಗುತ್ತದೆ ಎಂದರು.

ಗಡಿಭಾಗದ ಪೊಲೀಸ್ ಠಾಣೆಗಳ ಎಲ್ಲಾ ಹಂತದ ಅಧಿಕಾರಿಗಳು ವ್ಯಾಟ್ಸ್‍ಪ್ ಗ್ರೂಪ್ ರಚಿಸಿಕೊಂಡು ನಿತ್ಯವೂ ಬೆಳವಣಿಗೆಗಳ ಮಾಹಿತಿ ನೀಡಬೇಕು. ಅಕ್ರಮವಾದ ಅನುಮಾನಸ್ಪದ ಕಂಡುಬಂದಲ್ಲಿ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ತಿಳಿಸಬೇಕು ಎಂದರು.

ಚುನಾವಣೆಯನ್ನು ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಗಡಿಭಾಗದ ರಾಜ್ಯಗಳ ಪೊಲೀಸ್ ಅಧಿಕಾರಿಗಳ ಸಹಕಾರ ಅವಶ್ಯಕತೆಯಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಆಕ್ರಮ ಹಣ, ಮದ್ಯ, ಬೆಲೆಬಾಳುವ ವಸ್ತುಗಳ ಸಾಗಾಣೆಯ ಮಾಹಿತಿಯನ್ನು ಕ್ರೋಢಿಕರಿಸಲು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್‍ಕುಮಾರ್ ಬಂಡಾರು, ಅಬಕಾರಿ ಉಪ ಆಯುಕ್ತ ಮಂಜುನಾಥ.ಎನ್, ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಸಹಾಯಕ ಆಯುಕ್ತರಾದ ಹೇಮಂತ್‍ಕುಮಾರ್.ಎನ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರಾ ಸೇರಿದಂತೆ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here