ಕಾಲ್ನಡಿಗೆ ಜಾಥಾ ಮೂಲಕ ಮತದಾನ ಜಾಗೃತಿ

0
102

ಕೊಟ್ಟೂರು:ಏ:05:-ಸಾರ್ವರ್ತಿಕ ಚುನಾವಣೆ ದಿನದಂದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ತಪ್ಪದೇ ಮತನದಾನ ಮಾಡಿ, ಪ್ರಜಾಪ್ರಭುತ್ವದ ಯಶಸ್ಸಿಗೆ ಕೈಜೋಡಿಸಬೇಕೆಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಸುರುಲ್ಲಾ ಹೇಳಿದರು.

ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ, ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಮತದಾನ ಜಾಗೃತಿ ಅಂಗವಾಗಿ ಪಟ್ಟಣದ ಪಿಡಿಐಟಿ ಕಾಲೇಜ್ ಬಳಿ ಬುಧವಾರ ಬೆಳಗ್ಗೆ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಮೇ.10 ರಂದು ನಡೆಯುವ ಸರ‍್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವದ ಯಶಸ್ವಿಗೆ ಕೈಜೋಡಿಸಬೇಕು. ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಮತಚಲಾಯಿಸುವಂತೆ ತಿಳಿಸಿದರು.

ತಾಲೂಕು ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಶಶಿಧರ ಮೈದೂರು ಮಾತಾಡಿ, 80 ವರ್ಷ ತುಂಬಿದ ವಯೋಮಾನದ ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ನೀಡಿದ್ದು, ಅದನ್ನು ಸದುಪಯೋಗ ಪಡೆಯಲು ತಿಳಿಸಿದರು.

ಈ ಸಂದರ್ಭದಲ್ಲಿ ಬಿಎಲ್ಒ ಗಳು, ಸರ್ಕಾರಿ ನೌಕರ ಸಂಘದ ಸದಸ್ಯರಾದ ಜೆ. ಎಂ.ಮನೋಹರ ಸ್ವಾಮಿ, ಶಿಕ್ಷಕರಾದ ವಿಠಲ್ ಕುಲಕರ್ಣಿ, ಸ್ವೀಪ್ ಸಮಿತಿಯ ಸದಸ್ಯರಾದ ಗೋಣಿಬಸಪ್ಪ, ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here