ಚುನಾವಣಾ ಪ್ರಕ್ರಿಯೆಯಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ

0
64

ಬಳ್ಳಾರಿ,ಏ.13 : ಚುನಾವಣಾ ಪ್ರಕ್ರಿಯೆಯಲ್ಲಿ ಸೆಕ್ಟರ್ ಅಧಿಕಾರಿಗಳ ಕೆಲಸ ಪ್ರಮುಖವಾಗಿದ್ದು, ಅವರ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಅರಿತು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಹೇಳಿದರು.

ಗುರುವಾರ ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಸೆಕ್ಟರ್ ಅಧಿಕಾರಿಗಳಿಗೆ ಹಾಗೂ ಮತಗಟ್ಟೆ ಅಧಿಕಾರಿ ಸಿಬ್ಬಂದಿಗಳಿಗೆ ಸಾರ್ವತ್ರಿಕ ವಿಧಾನಸಭೆ ಚುನಾವಣೆ-2023 ರ ಸಂಬಂಧ ಮತಗಟ್ಟೆ ಕೇಂದ್ರಗಳಲ್ಲಿ ಇವಿಎಂ ಮತಯಂತ್ರಗಳ ಬಳಕೆ ಮತ್ತು ಕಾರ್ಯಗಳ ಬಗ್ಗೆ ಹಮ್ಮಿಕೊಂಡಿದ್ದ ತರಬೇತಿಯಲ್ಲಿ ಅವರು ಮಾತನಾಡಿದರು.

ಸೆಕ್ಟರ್ ಅಧಿಕಾರಿಗಳು ಬೂತ್ ಲೆವೆಲ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಮತದಾನ ಸಂದರ್ಭದಲ್ಲಿ ಏನಾದರೂ ಸಮಸ್ಯೆಗಳು ಕಂಡುಬಂದಲ್ಲಿ ಪರಿಹರಿಸಬೇಕು. ಮತಗಟ್ಟೆಯಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್, ರ್ಯಾಂಪ್ ಫ್ಯಾನ್ ಒಳಗೊಂಡಂತೆ ಕನಿಷ್ಠ ಸೌಲಭ್ಯಗಳಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ತರಬೇತಿಯಲ್ಲಿ ಮಾಸ್ಟರ್ ತರಬೇತುದಾರ ಶಿವಲಿಂಗರೆಡ್ಡಿ, ಇವಿಎಂ ನೋಡೆಲ್ ಅಧಿಕಾರಿ ವಿಠಲ್‍ರಾಜು ಅವರು, ಮತಯಂತ್ರಗಳನ್ನು ಟ್ಯಾಗ್ ಮತ್ತು ಸೀಲ್ ಹೇಗೆ ಮಾಡಬೇಕೆನ್ನುವುದರ ಬಗ್ಗೆ ಪ್ರಾತ್ಯಕ್ಷಿಕೆಯಲ್ಲಿ ತೋರಿಸಿಕೊಟ್ಟರು.

ಈ ಸಂದರ್ಭದಲ್ಲಿ ಸಹಾಯಕ ಚುನಾವಣಾ ಅಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಸಿಬ್ಬಂದಿಗಳು ಸೇರಿದಂತೆ ತರಬೇತಿಯಲ್ಲಿ 103 ಸೆಕ್ಟರ್ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here