ಉಜ್ಜನಿ ಜಾತ್ರೆ ಪೂರ್ವಭಾವಿ ಸಭೆ

0
251

ಕೊಟ್ಟೂರು: ರಥೋತ್ಸವದ ಸಂದರ್ಭದಲ್ಲಿ ಇಲಾಖಾಧಿಕಾರಿಗಳಿಗೆ ವಹಿಸಿದ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದು ತಹಶೀಲ್ದಾರ್ ಎಂ.ಕುಮಾರಸ್ವಾಮಿ ತಿಳಿಸಿದರು.

ತಾಲ್ಲೂಕಿನ ಉಜ್ಜಯಿನಿ ಪೀಠದಲ್ಲಿ ಇದೇ 25 ರಂದು ಮಂಗಳವಾರ ಜರುಗಲಿರುವ ಶ್ರೀಮರುಳಸಿದ್ಧೇಶ್ವರ ಸ್ವಾಮಿ ರಥೋತ್ಸವ ಹಾಗೂ 26 ರಂದು ಶಿಖರ ತೈಲಾಭಿಷೇಕ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಾತ್ರಾ ಸಂದರ್ಭದಲ್ಲಿ ಮೂಲ ಸೌಕರ್ಯಗಳ ಕೊರತೆ ಕಂಡಲ್ಲಿ ಸಂಬಂಧಿಸಿದ ಇಲಾಖಾಧಿಕಾರಿಗಳೆ ಹೊಣೆಯಾಗುತ್ತಾರೆ ಎಂದರು.

ಚುನಾವಣೆ ನೀತಿ ಸಂಹಿತೆ ಇರುವುದರಿಂದ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸುವ ಮುಂಚೆ ಚುನಾವಣಾಧಿಕಾರಿಗಳ ಪರವಾನಿಗೆ ಕಡ್ಡಾಯವಾಗಿ ಪಡೆಯಬೇಕೆಂದರು. ಗ್ರಾಮದಲ್ಲಿ ಸ್ವಚ್ಚತೆ, ಬೀದಿ ದೀಪಗಳು ಹಾಗೂ ನೀರಿನ ಪೂರೈಕೆ, ಫಾಗಿಂಗ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸಿ.ಎಚ್.ಎಂ.ಗಂಗಾಧರಯ್ಯ ಇವರಿಗೆ ಸೂಚಿಸಿದರು.ನಿರಂತರ ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಮಾಡಿಕೊಳ್ಳುವಂತೆ ಜೆಸ್ಕಾಂ ಅಧಿಕಾರಿಗೆ ಸೂಚಿಸಿದರು. ಸುತ್ತಮುತ್ತಲಿನ ಪಟ್ಟಣಗಳಿಂದ ವಿಶೇಷ ಬಸ್ಸುಗಳ ವ್ಯವಸ್ಥೆ ಹಾಗೂ ಗ್ರಾಮದ ಹೊರವಲಯಗಳಲ್ಲಿ ತಾತ್ಕಾಲಿಕ ಬಸ್ ನಿಲ್ದಾಣಗಳನ್ನು ತೆರೆಯುವಂತೆ ಆದೇಶಿಸಿದರು.

ಔಷಧಿಗಳ ದಾಸ್ತಾನು ಮಾಡಿಕೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.ಅಗ್ನಿಶಾಮಕ ವಾಹನಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ಇಲಾಖಾಧಿಕಾರಿಗೆ ಸೂಚಿಸಿದರು. ಎಲ್ಲಾ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಯನ್ನು ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸಿ ರಥೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದರಲ್ಲದೇ ವಿಧಾನಸಭೆ ಚುನಾವಣೆಯ ಮತದಾನದಂದು ತಪ್ಪದೇ ಮತ ಚಲಾಯಿಸಬೇಕೆಂದು ಮನವಿ ಮಾಡಿಕೊಂಡರು.

ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪುರ ಮಾತನಾಡಿ ರಥೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಬಂದೋಬಸ್ತಿಗಾಗಿ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿಕೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸಿಪಿಐ ವೆಂಕಟಸ್ವಾಮಿ, ಪಿ.ಎಸ್.ಐ. ವೆಂಕಟೇಶ್, ಗ್ರಾಮಸ್ಥರು ಹಾಗೂ ಇಲಾಖಾಧಿಕಾರಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here