ಜೆ.ಎನ್.ಗಣೇಶ್ 10 ಸಾವಿರ ಅಂತರದಿಂದ ಗೆಲುವು ಸಾದಿಸಲಿದ್ದಾರೆ : ಎನ್. ನಾಗರಾಜ್

0
313

ಕುರುಗೋಡು.ಮೇ.11: 2022-23ನೇ ಸಾಲಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಯಲ್ಲಿ ಕಂಪ್ಲಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಎನ್. ಗಣೇಶ್ 10 ಸಾವಿರ ಅಂತರದಿಂದ ಗೆಲುತ್ತಾರೆ ಎಂದು ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾದ ತಾಲೂಕು ಅಧ್ಯಕ್ಷರು ಹಾಗೂ ಪುರಸಭೆ ಸದಸ್ಯ ರಾದ ಎನ್. ನಾಗರಾಜ್ ತಿಳಿಸಿದರು.

ಪಟ್ಟಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಗಣೇಶ್ ಅವರು ಅನೇಕ ಅಭಿವೃದ್ಧಿ ಕಾರ್ಯಗಳು ಕೈಗೊಂಡಿರುವ ನಿಟ್ಟಿನಲ್ಲಿ ಇವರ ಒಂದು ಅಭಿವೃದ್ಧಿ ಕಾರ್ಯಗಳು ಮೆಚ್ಚಿ ಕ್ಷೇತ್ರದ ಜನರು ಕಾಂಗ್ರೆಸ್ ಪಕ್ಷಕ್ಕೆ ಅಶ್ರಿವಾದ ನೀಡಿದ್ದಾರೆ ಆದ್ದರಿಂದ ಮೇ.13 ನಡೆಯುವ ವಿಧಾನಸಭಾ ಚುನಾವಣೆ ಯ ಫಲಿತಾಂಶ ದಲ್ಲಿ 10 ಸಾವಿರ ಅಂತರದಿಂದ ಗೆಲುವು ಸಾದಿಸಲಿದ್ದಾರೆ ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಹೇಳಿದರು.

ವಿಧಾನಸಭಾ ಚುನಾವಣೆ ಯಲ್ಲಿ ಕ್ಷೇತ್ರದ್ಯಂತ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಬಿಜೆಪಿ ಸರಕಾರ ಆಡಳಿತ ನೋಡಿ ಬೇಸತ್ತು ಹೋಗಿದ್ದಾರೆ. ಆದ್ದರಿಂದ ಕ್ಷೇತ್ರದ್ಯಂತ ಕಾಂಗ್ರೆಸ್ ಪರ ಒಲವು ಕಂಡಿದೆ ಎಂದರು.

ಕ್ಷೇತ್ರದಲ್ಲಿ ಕಾಲುವೆಗೆ ನೀರು ಹರಿಸುವುದು, ಏತ ನೀರಾವರಿ, ರಸ್ತೆ, ಕುಡಿಯುವ ನೀರು, ಶಾಲೆ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳು ಕೈಗೊಂಡಿದ್ದು ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಗಾಳಿ ಬಿಸಿದ್ದು, ಮತ್ತೊಮ್ಮೆ ಗಣೇಶ್ ಶಾಸಕರಾಗಿ ಕ್ಷೇತ್ರದ ಜನರ ಸೇವೆ ಮಾಡಲಿದ್ದಾರೆ ಎಂದರು.

ವಿರೋಧ ಪಕ್ಷ ಆಡಳಿತ ಇದ್ರೂ ಕ್ಷೇತ್ರಕ್ಕೆ 1 ಸಾವಿರ ಕೋಟಿ ಅನುದಾನ ತಂದು ಅಭಿವೃದ್ಧಿ ಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ್ರೆ 5 ಸಾವಿರ ಕೋಟಿ ಅನುದಾನ ತಂದು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಿದ್ದಾರೆ ಎಂದು ಹೇಳಿದರು.

ಕ್ಷೇತ್ರದ ಜನರು, ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಅಭಿವೃದ್ಧಿ ಕೆಲಸಗಳನ್ನು ಕಂಡು ಸ್ವಯಂ ಪ್ರೇರಿತರಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದ್ದಾರೆ. ಇವತ್ತು ಕ್ಷೇತ್ರದಲ್ಲಿ ಆಸೆ. ಆಮಿಷಗಳನ್ನು ತೋರಿಸಿ ಜನರ ಮತಗಳನ್ನು ಸೆಳೆಯುವ ಕೆಲ ನಾಯಕರಿಗೆ ಮೇ.13 ರಂದು ಪ್ರಜ್ಞವಂತ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದರು.

LEAVE A REPLY

Please enter your comment!
Please enter your name here