ಅಂತರ ಕಾಲೇಜು ಮಹಿಳೆಯರ ಫುಟ್‍ಬಾಲ್ ಪಂದ್ಯಾಟ

0
56

ಮಡಿಕೇರಿ ಮೇ.24 :-ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಹಿಳೆಯರ ಫುಟ್‍ಬಾಲ್ ಪಂದ್ಯಾಟವು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಮಂಗಳವಾರ ಮತ್ತು ಬುಧವಾರ ಸಂತ ಅನ್ನಮ್ಮ ಪದವಿ ಕಾಲೇಜಿನ ಮೈದಾನದಲ್ಲಿ ನಡೆಯಿತು.
ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯ ಮುಖ್ಯಸ್ಥರಾದ ರೆವರೆಂಡ್ ಫಾದರ್ ಐಸಾಕ್ ರತ್ಕಾಕರ್ ಅವರು ಪಂದ್ಯಾಟ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಂತ ಅನ್ನಮ್ಮ ಕಾಲೇಜಿನ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ ಭಾಗವಹಿಸಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಕಾಶ್ ಡಿಸೋಜ ಅವರು ವೀಕ್ಷಕರಾಗಿ ಆಗಮಿಸಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಸಿ.ದಯಾನಂದ ಅವರು ಅಧ್ಯಕ್ಷತೆ ವಹಿಸಿದ್ದರು.
ಪಂದ್ಯಾಟದಲ್ಲಿ ವಿವಿಧ ಕಾಲೇಜುಗಳ 08 ತಂಡಗಳು ಭಾಗವಹಿಸಿದ್ದು, ಸೇಕ್ರೇಡ್ ಹಾರ್ಟ್ ಪದವಿ ಕಾಲೇಜು, ಮಧ್ಯಾಂತರ ಪ್ರಥಮ ಬಹುಮಾನವನ್ನು ಪಡೆದರೆ, ಮೂಡಬಿದ್ರೆ ಆಳ್ವಾಸ್ ಪದವಿ ಕಾಲೇಜು ದ್ವಿತೀಯ ಸ್ಥಾನ ಮತ್ತು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೃತೀಯ ಬಹುಮಾನ ಪಡೆದುಕೊಂಡರು.
ಮಂಗಳೂರು ವಿಶ್ವವಿದ್ಯಾನಿಲಯದ ಫುಟ್‍ಬಾಲ್ ಪಂದ್ಯಾಟದ ಸಂಚಾಲಕರು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಎಂ.ರಾಖಿ ಪೂವಣ್ಣ ಅವರು ಸ್ವಾಗತಿಸಿದರು.

ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಆರ್.ಮಂಜುನಾಥ ಅವರು ವಂದಿಸಿದರು.
ಪಂದ್ಯಾಟದ ಸಮಾರೋಪ ಸಮಾರಂಭವು ಬುಧವಾರ ನಡೆಯಿತು. ವಿರಾಜಪೇಟೆ ಕಾಫಿ ಬೆಳೆಗಾರರಾದ ಬಿ.ಜೆ.ಬೋಪಣ್ಣ ಮತ್ತು ವಿರಾಜಪೇಟೆ ಆಕ್ಸ್‍ಫರ್ಡ್ ಫುಟ್‍ಬಾಲ್‍ಕ್ಲಬ್‍ನ ಅಧ್ಯಕ್ಷರಾದ ರ್ಯಾನ್ಸನ್ ಚಾಕೋ ಅವರು ಭಾಗವಹಿಸಿದ್ದರು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಎಚ್.ಎಸ್.ವೇಣುಗೋಪಾಲ್ ಅವರು ಸ್ವಾಗತಿಸಿದರು. ವಿಜೇತ ತಂಡಗಳಿಗೆ ಮುಖ್ಯ ಅತಿಥಿಗಳು ಟ್ರೋಫಿ ಮತ್ತು ಪ್ರಶಸ್ತಿ ಪತ್ರವನ್ನು ನೀಡಿದರು. ಪಂದ್ಯಾಟದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬೋಧಕ, ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here