ಮೇ.30 ರಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಜಿಲ್ಲೆಗೆ ಆಗಮನ; ಕಾಮಗಾರಿಗಳ ಪರಿಶೀಲನೆ, ಸಾರ್ವಜನಿಕ ಭೇಟಿ

0
201

ಧಾರವಾಡ: ಮೇ.29: ರಾಜ್ಯಸರ್ಕಾರದ ನೂತನ ಕಾರ್ಮಿಕ ಸಚಿವರಾಗಿರುವ ಮತ್ತು ಜಿಲ್ಲೆಯ ಕಲಘಟಗಿ ಮತಕ್ಷೇತ್ರದ ಶಾಸಕರಾಗಿರುವ ಸಂತೋಷ ಎಸ್.ಲಾಡ್ ಅವರು ಮೇ. 30 ಮತ್ತು 31 ರಂದು ಧಾರವಾಡ ಜಿಲ್ಲೆಗೆ ಭೇಟಿ ನೀಡಿ ಕಲಘಟಗಿ, ಅಳ್ನಾವರ ಮತ್ತು ಧಾರವಾಡ ತಾಲೂಕಾ ಪಂಚಾಯತ್‍ಗಳಲ್ಲಿ ವಿವಿಧ ಅಭಿವೃದ್ಧಿ ಯೋಜನಗೆಳ ಮತ್ತು ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ಜರುಗಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಮೇ.30 ರಂದು ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು ಬೆಳಿಗ್ಗೆ 11-30 ಕ್ಕೆ ಕಲಘಟಗಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮತ್ತು ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಕಲಘಟಗಿ ತಾಲೂಕಾ ಪಂಚಾಯತ್ ಸಭಾಭವನದಲ್ಲಿ ಜರುಗಿಸುವರು. ಮತ್ತು ಮಧ್ಯಾಹ್ನ 2 ಗಂಟೆಯ ನಂತರ ಕಲಘಟಗಿ ಮತ ಕ್ಷೇತ್ರದ ಸಾರ್ವಜನಿಕರ ಭೇಟಿ ಮತ್ತು ಕುಂದು ಕೊರತೆಗಳನ್ನು ಪರಿಶೀಲಿಸಲಿದ್ದಾರೆ.

ಮೇ.31 ರಂದು ಬೆಳಿಗ್ಗೆ 9-30ಕ್ಕೆ ಕಲಘಟಗಿಯಿಂದ ಹೊರಟು 11 ಗಂಟೆಗೆ ಅಳ್ನಾವರ ತಾಲೂಕಿನ ವಿವಿಧ ಅಭಿವೃದ್ಧಿ ಯೋಜನೆ ಮತ್ತು ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಅಳ್ನಾವರ ತಹಶೀಲ್ದಾರ ಕಚೇರಿಯಲ್ಲಿ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅಳ್ನಾವರ ಪಟ್ಟಣದ ಉಮಾಭವನ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 1-30 ಕ್ಕೆ ಅಳ್ನಾವರದಿಂದ ಹೊರಟು ಧಾರವಾಡಕ್ಕೆ ಆಗಮಿಸುವರು. ಧಾರವಾಡ ತಾಲೂಕು ಪಂಚಾಯತ್ ಸಭಾಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಧಾರವಾಡ ತಾಲೂಕಿನ ವಿವಿಧ ಅಭಿವೃದ್ಧಿ ಯೋಜನೆ ಮತ್ತು ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಸಂಜೆ 4 ಗಂಟೆಗೆ ಸಾರ್ವಜನಿಕರನ್ನು ಭೇಟಿ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here