ಸಂಡೂರು: ಮೆಟ್ರಿಕ್ ಪೂರ್ವ ಬಾಲಕರ/ಬಾಲಕೀಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

0
60

ಬಳ್ಳಾರಿ,ಜೂ.2:ಸಂಡೂರು ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಂದ 2023-24 ನೇ ಸಾಲಿಗೆ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ವೆಬ್‍ಸೈಟ್ https://shp.karnataka.gov.in ಲಿಂಕ್‍ನಲ್ಲಿ ತಮ್ಮ SATS ID ಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂ.15 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಡೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಅಥವಾ ದೂ.08395-295180, ಮೊ.9663808539 ಗೆ ಸಂಪರ್ಕಿಸಬಹುದು ಎಂದು ಸಂಡೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here