ಬಳ್ಳಾರಿಯಲ್ಲಿ ವಿಶ್ವ ಪರಿಸರ ದಿನ ಆಚರಣೆ ಸ್ವಚ್ಚ ಬಳ್ಳಾರಿ, ಸುಂದರ ಬಳ್ಳಾರಿಗೆ ವಿಶೇಷ ಒತ್ತು: ಸಚಿವ ಬಿ.ನಾಗೇಂದ್ರ

0
236

ಬಳ್ಳಾರಿ,ಜೂ.05: ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ನಿಮಿತ್ತ ಬಳ್ಳಾರಿ ಅರಣ್ಯ ವಿಭಾಗ ಮತ್ತು ಮುನಿಸಿಪಲ್ ಕಾಲೇಜು ಸಹಯೋಗದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದ ಆವರಣದಲ್ಲಿ ಯುವ ಜನ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ ಅವರು ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿದರು.
ಕಾಲೇಜು ಆವರಣದಲ್ಲಿ ಕೆಲ ಸಸಿಗಳನ್ನು ನೆಟ್ಟ ಸಚಿವ ನಾಗೇಂದ್ರ ಅವರು ನೆರೆದಿದ್ದವರಿಗೆಲ್ಲ ಪರಿಸರ ದಿನಾಚರಣೆಯ ಶುಭಾಷಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಬಿ.ನಾಗೇಂದ್ರ ಅವರು, ಜಿಲ್ಲೆಯ ಅಭಿವೃದ್ಧಿಗೆ ಹಲವಾರು ಯೋಜನೆಗಳ ರೂಪು ರೇμÉಗಳನ್ನು ತಯಾರಿಸಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಅರಣ್ಯ ಅಭಿವೃದ್ಧಿ ಮತ್ತು ಪರಿಸರ ಹಸರೀಕರಣಕ್ಕೆ ವಿಶೇಷ ಒತ್ತು ನೀಡಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸುಮಾರು 10 ಲಕ್ಷ ಕ್ಕೂ ಹೆಚ್ಚು ಗಿಡಗಳನ್ನು ನೆಡುವ ಅಭಿಯಾನ ಕೈಗೊಳ್ಳಲಾಗಿದೆ ಮತ್ತು ಅವುಗಳ ಸಂರಕ್ಷಣೆಗೂ ಕ್ರಮ ವಹಿಸಲಾಗುವುದು ಎಂದರು.

ಪ್ರತಿಯೊಬ್ಬರು ತಮ್ಮ ಮನೆಗಳ ಮುಂದೆ ಒಂದು ಗಿಡವನ್ನು ನೆಡುವುದರ ಮೂಲಕ ಅದನ್ನು ಪೆÇೀಷಿಸಿ ಬೆಳೆಸುವ ಕೆಲಸ ಮಾಡಬೇಕು. ಪರಿಸರ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರಕಾರದ ಜೊತೆಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದರು.

ಬಳ್ಳಾರಿ ನಗರವನ್ನು ಸ್ವಚ್ಛ ಹಾಗೂ ತ್ಯಾಜ್ಯ ಮುಕ್ತ ನಗರವನ್ನಾಗಿಸಲು ಮಹಾನಗರ ಪಾಲಿಕೆಯು ನಗರದ ವಿವಿಧೆಡೆ 10 ಆರ್‍ಆರ್‍ಆರ್ ಕೇಂದ್ರಗಳನ್ನು ಸ್ಥಾಪಿಸಿದ್ದು, ಮರು ಬಳಕೆಯಾಗುವಂತಹ ವಸ್ತುಗಳನ್ನು ಆ ಕೇಂದ್ರಗಳಿಗೆ ನೀಡಬೇಕು. ಸ್ವಚ್ಛತೆಗೆ ಎಲ್ಲರೂ ಆದ್ಯತೆ ನೀಡಬೇಕು ಎಂದರು.

ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕಾಗಿ ರಾಜ್ಯದ ಕಟ್ಟೆ ಕಡೆಯ ಭಾಗಕ್ಕೂ ಅಲೆದು, ಜನರ ಸಮಸ್ಯೆಗಳನ್ನು ಅರಿಯುವ ಪ್ರಯತ್ನ ಮಾಡುತ್ತೇನೆ. ಮತ್ತು ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಕ್ರೀಡಾ ವಲಯದಲ್ಲಿ ಯುವ ಜನ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು ಎಂದು ತಿಳಿಸಿದ ಸಚಿವ ಬಿ.ನಾಗೇಂದ್ರ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ ಜಿಲ್ಲೆಯು ಪ್ರಥಮವಾಗಿದ್ದು, ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೇಟ್ ಸ್ಟೇಡಿಯಂ ನಿರ್ಮಿಸಬೇಕೆಂಬ ಸಂಕಲ್ಪವಿದೆ ಎಂದು ಹೇಳಿದರು.

ಬಳ್ಳಾರಿ ನಗರ ಶಾಸಕ ಭರತ್‍ರೆಡ್ಡಿ ಅವರು ಮಾತನಾಡಿ, ಬಳ್ಳಾರಿ ನಗರದಲ್ಲಿ ಬೇಸಿಗೆಯಲ್ಲಿ ಅತಿ ಹೆಚ್ಚು ಡಿಗ್ರಿ ಸೆಲ್ಸಿಯಸ್ ಉμÁ್ಣಂಶ ದಾಖಲಾಗುತ್ತಿದೆ. ಹೀಗಾಗಿ ತಾಪಮಾನ ನಿಯಂತ್ರಿಸುವ ಸಲುವಾಗಿ ನಗರದಲ್ಲಿ ವಿವಿಧೆಡೆ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಸ್ವಚ್ಛ ಬಳ್ಳಾರಿ ಹಾಗೂ ಸುಂದರ ಬಳ್ಳಾರಿಗೆ ಎಲ್ಲಾ ಸಾರ್ವಜನಿಕರು, ಯುವಕರ ಸಹಕಾರ ಅಗತ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದ ಡಾ.ಸೈಯದ್ ನಾಸೀರ್ ಹುಸೇನ್, ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪ ಮೇಯರ್ ಬಿ.ಜಾನಕಿ, ಬಳ್ಳಾರಿ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಲಾಲ್, ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಎಸ್ಪಿ ರಂಜೀತ್ ಕುಮಾರ್ ಬಂಡಾರು, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು, ಬಳ್ಳಾರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಎಚ್.ಸೂರ್ಯವಂಶಿ, ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹಮ್ಮದ್ ಫಯಾಜುದ್ದಿನ್, ವಲಯ ಅರಣ್ಯಾಧಿಕಾರಿ ಹೆಚ್.ಆರ್. ರಾಘವೇಂದ್ರಯ್ಯ, ಕಾಲೇಜು ಪ್ರಾಂಶುಪಾಲ ಪಿ.ನಾಗೇಶ್ವರ ರಾವ್ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಪೆÇಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪದಾಧಿಕಾರಿಗಳು, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಅಧಿಕಾರಿಗಳು ಸೇರಿದಂತೆ ಇನ್ನೀತರರು ಇದ್ದರು.

LEAVE A REPLY

Please enter your comment!
Please enter your name here