ವಿದ್ಯೆ ಯಾರೂ ಕಸಿದುಕೊಳ್ಳಲಾಗದ ಸಂಪತ್ತು: ನ್ಯಾಯಾಧೀಶೆ ಪುಷ್ಪಾಂಜಲಿ ದೇವಿ

0
128

ಬಳ್ಳಾರಿ,ಜೂ.05 :ವಿದ್ಯೆ ಎನ್ನುವುದು ಯಾರೂ ಕಸಿದುಕೊಳ್ಳಲಾಗದ ಸಂಪತ್ತು, ಅದನ್ನು ಗಳಿಸಲು ವಿದ್ಯಾರ್ಥಿಯ ದೆಸೆಯು ಉತ್ತಮವಾಗಿರಬೇಕು ಎಂದು ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಹೇಳಿದರು.

ನಗರದ ಇಂದಿರಾ ಕಾಲೋನಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ 2022-23 ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಬೇಕು. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರು ಶಿಕ್ಷಕರೊಂದಿಗೆ ಕೈ ಜೋಡಿಸಬೇಕು ಎಂದು ತಿಳಿಸಿದರು.

ಬಳ್ಳಾರಿ ಪಶ್ಚಿಮ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ರಾಮಚಂದ್ರಪ್ಪ ಅವರು ಮಾತನಾಡಿ, ಅಕ್ಷರದ ಮಹತ್ವ ಮನುಷ್ಯನಿಗೆ ಬಹಳ ಮುಖ್ಯವಾಗಿದೆ. ಮಕ್ಕಳು ಕಡ್ಡಾಯವಾಗಿ ಶಾಲೆಗೆ ಹಾಜರಾಗಿ ಶಿಕ್ಷಕರು ಮಾಡುವ ಪಾಠ ಬೋಧನೆಯನ್ನು ಆಲಿಸಬೇಕು. ಶಿಕ್ಷಣದಿಂದ ನಾವು ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಸಾಧ್ಯ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಎಮ್.ಚೈತ್ರಾ ಅವರಿಗೆ ರೂ.5000, ಕಾರ್ತಿಕ್.ಡಿ ಗೆ ರೂ.3000 ಹಾಗೂ 9 ನೇ ತರಗತಿ ವಿದ್ಯಾರ್ಥಿಗಳಾದ ಜಿ.ಮೇಘನಾ ಅವರಿಗೆ ರೂ.2000 ಹಾಗೂ ಪಿ.ಗಣೇಶ ಗೆ ರೂ.1000 ನಗದು ಬಹುಮಾನ ಹಾಗೂ ಶಬ್ದ ಕೋಶ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಇದ್ದರು.

LEAVE A REPLY

Please enter your comment!
Please enter your name here