ವಿಶ್ವ ಪರಿಸರ ದಿನ: ಜಿ.ಪಂ.ಕಚೇರಿಯ ಇಳಿಜಾರಿನಲ್ಲಿ ಲಾವಂಚ ಸಸಿ ನೆಟ್ಟು ಪರಿಸರ ಆಚರಣೆ

0
114

ಮಡಿಕೇರಿ ಜೂ.07 :-ಕೊಡಗು ಜಿಲ್ಲಾ ಪಂಚಾಯತ್, ಕೊಡಗು ವೃತ್ತ, ಸಾಮಾಜಿಕ ಅರಣ್ಯ ವಲಯ ಮಡಿಕೇರಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ 2023 ರ ಅಂಗವಾಗಿ ಮಡಿಕೇರಿ ನಗರದ ಹೊರ ವಲಯದ ಕೊಡಗು ಜಿಲ್ಲಾ ಪಂಚಾಯತ್ ಆವರಣದಲ್ಲಿ ಆರ್ಟಿಫಿಶಿಯಲ್ ರಿಜನರೇಷನ್ ಮಾದರಿಯಲ್ಲಿ ಭೂಕುಸಿತ ಹಾಗೂ ಬರೆ ಕುಸಿಯುವ ಜಾಗದಲ್ಲಿ ಇರುವ ಜಾಗದಲ್ಲಿ ಔಷಧೀಯ ಗುಣ ಹಾಗೂ ಬಹುಪಯೋಗಿ ಹೊಂದಿರುವ ಲಾವಂಚ (ಕಸ್ಸ್ ಗ್ರಾಸ್) ಸಸಿಗಳನ್ನು ನೆಟ್ಟು ಬೆಳೆಸುವ ಕಾರ್ಯಕ್ಕೆ ಜಿಲ್ಲಾ ಪಂಚಾಯತಿ ಸಿಇಒ ಡಾ.ಎಸ್.ಆಕಾಶ್ ಸೋಮವಾರ ಚಾಲನೆ ನೀಡಿದರು.

ಜಿಲ್ಲಾ ಪಂಚಾಯಿತಿ ಕಚೇರಿಯ ಗುಡ್ಡದ ಸುತ್ತಲಿನ ಇಳಿಜಾರು ಪ್ರದೇಶದಲ್ಲಿ 1600 ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ಬೆಳೆಸುವ ಉದ್ದೇಶ ಹೊಂದಿರುವ ಸ್ಥಳದಲ್ಲಿ ಅಧಿಕಾರಿಗಳು, ಸ್ವಯಂ ಸೇವಕರು ಜತೆಗೂಡಿ ಸಸಿನೆಟ್ಟರು.

ಈ ಸಂದರ್ಭ ಮಾತನಾಡಿದ ಜಿ.ಪಂ.ಸಿಇಒ ಡಾ ಎಸ್.ಆಕಾಶ್, ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಹಸಿರು ಗಿಡ ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಎಂದರು.
ನಾವು ಪರಿಸರವನ್ನು ಸಂರಕ್ಷಿಸಿದರೆ, ಪರಿಸರ ನಮ್ಮನ್ನು ಸಂರಕ್ಷಿಸುತ್ತದೆ ಎಂದರು. ಕೊಡಗು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್.ಮೂರ್ತಿ ಮಾತನಾಡಿ, ಪರಿಸರ ಸಮತೋಲನ ಕಾಪಾಡಿಕೊಳ್ಳುವ ದಿಸೆಯಲ್ಲಿ ನಾವು ಹೆಚ್ಚೆಚ್ಚು ಗಿಡ ಮರಗಳನ್ನು ಬೆಳೆಸುವ ಮೂಲಕ ಉತ್ತಮ ಪರಿಸರ ಕಾಪಾಡಿಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಮಾಹಿತಿ ನೀಡಿ ಪರಿಸರ ಘೋಷಣೆಗಳನ್ನು ಹೇಳಿದ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್‍ನ ಜಿಲ್ಲಾ ಘಟಕದ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ನಾವು ನೆಟ್ಟ ಗಿಡಗಳ ಸಂಪೆÇೀಷಿಸಿ ಪರಿಸರ ಸಂರಕ್ಷಣೆಗೆ ಪಣ ತೊಡಬೇಕು ಎಂದರು.
ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಂ ಬಾಬು, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ರಾಮರಾಜನ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮಾಥ್ಯೂ, ಸಂಯೋಜಕಿ ಯು.ಸಿ.ದಮಯಂತಿ, ಜಿ.ಪಂ.ಉಪ ಕಾರ್ಯದರ್ಶಿ ಧನಂಜಯ್, ಸಾಮಾಜಿಕ ಅರಣ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್.ಚಂಗಪ್ಪ, ವಲಯ ಅರಣ್ಯ ಅಧಿಕಾರಿ ಮಯೂರ್ ಕಾರವೇಕರ, ಉಪ ವಲಯ ಅರಣ್ಯ ಅಧಿಕಾರಿ ಎಂ.ಜಿ.ದರ್ಶಿನಿ, ಗಸ್ತು ಅರಣ್ಯಪಾಲಕ ಬಿ.ಪಿ.ಚಂದ್ರಾವತಿ ಹಾಗೂ ಅರಣ್ಯ ಇಲಾಖೆಯ, ಜಿಲ್ಲಾ ಪಂಚಾಯತಿ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜಿಲ್ಲಾ ಸಾಮಾಜಿಕ ಅರಣ್ಯ ಇಲಾಖೆಯ ಮಡಿಕೇರಿ ವಲಯದ ವತಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್‍ನ ಜಿಲ್ಲಾ ಘಟಕ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಪರಿಸರ ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಶಿಕ್ಷಕರು, ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ವಯಂ ಸೇವಕರು ಜತೆಗೂಡಿ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಲಾವಂಚ ಸಸಿಗಳನ್ನು ನೆಟ್ಟರು. ಇದೇ ವೇಳೆಯಲ್ಲಿ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಪರಿಸರ ಘೋಷಣೆಗಳನ್ನು ವಿದ್ಯಾರ್ಥಿಗಳು ಪ್ರಚುರಪಡಿಸಿದರು.

LEAVE A REPLY

Please enter your comment!
Please enter your name here