ಬಳ್ಳಾರಿ: ಸರ್ಕಾರಿ ತಾಂತ್ರಿಕ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

0
100

ಬಳ್ಳಾರಿ.ಜು.10: ನಗರದ ಕಂಟೋನ್‍ಮೆಂಟ್‍ನ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯಲ್ಲಿ ಇತ್ತೀಚೆಗೆ ಗುರುವಂದನಾ ಕಾರ್ಯಕ್ರಮ ಆಚರಿಸಲಾಯಿತು.
ಶಾಲೆಯ ಪ್ರಾಂಶುಪಾಲರಾದ ಕೆ.ಜಿ.ನಾಗರಾಜ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕ(ಗುರುವಿನ) ವೃತ್ತಿಯ ಮಹತ್ವವನ್ನು ಮಕ್ಕಳಿಗೆ ತಿಳಿಸುತ್ತಾ “ಮುಂದೆ ಗುರಿ, ಹಿಂದೆ ಗುರು” ಇದ್ದರೆ ಮನುಷ್ಯನು ಯಶಸ್ಸನ್ನು ಸಾಧಿಸಬಹುದು ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ತಂದೆ-ತಾಯಿಯವರ ಹಾಗೂ ಗುರುವಿನ ಮಹತ್ವವನ್ನು ಸವಿವರವಾಗಿ ವಿವರಿಸಿದರು.

ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ಮತ್ತು ಜಮೀನುಗಳಲ್ಲಿ ಹತ್ತಿರ ಕನಿಷ್ಟ 05 ಗಿಡ, ಸಸಿಗಳನ್ನು ಕಡ್ಡಾಯವಾಗಿ ಬೆಳೆಸಲು ಮಕ್ಕಳಿಗೆ ಪ್ರೇರೆಪಿಸಿದರು.
ಸಸಿಗಳನ್ನು ನೆಡುವುದರ ಮೂಲಕ ಪರಿಸರದಿಂದಾಗುವ ಮಳೆ, ಬೆಳೆ, ಆರೋಗ್ಯಕರವಾದ ಗಾಳಿ, ತಂಪಾದ ವಾತಾವರಣ ಇತ್ಯಾದಿ ಅನೂಕೂಲಗಳನ್ನು ಪಡೆಯುವುದರ ಬಗ್ಗೆ ತಿಳಿಸಿಕೊಡಲಾಯಿತು.
ಕಟ್ಟಡ ನಿರ್ಮಾಣ ಮತ್ತು ರಸ್ತೆಗಳ ನಿರ್ಮಾಣಕ್ಕಾಗಿ ಸಾರ್ವಜನಿಕ ಹಿತದೃಷ್ಠಿಯಿಂದ ಇತರೆ ಕಾಮಗಾರಿಗಳನ್ನು ಕೈಗೊಂಡಾಗ ಗಿಡ ಮರಗಳನ್ನು ಕತ್ತರಿಸುವ ಸಂದರ್ಭ ಬಂದೊದಗಿದಾಗ ಮತ್ತೊಂದು ಸಸಿಯನ್ನು ಬೇರೆ ಜಾಗದಲ್ಲಿ ನೆಟ್ಟು ಪರಿಸರ ಸಂರಕ್ಷಣೆ ಮಾಡಬೇಕು ಎಂದು ತಿಳಿಸಿಕೊಟ್ಟರು.

ಶಾಲೆಯ 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು “ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವೋ ಮಹೇಶ್ವರ, ಗುರು ಸಾಕ್ಷಾತ್ ಪರ ಬ್ರಹ್ಮ ತಸ್ಮಯಿ ಶ್ರೀ ಗುರುವೇ ನಮಃ” ಎಂದು ಗುರುವನ್ನು ಸ್ಮರಿಸುತ್ತಾ ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ 100 ಸಸಿಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಇದ್ದರು.

LEAVE A REPLY

Please enter your comment!
Please enter your name here