ಜಿಲ್ಲಾ ಮಟ್ಟದ ಕ್ಷಯ ವೇದಿಕೆ ಸಭೆ; ಕ್ಷಯರೋಗ ನಿರ್ಮೂಲನೆಗೆ ಕಫ ಪರೀಕ್ಷೆ ಪ್ರಮಾಣ ಹೆಚ್ಚಿಸಿ: ಡಿಸಿ ಪವನ್‍ಕುಮಾರ್ ಮಾಲಪಾಟಿ

0
24

ಬಳ್ಳಾರಿ.ಜು.12 :ಜಿಲ್ಲೆಯ ಎಲ್ಲಾ ತಾಲೂಕಿನ ಆಸ್ಪತ್ರೆಗಳಲ್ಲಿ ಕಫ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಜಿಲ್ಲೆಯಲ್ಲಿ ಕ್ಷಯರೋಗ ನಿರ್ಮೂಲನೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಬುಧವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ಷಯ ವೇದಿಕೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಸ್ಪತ್ರೆಗಳಿಗೆ ರೋಗ ಲಕ್ಷಣವಿರುವವರು ಬಂದಾಗ ಲ್ಯಾಬ್ ಟೆಕ್ನಿಷಿಯನ್‍ಗಳು ಕಫ ಪರೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು. ನಿಗದಿತ ಗುರಿ ತಲುಪಲು ಹೆಚ್ಚುವರಿಯಾಗಿಯೂ ಪರೀಕ್ಷೆ ಕೈಗೊಳ್ಳುವಂತೆ ವೈದ್ಯರು ಪ್ರಯೋಗಾಲಯ ತಜ್ಞರಿಗೆ ಸೂಚಿಸಬೇಕು ಎಂದರು.
ಕ್ಷಯರೋಗಿಗಳನ್ನು ಗುರುತಿಸಿ ಅವರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಮತ್ತು ಔಷದೋಪಚಾರ ಕುರಿತು ಹೆಚ್ಚು ಸೂಕ್ತ ಸಲಹೆಗಳನ್ನು ನೀಡಬೇಕು. ಕ್ಷಯರೋಗದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಬಳ್ಳಾರಿ ನಗರದ ತಾರನಾಥ ಆಸ್ಪತ್ರೆಯಲ್ಲಿ ಪ್ರತಿ ದಿನ 300 ರಿಂದ 350 ಜನರಿಗೆ ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ 5 ರಿಂದ 10 ಜನರಿಗೆ ಕಫ ಇರುವುದು ಕಂಡುಬರುತ್ತದೆ. ಇವರಿಗೆ ಅಗತ್ಯಾನುಸಾರ ಹೆಚ್ಚಿನ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆಯ ವೈದ್ಯರು ಸಭೆಗೆ ಮಾಹಿತಿ ನೀಡಿದರು.
ಕುರುಗೋಡು ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲ್ಯಾಬ್ ಟೆಕ್ನಿಷಿಯನ್ಸ್‍ಗಳ ಕೊರತೆಯಿದ್ದು, ಕಫ ಪರೀಕ್ಷೆ ಕೈಗೊಳ್ಳುವಲ್ಲಿ ವಿಳಂಬವಾಗುತ್ತಿದೆ. ಇದರಿಂದ ತಾಲೂಕಿನ ಶೇಕಡವಾರು ಗುರಿ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್.ಜನಾರ್ಧನ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here