ಕೊಟ್ಟೂರಿನ ಜನತೆಗೆ ಗುಡ್​ ನ್ಯೂಸ್​..! ‘ನಮ್ಮ ಕ್ಲಿನಿಕ್’ ಸೇವೆ ಉದ್ಘಾಟನೆ: ಶಾಸಕ ಕೆ.ನೇಮಿರಾಜ್ ನಾಯ್ಕ್

0
416

ಕೊಟ್ಟೂರು: ದಿನಗೂಲಿ ಕಾರ್ಮಿಕರಿಗೆ ಹಾಗೂ ಬಡ ರೋಗಿಗಳಿಗೆ ಸಮಾಜದ ಇತರ ದುರ್ಬಲ ವರ್ಗದವರಿಗೆ ತ್ವರಿತ ರೀತಿಯಲ್ಲಿ ಆರೋಗ್ಯ ಸೇವೆ ನೀಡಬೇಕು ಎಂಬುವ ದೃಷ್ಟಿಯಿಂದ ನಮ್ಮ ಕ್ಲಿನಿಕ್ ಆರಂಭವಾಗಿದೆ. ಈ ನಮ್ಮ ಕ್ಲಿನಿಕ್ ನಲ್ಲಿ 12 ವಿವಿಧ ಆರೋಗ್ಯ ಸೇವೆ ದೊರೆಯಲಿದೆ ಎಂದು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ನೇಮಿರಾಜ್ ನಾಯ್ಕ್ ಹೇಳಿದರು.
ಈ ಕಾರ್ಯಕ್ರಮದ ಪ್ರಸ್ತಾವಿಕ ನುಡಿಯನ್ನು ಜಂಬಯ್ಯ ನಡೆಸಿಕೊಟ್ಟರು.

ಪಟ್ಟಣದ ಹರಪನಹಳ್ಳಿ ರಸ್ತೆಯಲ್ಲಿ ಇರುವ ಪಟ್ಟಣ ಪಂಚಾಯಿತಿ ಕಚೇರಿಯ ಹಿಂಭಾಗದಲ್ಲಿ “ನಮ್ಮ ಕ್ಲಿನಿಕ್ ” ಆರಂಭವಾಗಿದೆ. ಈ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆಯಿಂದ ಹಮ್ಮಿಕೊಳ್ಳಲಾಗಿತ್ತು. ನಮ್ಮ ಕ್ಲಿನಿಕ್ ಕಾರ್ಯಕ್ರಮದ ಶಾಸಕ ಕೆ ನೇಮಿರಾಜ್ ನಾಯ್ಕ್ ಉದ್ಘಾಟಿಸಿ ಮಾತನಾಡಿದರು ನಮ್ಮ ಕ್ಲಿನಿಕ್ ನಿಂದ ಯಾವ ಯಾವ ಚಿಕಿತ್ಸೆ ಸಿಗುತ್ತೆ ಎಂದರೆ ಗರ್ಭಿಣಿಯರ ತಪಾಸಣೆ, ಡಿಪಿ ,ಶುಗರ್, ಪರೀಕ್ಷೆ, ನವಜಾತ ಶಿಶುಗಳ ಆರೈಕೆ, ಆರೋಗ್ಯ ಕಾಳಜಿ ಇನ್ನೂ 12 ವಿವಿಧ ಆರೋಗ್ಯ ಸೇವೆ ದೊರೆಯಲಿದೆ. ಪ್ರತಿ ನಮ್ಮ ಕ್ಲಿನಿಕ್ ನಲ್ಲಿ ಒಬ್ಬ ಆಡಳಿತ ಅಧಿಕಾರಿ ನರ್ಸ್ ಡಿ ಗ್ರೂಪ್ ಸಿಬ್ಬಂದಿ ಇರುತ್ತಾರೆ. ನಮ್ಮ ಕ್ಲಿನಿಕ್ ಪ್ರತಿಯೊಂದು ಹಳ್ಳಿ ಹಳ್ಳಿಗೂ ಈ ಸೌಲಭ್ಯ ಜನರು ಪಡೆಯಬೇಕು ಎಂದರು.

ನಮ್ಮ ಕ್ಲಿನಿಕ್ ಎಂದರೇನು? ಆರೋಗ್ಯ ಸೇವೆಗಳು

ಕೊಳಗೇರಿ ನಿವಾಸಿಗಳು, ದಿನಗೂಲಿ ಕಾರ್ಮಿಕರು ಮತ್ತು ಸಮಾಜದಲ್ಲಿರುವ ಇತರ ದುರ್ಬಲ ವರ್ಗಗಳಿಗೆ ಸುಲಭವಾಗಿ ವೈದ್ಯಕೀಯ ಸೇವೆ ದೊರಕಿಸಬೇಕು ಎನ್ನುವ ದೃಷ್ಟಿಯಿಂದ ನಮ್ಮ ಕ್ಲಿನಿಕ್ ಗಳು ಕಾರ್ಯಾರಂಭ ಮಾಡುತ್ತಿವೆ. ಪ್ರತಿ ನಮ್ಮ ಕ್ಲಿನಿಕ್ 10 ರಿಂದ 20 ಸಾವಿರ ಜನರಿಗೆ ಸೇವೆ ಒದಗಿಸಲಿದೆ.

ನಮ್ಮ ಕ್ಲಿನಿಕ್ ಗಳಲ್ಲಿ 12 ರೀತಿಯ ವೈದ್ಯಕೀಯ ಸೇವೆಗಳು ಲಭ್ಯವಿದೆ. ಪ್ರತಿ ನಮ್ಮ ಕ್ಲಿನಿಕ್ ನಲ್ಲಿ ವೈದ್ಯಕೀಯ ಅಧಿಕಾರಿ, ನರ್ಸ್, ಲ್ಯಾಬ್ ಟೆಕ್ನೀಷಿಯನ್ ಮತ್ತು ಗ್ರೂಪ್ ಡಿ ನೌಕರ ಇರುತ್ತಾರೆ. ಇಲ್ಲಿ ಲಭ್ಯವಿರುವ 12 ಸೇವೆಗಳಲ್ಲಿ ಗರ್ಭಿಣಿಯರ ತಪಾಸಣೆ ಮತ್ತು ಆರೈಕೆ, ನವಜಾತ ಶಿಶುಗಳ ಆರೈಕೆ, ಶಿಶುಗಳಿಗೆ ಚಿಕಿತ್ಸೆ, ಮಕ್ಕಳು ಮತ್ತು ಹದಿಹರೆಯದವರ ಆರೋಗ್ಯ ಕಾಳಜಿ, ಲಸಿಕೆ ಸೇವೆ, ಕುಟುಂಬ ನಿಯಂತ್ರಣ, ಸೋಂಕು ರೋಗಗಳ ನಿರ್ವಹಣೆ, ಸಕ್ಕರೆ ಕಾಯಿಲೆ, ರಕ್ತದೊತ್ತಡ ನಿರ್ವಹಣೆ, ಸಣ್ಣಪುಟ್ಟ ಗಾಯಗಳಿಗೆ ಆರೈಕೆ, ಮರುಕಳಿಸುವ ಕಾಯಿಲೆಗಳು ಸೇರಿವೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಸಮಸ್ಯೆಗಳಿಗೆ ಸಂಬಂಧಿಸಿದ ಆಸ್ಪತ್ರೆಗಳಿಗೆ ರೆಫರಲ್ ಸೇವೆಗಳನ್ನು ಉಚಿತವಾಗಿ ಒದಗಿಸಲಾಗುವುದು.

ವಯೋವೃದ್ಧರ ಆರೈಕೆ, ತುರ್ತು ವೈದ್ಯಕೀಯ ಸೇವೆಗಳು, ಆರೋಗ್ಯ ತಪಾಸಣೆ ಮತ್ತು ಔಷಧಿಗಳನ್ನು ಸಂಪೂರ್ಣ ಉಚಿತವಾಗಿ ಒದಗಿಸಲಾಗುವುದು. 14 ಬಗೆಯ ಲ್ಯಾಬ್ ಟೆಸ್ಟ್ ಗಳು, ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಲು ಸಲಹೆಗಳು ಉಚಿತವಾಗಿ ದೊರೆಯುತ್ತವೆ. ಸೋಮವಾರದಿಂದ ಶನಿವಾರವರೆಗೆ ಬೆಳಿಗ್ಗೆ 9 ರಿಂದ ಸಂಜೆ 4.30ರವರೆಗೆ ನಮ್ಮ ಕ್ಲಿನಿಕ್ ಗಳು ಕಾರ್ಯನಿರ್ವಹಿಸುತ್ತವೆ. ಜನ ವಸತಿಗಳಿಗೆ ಹತ್ತಿರದಲ್ಲಿ ಕ್ಲಿನಿಕ್ ಗಳು ಆರಂಭಿಸುವುದರಿಂದ ಜನರಿಗೆ ಆರೋಗ್ಯ ಸೇವೆಗಳು ಸುಲಭವಾಗಿ ಸಿಗಲು ಸಾಧ್ಯವಾಗುತ್ತದೆ. ಅಷ್ಟೇ ಅಲ್ಲ, ಸರ್ಕಾರಿ ಆಸ್ಪತ್ರೆಗಳ ಮೇಲಿರುವ ಒತ್ತಡವೂ ಕಡಿಮೆಯಾಗುತ್ತದೆ.

ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲಾ ಡಿ ಎಚ್ ಓ ಡಾಕ್ಟರ್ ಸಲೀಂ, ತಾಲೂಕು ದಂಡಾಧಿಕಾರಿಗಳಾದ ಅಮರೇಶ್ ಜಾಲಹಳ್ಳಿ, ಕೊಟ್ಟೂರು ಮತ್ತು ಕೂಡ್ಲಿಗಿ ಟಿ.ಎಚ್.ಒ ಡಾ. ಪ್ರದೀಪ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾದ ಜಗದೀಶ್ ನಾಯಕ್, ಜಿಲ್ಲಾ ಮಹಿಳಾ ಅಧಿಕಾರಿ,ಮುಖಂಡರಾದ ಬಾದಾಮಿ ಮೃತ್ಯುಂಜಯ, ಪ.ಪಂ. ಸದಸ್ಯರಾದ ಬಾವಿಕಟ್ಟಿ ಶಿವನಾಂದ, ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here