ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂಗೀ ನಿಯಂತ್ರಣಕ್ಕೆ ಕೈಜೋಡಿಸಿ; ಪುರಸಭೆ ಸದಸ್ಯೆ ಜ್ಯೋತಿ,

0
264

ಸಂಡೂರು:ಅ: 05:-ತಾಲೂಕಿನ ತೋರಣಗಲ್ಲು ರೈಲ್ವೆ ನಿಲ್ದಾಣ ಗ್ರಾಮದ ಅಂಕಲಮ್ಮ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕುರಿತು ಜಾಗೃತಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕುರೇಕುಪ್ಪ ಪುರಸಭೆ ಸದಸ್ಯೆ ಶ್ರೀಮತಿ ಜ್ಯೋತಿ ಅವರು ವಾರ್ಡುಗಳಲ್ಲಿ ಸೊಳ್ಳೆಗಳ ಹಾವಳಿ ಇದೆ, ರೋಗಗಳ ತಡೆಯಲು ಸಾರ್ವಜನಿಕ ಸಹಕಾರ ಅಗತ್ಯ ಎಂದು ತಿಳಿಸಿದರು,

ಈ ಸಂದರ್ಭದಲ್ಲಿ ಗ್ರಾಮದ ಮುಖಂಡ ಪುಲಿಕೊಂಡ ಅವರು ಮಾತನಾಡಿ ಜನರಿಗೆ ರೋಗಗಳ ಬಗ್ಗೆ ಅರಿವು ಕಡಿಮೆ ಇದೆ, ಜಾಗೃತಿ ಕಾರ್ಯಕ್ರಮಗಳು ಜರುಗಲಿ, ಸ್ವಚ್ಛತೆಗೆ ಹೆಚ್ಚು ಗಮನ ಕೊಡಲಿ, ಚರಂಡಿಯಲ್ಲಿ ಕಸ ಹಾಕುವುದು ಜನರು ಬಿಡಬೇಕಿದೆ, ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವಂತೆ ಸೂಚಿಸಿದರು,

ಈ ಸಂದರ್ಭದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ ಮಾತನಾಡಿ ಮಲೇರಿಯಾ, ಡೆಂಗೀ,ಚಿಕೂನ್ ಗುನ್ಯಾ, ಮೆದುಳು ಜ್ವರ,ಆನೆಕಾಲು ರೋಗಗಳನ್ನು ನಿಯಂತ್ರಣ ಮಾಡುವುದರೊಂದಿಗೆ ಕ್ಷಯ ಮುಕ್ತ ಮಾಡುವ ಗುರಿಯನ್ನು ಇಲಾಖೆ ಹೊಂದಿದೆ, ಸೊಳ್ಳೆಗಳ ನಿಯಂತ್ರಣಕ್ಕೆ ಕೀಟನಾಶಕ ಸಿಂಪಡಣೆ ಕಾರ್ಯ ನಡೆದಿದೆ,ಕ್ಷಯರೋಗ ಪತ್ತೆ ಹಚ್ಚಲು ಲಕ್ಷಣಗಳು ಇರುವವರ ಕಫ ಪರೀಕ್ಷೆ ಮಾಡಿಸಲಾಗುತ್ತಿದೆ ಇಲಾಖೆಯೊಂದಿಗೆ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಹಕಾರ ನೀಡ ಬೇಕಿದೆ, ಎಲ್ಲಾ ಮನೆಗಳಿಗೆ ಕೀಟನಾಶಕ ಸಿಂಪಡಣೆ ಮಾಡಿಸುವಂತೆ ಮನವಿ ಮಾಡಿದರು ಕಾರ್ಯಕ್ರಮವನ್ನು ಆಪ್ತ ಸಮಾಲೋಚಕ ಪ್ರಶಾಂತ್ ಕುಮಾರ್ ನಡೆಸಿಕೊಟ್ಟರು,

ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಕೀಲ್ ಅಹಮದ್, ಕೆ.ಹೆಚ್.ಪಿ.ಟಿ ಮೇಲ್ವಿಚಾರಕಿ ಆಶಾ, ಉಮಾದೇವಿ, ಆಶಾ ಕಾರ್ಯಕರ್ತೆ ವಿಜಯಶಾಂತಿ,ಶ್ರೀದೇವಿ,ಕಾವೇರಿ,ಆಶಾ,ಪದ್ಮಾ,ವೆಂಕಟಲಕ್ಷ್ಮಿ,ರೇಖಾ, ಇತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here